Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಂಬಳಬೆಟ್ಟು: ಜನಪ್ರಿಯ ಸೆಂಟ್ರಲ್ ಸ್ಕೂಲ್...

ಕಂಬಳಬೆಟ್ಟು: ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ನೂತನ ಕಟ್ಟಡ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ

31 Jan 2023 10:24 PM IST
share
ಕಂಬಳಬೆಟ್ಟು: ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ನೂತನ ಕಟ್ಟಡ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ

ಬಂಟ್ವಾಳ: ವೃತ್ತಿಯಲ್ಲಿ ವೈದ್ಯರಾದರೂ‌ ತನ್ನ ಹುಟ್ಟೂರಿನ ಮಕ್ಕಳಿಗೆ ವಿದ್ಯಾಭ್ಯಾಸದ ಬೆಳಕನ್ನು ಚೆಲ್ಲಲು ಹೊರಟ ವಿ.ಕೆ. ಅಬ್ದುಲ್ ಬಶೀರ್ ಅವರ ಪ್ರಯತ್ನ ಶ್ಲಾಘನೀಯ ಎಂದು ಕರ್ನಾಟಕ ನಗರಾಭಿವೃದ್ಧಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಅವರು ಇತ್ತೀಚೆಗೆ ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ವಾರ್ಷಿಕೋತ್ಸವ  ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸುಂದರ ವಾತಾವರಣದಲ್ಲಿ ನಿರ್ಮಾಣ ವಾಗಿರುವ ಈ ಶಾಲೆಗೆ ಉತ್ತಮ ಭವಿಷ್ಯವಿದೆ. ಮುಂದಕ್ಕೆ ಇದೊಂದು ಯುನಿವರ್ಸಿಟಿ ಆಗಿ ಈ ಭಾಗದ ಮಕ್ಕಳ ಬಾಳಿನ ಆಶಾಕಿರಣವಾಗಲಿ. ಪ್ರಯತ್ನ ಪಟ್ಟರೆ ಗುರಿ ಮುಟ್ಟಲು ಸಾಧ್ಯ ಎನ್ನುವುದಕ್ಕೆ ಕಂಬಳಬೆಟ್ಟುವಿನ ಜನಪ್ರೀಯ ಕ್ಯಾಂಪಸ್ ನಲ್ಲಿ ಎರಡು ವರುಷದಲ್ಲಿ ಆದ ಬದಲಾವಣೆಯೇ ಸಾಕ್ಷಿ ಎಂದರು.

ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್  ಮಾತನಾಡಿ, ಈ ಪ್ರದೇಶದಲ್ಲಿರುವ ಜನರಿಗೆ ಇದೊಂದು ಸುವರ್ಣಾವಕಾಶ. ನಮ್ಮ ಊರಿನ ಹೆಸರನ್ನು ಹಾಸನದಲ್ಲಿ ಪಸರಿಸಿದ ಕೀರ್ತಿ ಡಾ. ಅಬ್ದುಲ್ ಬಶೀರ್ ರವರದ್ದಾಗಿದೆ. ಶಿಕ್ಷಣ ಸಂಸ್ಥೆಯ ಹುಟ್ಟು ದೇಶಪ್ರೇಮದ ಪ್ರತೀಕ. ಭಾರತ ದೇಶ ಬಲಿಷ್ಟವಾಗಲು ಗ್ರಾಮೀಣ ಮಟ್ಟದ ಮಕ್ಕಳು ಬಲಿಷ್ಟವಾಗಬೇಕು. ಅದಕ್ಕೆ ಪೂರಕ ಶಿಕ್ಷಣ ಈ ಕ್ಯಾಂಪಸ್ ನಿಂದ ಆಗುತ್ತಿದೆ.  ಮಕ್ಕಳನ್ನು ಸತ್ ಪ್ರಜೆಯನ್ನಾಗಿ ಮಾಡುವ ಕರ್ತವ್ಯ ಹೆತ್ತವರದ್ದಾಗಿದೆ. ಮಕ್ಕಳಿಗಾಗಿ ಸಮಯ ಇಡುವ ಕೆಲಸ  ಪೋಷಕರಿಂದ ಆಗಬೇಕಿದೆ. ಶಿಕ್ಷಣದ ಮಹತ್ವ ಅಪಾರವಾಗಿದೆ. ಅದನ್ನು ಅರ್ಥ ಮಾಡುವ ಮನಸ್ಸು ನಮ್ಮದಾಗಬೇಕು ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ  ಶುಭಹಾರೈಸಿದರು‌. ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ. ಅಬ್ದುಲ್ ಬಶೀರ್ ವಿ.ಕೆ. ಪ್ರಾಸ್ತವಿಕ ಮಾತುಗಳನ್ನಾಡಿ ಬಾಲ್ಯದಲ್ಲಿ ನಾನು ವಿದ್ಯಾಭ್ಯಾಸಕ್ಕಾಗಿ ಪಟ್ಟ ಕಷ್ಟ ಈಗಿನ ಮಕ್ಕಳು ಪಡಬಾರದು ಎನ್ನುವ ಉದ್ದೇಶದಿಂದ ಈ ಶಾಲೆಯ ಹುಟ್ಟುಹಾಕಲಾಗಿದೆ. ಈ ಶಾಲೆಯಿಂದಾಗಿ ನನ್ನ ತಂದೆ ತಾಯಿಯ ಹೆಸರು ಅಮರವಾಗಿರುತ್ತದೆ. ಈ ಭಾಗದ ಜನರ ಸಹಕಾರಕ್ಕೆ ನಾನು ಅಭಾರಿಯಾಗಿದ್ದೇನೆ ಎಂದರು. 
. 
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಮೊಹಮ್ಮದ್ ಕುಂಞಿ ವಿಟ್ಲ, ಸೈಂಟ್ ರೀಟಾ ಪ್ರೌಢಶಾಲಾ ಪ್ರಾಂಶುಪಾಲ ಫಾ. ಸುನಿಲ್ ಪ್ರವೀಣ್ ಪಿಂಟೋ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಎಸ್. ಮಹಮ್ಮದ್, ಜೇಸಿ ಶಾಲಾ ಉಪಾಧ್ಯಕ್ಷ  ಶ್ರೀಧರ ಶಟ್ಟಿ ಬಾಳೆಕಲ್ಲು, ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ್ ನಾಯಕ್ ಎನ್, ಸದಸ್ಯ ಮಹಾಬಲೇಶ್ವರ ಭಟ್, ಮಾಜಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬದ್ರಿಯಾ, ಮಂಗಳೂರು ಭಾರತ್ ಕನ್ಸ್ ಸ್ಟ್ರೆಕ್ಷನ್ ನ ಮಾಲಕ ಮುಸ್ತಫ, ಹಾಸನ ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಟಿ.ಬಿ ಅಬ್ದುಲ್ ರೆಹಮಾನ್ ಹಾಜಿ, ಯುನೈಟೆಡ್ ನೇಷನ್ಸ್‌ನ ರಾಷ್ಟ್ರೀಯ ಕಾರ್ಯದರ್ಶಿ ಡಾ. ರವಿ ಕುಮಾರ್ ಎಲ್.ಪಿ., ಜನಪ್ರಿಯ ಪೌಂಡೇಶನ್‌ನ ಅಧ್ಯಕ್ಷೆ ಫಾತಿಮ ನಸ್ರೀನ್ ಬಶೀರ್, ಉದ್ಯಮಿ ವಿ.ಕೆ.ಅಬ್ದುಲ್ ಅಝೀಝ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಕೀರ್, ಶಾಲಾ ಪ್ರಾಂಶುಪಾಲ ಪ್ರಿಯಾ ದೊರೈರಾಜ್, ಆಡಳಿತಾಧಿಕಾರಿ ಸಫ್ವಾನ್ ಪಿಲಿಕಳ, ಜನಪ್ರೀಯ ಫೌಂಡೇಶನ್ ನ ಅಡ್ವೈಸರ್ ಗಳಾದ ಕಿರಾಶ್ ಪರ್ತಿಪ್ಪಾಡಿ,  ನೌಶೀನ್, ನಫ್ಸಿರ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

share
Next Story
X