ಬೆಂಗಳೂರು: 3 ವರ್ಷದ ಮಗುವಿನ ಅತ್ಯಾಚಾರ, ಕೊಲೆ
ಆರೋಪಿಯ ಬಂಧನ
ಆರೋಪಿಯ ಬಂಧನ
ಬೆಂಗಳೂರು: ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿಪುರದಲ್ಲಿ ವರದಿಯಾಗಿದೆ.
ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು, ಪೋಷಕರ ದೂರಿನನ್ವಯ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ, ಬಳಿಕ ಅಳುತ್ತಿದ್ದ ಮಗುವಿನ ತಲೆಗೆ ಆಯುಧದಿಂದ ಹೊಡೆದಿದ್ದಾನೆ. ಈ ವೇಳೆ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ಹೇಳಲಾಗಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣ | ಪೊಲೀಸರಿಂದ ಕೋರ್ಟ್ ಗೆ ಸಾಕ್ಷ್ಯಗಳು ಸಲ್ಲಿಕೆ, ಈಶ್ವರಪ್ಪಗೆ ಸಂಕಷ್ಟ ಸಾಧ್ಯತೆ
Next Story