ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಕೋ. ಶಿವಾನಂದ ಕಾರಂತ ಆಯ್ಕೆ

ಕುಂದಾಪುರ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಫೆ.19ರಂದು ನಡೆಯುವ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ, ಅಂಕಣಕಾರ, ರಂಗ ನಿರ್ದೇಶಕ, ನಿವೃತ್ತ ಪ್ರಾಧ್ಯಾಪಕ ಕೋ. ಶಿವಾನಂದ ಕಾರಂತ ಅವರನ್ನು ಆಯ್ಕೆ ಮಾಡಲಾಗಿದೆ.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ರವಿವಾರ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಕೋ. ಶಿವಾನಂದ ಕಾರಂತ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಉಮೇಶ್ ಪುತ್ರನ್ ತಿಳಿಸಿದ್ದಾರೆ.
ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರ ಕೋಟ, ಕೋಶಾಧಿಕಾರಿ ಮನೋಹರ ಪಿ., ತಾಲೂಕು ಪದಾಧಿಕಾರಿಗಳಾದ ದಿನಕರ ಶೆಟ್ಟಿ, ಅಕ್ಷತಾ ಗಿರೀಶ್ ಐತಾಳ್, ಕೆ.ಎಸ್.ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.
Next Story