Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಕಿಸಾನ್ ಮೋರ್ಚಾ...

ಬಿಜೆಪಿ ಕಿಸಾನ್ ಮೋರ್ಚಾ ಕಾರ್ಯಕಾರಿಣಿಯಲ್ಲಿ ಕನ್ನಡ ಮಾಯ: ಜೆಡಿಎಸ್‌ ಆಕ್ಷೇಪ

31 Jan 2023 3:27 PM IST
share
ಬಿಜೆಪಿ ಕಿಸಾನ್ ಮೋರ್ಚಾ ಕಾರ್ಯಕಾರಿಣಿಯಲ್ಲಿ ಕನ್ನಡ ಮಾಯ: ಜೆಡಿಎಸ್‌ ಆಕ್ಷೇಪ

ಬೆಂಗಳೂರು: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಿಸಾನ್ ಮೋರ್ಚಾ ಕಾರ್ಯಕಾರಣಿ ಸಭೆಯ ವೇದಿಕೆಯಲ್ಲಿ ದುರ್ಬೀನು ಹಾಕಿ ಹುಡುಕಿದರೂ ಕನ್ನಡ ಸಿಗದಿರುವುದು ನಾಚಿಕೆಗೇಡಿನ‌ ಸಂಗತಿ. ನಮ್ಮ ರಾಜ್ಯದ ಭಾಗದಲ್ಲಿ ನಡೆಯುವ ಸಭೆಯಲ್ಲಿ ಒಂದು ಸಾಲು ಕನ್ನಡ ಬಳಸದೆ ಒಕ್ಕೂಟ ವ್ಯವಸ್ಥೆಯ ಗೌರವವನ್ನು ಗಾಳಿಗೆ ತೂರಿರುವುದು ಖಂಡನಾರ್ಹ ಎಂದು ಜೆಡಿಎಸ್  @JanataDal_S ಆಕ್ಷೇಪ ವ್ಯಕ್ತಪಡಿಸಿದೆ.  

ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಜೆಡಿಎಸ್‌,  'ದೆಹಲಿಯ ಹೈಕಮಾಂಡ್ ನ ಓಲೈಸಲು ಇಂತಹ ಆತ್ಮಗೌರವವಿಲ್ಲದ ನಡೆಯನ್ನು ಇನ್ನೂ ಎಷ್ಟು ದಿನ ಮುಂದುವರಿಸುತ್ತೀರಿ, ಸಿಟಿ ರವಿ ಅವರೆ? ಕನ್ನಡ ಭಾಷೆ, ಕನ್ನಡ ಜಲ, ಕನ್ನಡಿಗರ ಬದುಕು, ಕರುನಾಡ ಏಳ್ಗೆ ಎಲ್ಲದರ ಬಗ್ಗೆಯೂ ಇಷ್ಟು ತಾತ್ಸಾರದ ನಡೆ ದುರಭಿಮಾನದಿಂದ ಕೂಡಿದೆ. ಹೈಕಮಾಂಡ್ ಗುಲಾಮಿ ಪಕ್ಷ ಎನ್ನಲು‌ ಇದಕ್ಕಿಂತ ಹೆಚ್ಚೇನು ಬೇಕು?' ಎಂದು ಕಿಡಿಕಾರಿದೆ. 

"ಕನ್ನಡ ಎನೆ ಕುಣಿದಾಡುವುದೆನ್ನೆದೆ, ಕನ್ನಡ ಎನೆ ಕಿವಿ ನಿಮಿರುವುದು" ಎಂದ ಕುವೆಂಪು ಅವರ ನಾಡಿನ ನಮಗೆ ಕಿಂಚಿತ್ತಾದರೂ ಸ್ವಾಭಿಮಾನ ಇರಬೇಕು. ನಿಮ್ಮ ಕನ್ನಡ ವಿರೋಧಿ ನಡೆಗೆ ಜನತೆ ಸೂಕ್ತ ಉತ್ತರ ನೀಡುತ್ತಾರೆ. ರಾಜಕೀಯ ಲಾಭ-ನಷ್ಟದ ಕಾರಣಕ್ಕೆ ನಮ್ಮ ಸ್ವಾಭಿಮಾನವನ್ನು ಅಡ ಇಡುವ ಕೆಲಸ ಘನತೆ ತರುವಂತದಲ್ಲ ಎಂದು ಜೆಡಿಎಸ್ 
@JanataDal_S ಹೇಳಿದೆ. 
 

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ @BJP4Karnataka ಕಿಸಾನ್ ಮೋರ್ಚಾ ಕಾರ್ಯಕಾರಣಿ ಸಭೆಯ ವೇದಿಕೆಯಲ್ಲಿ ದುರ್ಬೀನು ಹಾಕಿ ಹುಡುಕಿದರೂ ಕನ್ನಡ ಸಿಗದಿರುವುದು ನಾಚಿಕೆಗೇಡಿನ‌ ಸಂಗತಿ. ನಮ್ಮ ರಾಜ್ಯದ ಭಾಗದಲ್ಲಿ ನಡೆಯುವ ಸಭೆಯಲ್ಲಿ ಒಂದು ಸಾಲು ಕನ್ನಡ ಬಳಸದೆ ಒಕ್ಕೂಟ ವ್ಯವಸ್ಥೆಯ ಗೌರವವನ್ನು ಗಾಳಿಗೆ ತೂರಿರುವುದು ಖಂಡನಾರ್ಹ.
1/3 pic.twitter.com/qvWNWAOSMq

— Janata Dal Secular (@JanataDal_S) January 31, 2023
share
Next Story
X