ಕಬಕ: ಓಮ್ನಿ - ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಮಾರುತಿ ಓಮ್ನಿ ವ್ಯಾನ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಪುತ್ತೂರು ದ್ವಾರಕ ಕನ್‌ಸ್ಟ್ರಕ್ಷನ್‌ನ ಸಿಬ್ಬಂದಿ ಶರಣ್ ಎಂಬವರು ಗಾಯಗೊಂಡ ಸವಾರ. ಶರಣ್ ಸೈಟ್ ಇನ್‌ಸ್ಪೆಕ್ಷನ್ ಗೆಂದು ತನ್ನ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ಧಿಕ್ಕಿನಿಂದ ಬಂದ ಮಾರುತಿ ವ್ಯಾನ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ.ದೇವಿಪ್ರಸಾದ್ ಎಂಬವರು ತನ್ನ ವಾಹನದಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಓಮ್ನಿಯ ಮುಂಭಾಗಕ್ಕೂ ಹಾನಿಯಾಗಿದೆ.
ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Next Story