ಕುಂಬ್ರ: ಬಸ್- ಕಾರು ಮಧ್ಯೆ ಅಪಘಾತ

ಪುತ್ತೂರು, ಜ.29: ಕೆಎಸ್ಸಾರ್ಟಿಸಿ ಐರಾವತ ಬಸ್ ಹಾಗೂ ಕಾರೊಂದರ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಶನಿವಾರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ.
ಸುಳ್ಯದ ಕಡೆಯಿಂದ ಆಗಮಿಸುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ಸು ಮತ್ತು ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಆದರೆ ಕಾರಿನ ಮುಂಭಾಗ ಜಖಂಗೊಂಡಿದೆ.
ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Next Story