Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಬಜೆಟ್ 2023-24 | ಶಿಕ್ಷಣದ...

ಕೇಂದ್ರ ಬಜೆಟ್ 2023-24 | ಶಿಕ್ಷಣದ ಮೂಲಭೂತ ಹಕ್ಕನ್ನು ಗೌರವಿಸಿಲ್ಲ: ವಿ.ಪಿ.ನಿರಂಜನಾರಾಧ್ಯ

1 Feb 2023 8:25 PM IST
share
ಕೇಂದ್ರ ಬಜೆಟ್ 2023-24 | ಶಿಕ್ಷಣದ ಮೂಲಭೂತ ಹಕ್ಕನ್ನು ಗೌರವಿಸಿಲ್ಲ: ವಿ.ಪಿ.ನಿರಂಜನಾರಾಧ್ಯ

ಬೆಂಗಳೂರು, ಫೆ.1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ ಕೇಂದ್ರ ಬಜೆಟ್ ಕೇವಲ ನಿರಾಶಾದಾಯಕ ಮಾತ್ರವಲ್ಲ ಸಂವಿಧಾನದಲ್ಲಿನ ಶಿಕ್ಷಣದ ಮೂಲಭೂತ ಹಕ್ಕನ್ನು ಗೌರವಿಸಿ ಜಾರಿಗೊಳಿಸಲು ವಿಫಲವಾಗಿದೆ ಎಂದು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯದ ಪ್ರಧಾನ ಸಂಚಾಲಕ ನಿರಂಜನಾರಾಧ್ಯ ವಿ.ಪಿ ತಿಳಿಸಿದ್ದಾರೆ. 

ಬುಧವಾರ ಪತ್ರಿಕಾ ಪ್ರಕಟನೆಯನ್ನು ಹೊರಡಿಸಿರುವ ನಿರಂಜನಾರಾಧ್ಯ ಅವರು, ಒಕ್ಕೂಟ ಆಯವ್ಯಯ 2023-24, ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ನಿರಾಶೆಯನ್ನು ತಂದಿದೆ ಎಂದು ತಿಳಿಸಿದ್ದಾರೆ.  

ಗುಣಮಟ್ಟದ ಶಿಕ್ಷಣದ ಪ್ರಾಮುಖ್ಯತೆಯನ್ನು ಹಣಕಾಸು ಸಚಿವರು ಪ್ರಸ್ತಾಪಿಸಿದರೂ, ಅದನ್ನು ಎಲ್ಲ ಮಕ್ಕಳಿಗೆ ಸಮಾನತೆಯ ನೆಲೆಯಲ್ಲಿ ಒದಗಿಸಲು ಅಗತ್ಯವಾದ ಹಣಕಾಸು ಸಂಪನ್ಮೂಲಗಳನ್ನು ಆಯವ್ಯಯದಲ್ಲಿ ಒದಗಿಸಲು ಅವರು ಪೂರ್ಣ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ. 

ಶಿಕ್ಷಣ ವ್ಯವಸ್ಥೆಯು ಸಾಂಕ್ರಾಮಿಕ ಹೊಡೆತದಿಂದ ಉಂಟಾದ ಕಲಿಕಾ ನಷ್ಟದಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹಣಕಾಸು ಸಚಿವರು ಈ ವಿಷಯವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಆದರೆ, ಇದಕ್ಕೆ ಪರಿಹಾರ ಕಂಡುಕೊಳ್ಳಲು ಕಲಿಕೆಯನ್ನು ಸಮಗ್ರವಾಗಿ ಅರ್ಥೈಸಿ ಅಗತ್ಯ ಸಾಂಸ್ಥಿಕ ಸುಧಾರಣೆಗಳ ಮೂಲಕ ಒಟ್ಟು ಕಲಿಕಾ ಪ್ರಕ್ರಿಯೆಯನ್ನು ಪುನಶ್ಚೇತನಗೊಳಿಸಲು ಆಯವ್ಯಯದಲ್ಲಿ ಗಣನೀಯ ಪ್ರಮಾಣದ ಹಣಕಾಸನ್ನು ಒದಗಿಸುವಲ್ಲಿ ಅವರು ಸೋತಿದ್ದಾರೆ ಎಂದರು. 

