Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಧ್ಯಮಗಳ ಮೇಲಿನ ಸಂಶಯ ನಿವಾರಣೆ ಅಗತ್ಯ:...

ಮಾಧ್ಯಮಗಳ ಮೇಲಿನ ಸಂಶಯ ನಿವಾರಣೆ ಅಗತ್ಯ: ನ್ಯಾ. ಸಂತೋಷ್ ಹೆಗಡೆ

29 Jan 2023 11:31 PM IST
share
ಮಾಧ್ಯಮಗಳ ಮೇಲಿನ ಸಂಶಯ ನಿವಾರಣೆ ಅಗತ್ಯ: ನ್ಯಾ. ಸಂತೋಷ್ ಹೆಗಡೆ

ಬೆಂಗಳೂರು: ಇಂದಿನ ಪರಿಸ್ಥಿತಿಯಲ್ಲಿ ಮಾಧ್ಯಮ ಕ್ಷೇತ್ರದ ಮೇಲೂ ಸಂಶಯವಿದ್ದು, ಇದನ್ನು ನಿವಾರಿಸಲು ಪತ್ರಿಕಾರಂಗ ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಸಲಹೆ ಮಾಡಿದ್ದಾರೆ.

ರವಿವಾರ ನಗರದ ಚಾಮರಾಜಪೇಟೆಯ ಕಸಾಪ ಸಭಾಂಗಣದಲ್ಲಿ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್’ ವತಿಯಿಂದ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಾಧ್ಯಮ ಕ್ಷೇತ್ರ ಅಗಾಧವಾಗಿ ಬೆಳೆಯುತ್ತಿದ್ದು, ಮುದ್ರಣ, ವಿದ್ಯುನ್ಮಾನ, ಡಿಜಿಟಲ್ ಎಂಬ ವಲಯಗಳಾಗಿವೆ. ಆದರೆ ಎಲ್ಲ ಮಾಧ್ಯಮಗಳ ಒಟ್ಟಾರೆ ಆಶಯ ಸಮಾಜದಲ್ಲಿ ಮೌಲ್ಯಗಳನ್ನು ನಿರ್ಮಿಸುವ, ಸೌಹಾರ್ದತೆಯನ್ನು ಮೂಡಿಸುವ ಕೆಲಸ ಮಾಡಬೇಕು ಎಂದರು.

ಮಾಧ್ಯಮ ರಂಗ ಸಂವಿಧಾನದಿಂದ ಸೃಷ್ಟಿಯಾದ ಸಂಸ್ಥೆಯಲ್ಲ, ಆದರೆ ನ್ಯಾಯಾಂಗ, ಕಾಯಾರ್ಂಗ, ಶಾಸಕಾಂಗವನ್ನು ಸುಸ್ಥಿತಿಯಲ್ಲಿಡಲು ಮಾಧ್ಯಮಗಳ ಪಾತ್ರ ಅನನ್ಯವಾಗಿದೆ. ಆಮಿಷಗಳಿಗೆ ಒಳಗಾಗಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರಬಾರದು. ಡಿಜಿಟಲ್ ಮಾಧ್ಯಮದಲ್ಲೂ ಸಾಕಷ್ಟು ಸಮಸ್ಯೆಗಳಿದ್ದು, ಇವುಗಳನ್ನು ನಿವಾರಿಸುವ ಕೆಲಸ ಆಗಬೇಕು. ಹುಟ್ಟುವಾಗ ಮುನುಷ್ಯನಾಗದಿದ್ದರೂ, ಬದುಕಿ ಬಾಳಿ ಸಾಯುವಾಗಲಾದರೂ ಮಾನವೀಯತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಪತ್ರಕರ್ತ ಪ್ರಸಾದ್ ನಾಯಕ್ ಮಾತನಾಡಿ, ಡಿಜಿಟಲ್ ಮಾಧ್ಯಮ ನಿರೀಕ್ಷೆಗೂ ಮೀರಿ ಬೆಳವಣಿಗೆಯಾಗುತ್ತಿದೆ. ಅದೇ ರೀತಿ ಸವಾಲುಗಳು ಹೆಚ್ಚಾಗುತ್ತಿವೆ. ಆದರೆ ಡಿಜಿಟಲ್ ಮಾಧ್ಯಮಕ್ಕೆ ಇನ್ನೂ ಮಾನ್ಯತೆ ಸಿಕ್ಕಿಲ್ಲ. ಡಿಜಿಟಲ್ ಮಾಧ್ಯಮ ನೀತಿಯಲ್ಲಿ ಸುಧಾರಣೆಯಾಗಬೇಕಾಗಿದ್ದು, ಅಗತ್ಯ ನಿಯಂತ್ರಣ ವ್ಯವಸ್ಥೆಯೂ ಬೇಕಾಗಿದೆ ಎಂದರು.

ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮಾತನಾಡಿ, ಡಿಜಿಟಲ್ ಮಾಧ್ಯಮವನ್ನು ಬಳಸಿಕೊಂಡು ನಟ-ನಟಿಯರ ನಡುವೆ ಜಟಾಪಟಿ ತಂದಿಡುವ, ಸಾಮಾಜಿಕ ಮಾಧ್ಯಮಗಳಲ್ಲಿ ಕಿಚ್ಚು ಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ವಿದೇಶಗಳಲ್ಲಿ ಕುಳಿತು ಇಂತಹ ಸಂಚು, ಷಡ್ಯಂತ್ರ ರೂಪಿಸಲಾಗುತ್ತಿದ್ದು, ರೀತಿಯ ಸಮಸ್ಯೆಗಳ ನಿವಾರಣೆಗೆ ಡಿಜಿಟಲ್ ಮಾಧ್ಯಮ ವಲಯ ಮುಂದಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ವತಿಯಿಂದ ‘ವಾರ್ತಾಭಾರತಿ’ ಪತ್ರಿಕೆಯ ಬೆಂಗಳೂರು ಆವೃತ್ತಿಯ ಬ್ಯುರೋ ಚೀಫ್ ಪ್ರಕಾಶ್ ಸಿ. ರಾಮಜೋಗಿಹಳ್ಳಿ, ಹಿರಿಯ ಪತ್ರಕರ್ತ ಜನಾರ್ಧನಾಚಾರಿ ಹಾಗೂ ಕರ್ನಾಟಕ ಮಹಿಳಾ ಪತ್ರಕರ್ತರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ಅವರಿಗೆ ‘ಮಾಧ್ಯಮ ಸೇವಾ ರತ್ನ’ ಪ್ರಶಸ್ತಿ ಹಾಗೂ ಚಲನಚಿತ್ರದಲ್ಲಿ ಶ್ರಮಿಸಿದ ಸಾಧಕರಿಗೆ ‘ಪೋಷಕ ಕಲಾ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದೇ ವೇಳೆ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಬ್ಯಾಗ್, ಕಲಿಕಾ ಸಾಮಗ್ರಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಚಲನಚಿತ್ರ ನಟಿ ಅನು ಅಯ್ಯಪ್ಪ, ಅಸೋಸಿಯೇಷನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ, ಪ್ರಧಾನ ಕಾರ್ಯದರ್ಶಿ ನಂಜುಂಡಪ್ಪ ವಿ., ಸಮಾಜ ಸೇವಕ ವಿಶ್ವನಾಥ್ ಎ.ಎ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
Next Story
X