Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಸವ ವನದಲ್ಲಿದ್ದ ಬಸವೇಶ್ವರರ ಪುತ್ಥಳಿ...

ಬಸವ ವನದಲ್ಲಿದ್ದ ಬಸವೇಶ್ವರರ ಪುತ್ಥಳಿ ತೆರವು

31 Jan 2023 12:21 PM IST
share
ಬಸವ ವನದಲ್ಲಿದ್ದ ಬಸವೇಶ್ವರರ ಪುತ್ಥಳಿ ತೆರವು

ಹುಬ್ಬಳ್ಳಿ: ಫ್ಲೈಓವರ್ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಬಸವ ವನದಲ್ಲಿದ್ದ ಬಸವೇಶ್ವರರ ಪುತ್ಥಳಿಯನ್ನು ಸೋಮವಾರ ರಾತ್ರಿ ತೆರವುಗೊಳಿಸಿರುವುದಾಗಿ ವರದಿಯಾಗಿದೆ.

ಒಂದು ಕ್ರೇನ್ ಮತ್ತು ಒಂದು ಎರಡು ಜೆಸಿಬಿಗಳಿಂದ ರಾತ್ರಿ ಹತ್ತು ಗಂಟೆಗೆ ಆರಂಭವಾರ ತೆರವು ಕಾರ್ಯಾಚರಣೆಯು ತಡರಾತ್ರಿಯವರೆಗೂ ನಡೆಯಿತು. ಫ್ಲೈಓವರ್ ಬಸವವನದ ಮೇಲ್ಭಾಗದಲ್ಲಿಯೇ ನಿರ್ಮಾಣವಾಗುವುದರಿಂದ ಪುತ್ಥಳಿಗೆ ಧಕ್ಕೆ ಆಗುವ ಸಾಧ್ಯತೆ ಇರುವುದರಿಂದ ಪುತ್ಥಳಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು.

ಹಲವು ದಶಕಗಳಿಂದ ನಗರದ ಹೃದಯ ಭಾಗದ ಬಸವವನದಲ್ಲಿದ್ದ ಬಸವೇಶ್ವರ ಪುತ್ಥಳಿ ಪ್ರಮುಖ ಕೇಂದ್ರವಾಗಿತ್ತು. ಫ್ಲೈಓವರ್ ನಿರ್ಮಾಣ ಹಿನ್ನೆಲೆಯಲ್ಲಿ ತೆರವುಗೊಳಿಸಿದ್ದಕ್ಕೆ ಅನೇಕರು ಆಕ್ಷೇಪ, ಆಕ್ರೋಶ ವ್ತಕ್ತಪಡಿಸಿದ್ದಾರೆ.

"ಲಿಂಗಾಯತ ಸಮಾಜದವರ ಅಭಿಪ್ರಾಯ ಪಡೆಯದೇ ತೆರವು ಮಾಡಲಾಗಿದೆ. ಕೆಲವು ಜನರನ್ನು ತಮಗೆ ಬೇಕಾದವರನ್ನು ಈ ಕುರಿತ ಸಭೆ ಕರೆದಿದ್ದರು. ಒಪ್ಪಿಗೆ ಪಡೆದಿದ್ದೇವೆ ಎಂದು ಅಧಿಕಾರಿಗಳು, ಗುತ್ತಿಗೆದಾರರು ಹೇಳುತ್ತಿದ್ದಾರೆ. ಆದರೆ ಸಮಾಜದವರ ಒಪ್ಪಿಗೆ ಇಲ್ಲ ಎಂದು ಕರವೇ ರಾಜ್ಯ ಸಂಘಟನಾ ಮುಖಂಡ ಹಾಗೂ ಲಿಂಗಾಯತ ಸಮಾಜದ ಸಚಿನ್ ಗಾಣಿಗೇರ ತೆರವು ಕಾರ್ಯಾಚರಣೆ ಸ್ಥಳದಲ್ಲಿ ಆಕ್ಷೇಪ ವ್ಯಕ್ರಪಡಿಸಿದರು.

ಬಸವೇಶ್ವರ ಪುತ್ಥಳಿ ಮೇಲೆಯೇ ಫ್ಲೈಓವರ್ ಮಾಡಬೇಕಾಗಿತ್ತೇ? ಪಕ್ಕದಲ್ಲಿ ಮಾಡಲು ಸಾಧ್ಯ ಇರಲಿಲ್ಲವೇ. ಉದ್ದೇಶಪೂರ್ವಕವಾಗಿ ತೆರವು ಮಾಡಲಾಗುತ್ತಿದೆ ಎಂದು ಅವರು ದೂರಿದರು.

ತಾತ್ಕಾಲಿಕ ಸ್ಥಳಾಂತರ: ಬಸವೇಶ್ವರ ಪುತ್ಥಳಿಯನ್ನು ತಾತ್ಕಾಲಿಕವಾಗಿ ಇಂದಿರಾ ಗ್ಲಾಸ್ ಆವರಣಕ್ಕೆ ಸ್ಥಳಾಂತರಿಸುತ್ತಿದ್ದೇವೆ. ಈ ಕುರಿತು ಸಾರ್ವಜನಿಕ ಸಭೆಯನ್ನು ಮೇಲಧಿಕಾರಿಗಳು, ಜನಪ್ರತಿನಿಧಿಗಳು ನಡೆಸಿ ಒಪ್ಪಿಗೆ ಪಡೆಯಲಾಗಿದೆ. ಫ್ಲೈಓವರ್ ಕಾಮಗಾರಿ ಮುಗಿದ ಬಳಿಕ ಮತ್ತೆ ಬಸವೇಶ್ವರ ಪುತ್ಥಳಿ ಬಸವವನದ ಮೂಲ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುವುದು. ಲ್ಯಾಂಡ್ ಸ್ಕೇಪ್ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಇದು ತಾತ್ಕಾಲಿಕ ಸ್ಥಳಾಂತರ ಅಷ್ಟೇ ಎಂದು ತೆರವು ಕಾರ್ಯಾಚರಣೆ ಉಸ್ತುವಾರಿಯಲ್ಲಿದ್ದ ಲೋಕೋಪಯೋಗಿ ಇಂಜಿನಿಯರ್ ಗಂಗಾಧರ್ ತಿಳಿಸಿದರು.

share
Next Story
X