ಈಗಷ್ಟೇ ಬಿಡುಗಡೆಯಾದ ಆರ್ಥಿಕ ಸಮೀಕ್ಷೆ 2022-23 ರಲ್ಲಿ ಸೂಚಿಸಿದಂತೆ, ಭಾರತದಲ್ಲಿ ಶಿಕ್ಷಣಕ್ಕೆ ದೊರಕಿರುವ ಶೇಕಡಾವಾರು ಜಿಡಿಪಿಯ ಕಳೆದ ನಾಲ್ಕು ಸತತ ಹಣಕಾಸು ವರ್ಷಗಳಿಂದ ಶೇಕಡ 2.9 ರಲ್ಲಿಯೇ ಸ್ಥಗಿತಗೊಂಡಿದೆ . ಸಾಮಾಜಿಕ ಸೇವೆಗಳ ಕೊಡಮಾಡುತ್ತಿರುವ ಒಟ್ಟು ವೆಚ್ಚದಲ್ಲಿ ಶಿಕ್ಷಣಕ್ಕೆ ಮೀಸಲಿಟ್ಟ ವೆಚ್ಚವು 2015-16 ರಲ್ಲಿ ಶೇ.10.4 ರಿಂದ 2022-23ಕ್ಕೆ 9.5 ಕ್ಕೆ ಕುಸಿದಿದೆ ಎಂದು ಸಮೀಕ್ಷೆಯು ತೋರಿಸಿದೆ ಎಂದು ಹೇಳಿದರು. 

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಆಯವ್ಯಯದಲ್ಲಿ ಗಣನೀಯ ಹಣಕಾಸು ಒದಗಿಸದಿದ್ದರೆ, ಅದು ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣಕ್ಕೆ ದಾರಿ ಮಾಡಿಕೊಡುವ ಮೂಲಕ ವ್ಯವಸ್ಥೆಯನ್ನು ಮತ್ತಷ್ಟು ದುರ್ಬಲಗೊಳಿಸುತ್ತದೆ. ಹಣಕಾಸು ಸಚಿವರು, ಈ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬದಲು, ಮುಂದಿನ ಮೂರು ವರ್ಷಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 38,000 ಶಿಕ್ಷಕರನ್ನು ನೇಮಿಸುವುದಾಗಿ ಪ್ರಸ್ತಾಪಿಸಿದ್ದಾರೆ ಎಂದರು. 

ಶಿಕ್ಷಣ ಹಕ್ಕು ಕಾಯಿದೆ ಅನುಷ್ಠಾನದ ಸಾಧನವಾಗಿರುವ ಸಮಗ್ರ ಶಿಕ್ಷಾ ಅಭಿಯಾನಕ್ಕೆ 37,453 ಕೋಟಿಗಳನ್ನು ಮೀಸಲಿಡಲಾಗಿದೆ. ಇದು ಕಳೆದ ಸಾಲಿನ ಮೊತ್ತಕ್ಕಿಂತ 70 ಕೋಟಿಗಳ ಹೆಚ್ಚಳವಾಗಿದೆ. ಆದರೆ, ಇದು ಅತ್ಯಲ್ಪ ಹೆಚ್ಚಳವಾಗಿದ್ದು ಪ್ರತಿಶತ 0.19 ರಷ್ಟು ಮಾತ್ರ ಹೆಚ್ಚಿದೆ ಎಂದರು. 

ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಎಂದು ಮರುನಾಮಕರಣ ಮಾಡಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಆಯವ್ಯಯದಲ್ಲಿ ನೀಡಿರುವ ಮೊತ್ತ ಕಳೆದ ಸಾಲಿಗೆ ಹೋಲಿಸಿದರೆ 1367 ಕೋಟಿ ಜಾಸ್ತಿಯಾಗಿದೆ. ಆದರೆ, ಇದು ಕಳೆದ ಸಾಲಿನ ಪರಿಷ್ಕೃತ ಆಯವ್ಯಯದ ಮೊತ್ತಕ್ಕಿಂತ 1200 ಕೋಟಿ ರೂ. ಕಡಿಮೆಯಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಶಾಲೆಗಳಲ್ಲಿ ಮಕ್ಕಳಿಗೆ ಬೆಳಗಿನ ಉಪಾಹಾರವನ್ನು ಒದಗಿಸಲು ಭರವಸೆ ನೀಡಿ 2 ವರ್ಷ ಕಳೆದಿದೆ. ಈ ಅತ್ಯಲ್ಪ ಹೆಚ್ಚಳದಿಂದ ಯಾವ ರೀತಿಯ ಪೋಷಣ್ ಶಕ್ತಿ ನಿರ್ಮಾಣ್ ಆಗಬಹುದೆಂದು ಜನರು ತೀರ್ಮಾನಿಸಬೇಕಿದೆ ಎಂದು ನಿರಂಜನಾರಾಧ್ಯ ತಿಳಿಸಿದರು.

share
Next Story
X