Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜದ ಅಸಮಾನತೆ ತೊಡೆದು ಹಾಕಲು...

ಸಮಾಜದ ಅಸಮಾನತೆ ತೊಡೆದು ಹಾಕಲು ವಿದ್ಯಾರ್ಥಿಗಳು ಶ್ರಮಿಸಬೇಕಿದೆ: ನಟ ಚೇತನ್ ಅಹಿಂಸಾ

31 Jan 2023 5:11 PM IST
share
ಸಮಾಜದ ಅಸಮಾನತೆ ತೊಡೆದು ಹಾಕಲು ವಿದ್ಯಾರ್ಥಿಗಳು ಶ್ರಮಿಸಬೇಕಿದೆ: ನಟ ಚೇತನ್ ಅಹಿಂಸಾ

ತುಮಕೂರು.ಜ.31:ನಮ್ಮ ಸಮಾಜ ಅಸಮಾನತೆ ಕೂಪವಾಗಿದ್ದು,ಇದನ್ನು ಬದಲಾವಣೆ ಮಾಡುತ್ತಾ ವಿದ್ಯಾರ್ಥಿಗಳು ಆಲೋಚಿಸಬೇಕಾಗಿದೆ ಎಂದು ನಟ ಚೇತನ್ ಅಹಿಂಸಾ ಅಭಿಪ್ರಾಯಪಟ್ಟಿದ್ದಾರೆ.

ತುಮಕೂರು ನಗರದ ಕನ್ನಡಭವನದಲ್ಲಿ ನಟ ಚೇತನ್ ಪೌಂಢೇಷನ್ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಸರಕಾರಿ ಪದವಿ ಕಾಲೇಜಿಗೆ ಕನ್ನಡ ಸಾಹಿತ್ಯ ಪುಸ್ತಕಗಳನ್ನು ಕೊಡುಗೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡುತಿದ್ದ ಅವರು, ಮಹಿಳೆಯರು ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಾರೆ. ಬಟ್ಟೆ ಹೊಗೆಯುತ್ತಾರೆ.ಮಕ್ಕಳ ಪಾಲನೆಯನ್ನು ಮಾಡುತ್ತಾರೆ. ಹೊರಗಡೆಯೂ ದುಡಿಯುತ್ತಾರೆ ಆದರೂ ಅವರ ಈ ಕೆಲಸಗಳಿಗೆ ಬೆಲೆ ಇಲ್ಲವಾಗಿದೆ. ಮಹಿಳೆಯರು ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ನಲುಗುತ್ತಿದ್ದು ಇದರಿಂದ ಹೊರಬರಲು ಹೋರಾಟ ನಡೆಸಬೇಕಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜೊತೆಗೆ ವಿಚಾರ ಸಾಹಿತ್ಯವನ್ನು ಓದಬೇಕು. ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು.ಆ ಮೂಲಕ ಸಮಾಜ ಬದಲಾವಣೆ ಶ್ರಮಿಸಬೇಕು. ಭಗತ್‍ಸಿಂಗ್ ಜೈಲಲ್ಲಿದ್ದಾಗ ಜೈಲಿನಲ್ಲಿ ಗ್ರಂಥಾಲಯ ಇರಬೇಕೆಂದು ಹೇಳಿ ನನಗೆ ಓದಲು ಪುಸ್ತಕಗಳನ್ನು ನೀಡಬೇಕು ಎಂದು ಕೇಳಿದ್ದ.ಹಾಗೆಯೇ ವಿದ್ಯಾರ್ಥಿಗಳು ಅಂಧಕಾರವನ್ನು ಹೋಗಲಾಡಿಸಲು ಮುಂದಾಗಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಬುದ್ದ, ಬಸವಣ್ಣ, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್, ಪೆರಿಯಾರ್ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈ ಮೂಲಕ ಅನ್ಯಾಯದ ವಿರುದ್ಧ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ನಟ ಚೇತನ್ ಪೌಂಢೇಷನ್ ನ ಸಂಸ್ಥಾಪಕ ಹಾಗೂ ಚೇತನ್ ಅವರ ತಂದೆ ವೈದ್ಯ ಡಾ.ಅಮರ್ ಮಾತನಾಡಿ, ಪುಸ್ತಕಗಳು ನಮ್ಮ ಜ್ಞಾನ ವಿಸ್ತರಣೆಗೆ ಸಹಕಾರಿಯಾಗಿವೆ.ಇಳಿ ವಯಸ್ಸಿನಲ್ಲೂ ಅವುಗಳನ್ನು ಓದುತ್ತ ಏಕಾಂಗಿತವನ್ನು ಕಳೆಯುತ್ತವೆ.ವಿದ್ಯಾರ್ಥಿಗಳು ನಮ್ಮ ದೇಹವನ್ನು ದೇವಾಲಯವನ್ನಾಗಿ ಮಾಡಿಕೊಂಡು ಜೀವನ ನಡೆಸಬೇಕು. ಸ್ಥಾವರಕ್ಕೆ ಅಳಿವುಂಟು ಜಂಗಮ್ಮಕ್ಕೆ ಅಳಿವಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಉಜ್ಜಜ್ಜಿ ರಾಜಣ್ಣ, ವಿಮರ್ಶಕ ಡಾ.ರವಿಕುಮಾರ್ ನೀಹ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ,ಮಹಿಳಾ ಸರಕಾರಿ ಪದವಿ ಕಾಲೇಜಿನ ಗ್ರಂಥಪಾಲಕರು ಮಾತನಾಡಿದರು.ವೇದಿಕೆಯಲ್ಲಿ ಮರಿಚನ್ನಮ್ಮ, ರಂಗಧಾಮಯ್ಯ ಮೊದಲಾದವರು ಹಾಜರಿದ್ದರು.ಅತಿಥಿ ಸಹಾಯಕ ಪ್ರಾಧ್ಯಾಪಕ ಜಿ.ಕೆ.ನಾಗಣ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು.

share
Next Story
X