Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮತದಾರರಿಗೆ ಉಚಿತ ಉಡುಗೊರೆ, ಹಣದ ಆಮಿಷ:...

ಮತದಾರರಿಗೆ ಉಚಿತ ಉಡುಗೊರೆ, ಹಣದ ಆಮಿಷ: ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮಕ್ಕೆ ಸೂಚನೆ

ಚುನಾವಣಾ ಪೂರ್ವಸಿದ್ಧತೆ ಕುರಿತು ರಾಜ್ಯ ಮಟ್ಟದ ಸಭೆ

1 Feb 2023 10:12 PM IST
share
ಮತದಾರರಿಗೆ ಉಚಿತ ಉಡುಗೊರೆ, ಹಣದ ಆಮಿಷ: ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮಕ್ಕೆ ಸೂಚನೆ
ಚುನಾವಣಾ ಪೂರ್ವಸಿದ್ಧತೆ ಕುರಿತು ರಾಜ್ಯ ಮಟ್ಟದ ಸಭೆ

ಬೆಂಗಳೂರು,ಫೆ.1: ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ, ಆಮಿಷಗಳನ್ನು ಒಡ್ಡುತ್ತಿರುವುದು ಕಂಡು ಬಂದಿರುವ ಹಿನ್ನೆಲೆ, ಈ ಕುರಿತಂತೆ ಸಂಬಂಧಪಟ್ಟ ಇಲಾಖೆಯ ನಿಯಮಗಳಂತೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬುಧವಾರ ಭಾರತ ಚುನಾವಣಾ ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ಪೂರ್ವ ಸಿದ್ದತೆಯ ಕುರಿತು ರಾಜ್ಯಮಟ್ಟದ ಅಧಿಕಾರಿಗಳು ಮತ್ತು ಕೇಂದ್ರದ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ಅವರು, ಮತದಾರರಿಗೆ ಮದ್ಯಪಾನ ಸೇರಿದಂತೆ ವಿವಿಧ ರೀತಿಯ ಉಡುಗೊರೆಗಳನ್ನು ಕೂಪನ್‍ಗಳ ಮೂಲಕ ವಿತರಿಸುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಕಳೆದ ವರ್ಷದ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ವಿವಿಧೆಡೆ ಅಂತರ ರಾಜ್ಯ ಚೆಕ್ ಪೋಸ್ಟ್ ಗಳನ್ನು ತೆರೆಯಲು ಅವರು ತಿಳಿಸಿದರು.

ಸಮಾಜದಲ್ಲಿ ನಡೆಯುತ್ತಿರುವ ಆಮಿಷಗಳ ಕುರಿತಂತೆ ಸಂಬಂಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಸುಗಮ ಚುನಾವಣೆಗೆ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು. ವಿವಿಧ ಇಲಾಖೆಗಳ ಮೂಲಕ ಸ್ವೀಕರಿಸಲಾಗುವ ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ ಎಂದರು.

ಹಣ ಮತ್ತು ಬಂಗಾರದಂತಹ ಬೆಲೆ ಬಾಳುವ ವಸ್ತುಗಳು ಮತ್ತು ಮಾದಕ ವಸ್ತುಗಳ ಸಾಗಾಣಿಕೆ ಹಾಗೂ ಮಾರಾಟದ ಮೇಲೆ ಕಣ್ಣಿಡಬೇಕು. ಇದಕ್ಕೆ ಸಂಬಂಧಿಸಿದಂತೆ ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ವಿಶೇಷ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಅವರು ತಿಳಿಸಿದರು.

ಹಣದ ರೂಪದಲ್ಲಿ ಮತ್ತು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳ ಮೂಲಕ ನಡೆಯುವ ಚಲಾವಣೆಗಳ ಮೇಲೆ ಹೆಚ್ಚಿನ ಎಚ್ಚರ ವಹಿಸಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಸಮಾಜಘಾತುಕ ಭಾಷಣ, ಸಮಾಜದ ನೆಮ್ಮದಿ ಕದಡುವ ಹಾಗೂ ದ್ವೇಷವನ್ನು ಹರಡುವ ಮಾತುಗಳು ಮತ್ತು ಅಂತಹ ಸಭೆಗಳ ಮೇಲೆ ಕಟ್ಟೆಚ್ಚರ ವಹಿಸಬೇಕು. ಆ ರೀತಿಯ ಘಟನೆಗಳು ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಚುನಾವಣಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಅಬಕಾರಿ ಇಲಾಖೆ, ರಾಜ್ಯ ಸರಕು ಮತ್ತು ಸೇವೆ ಇಲಾಖೆ, ಆದಾಯ ತೆರಿಗೆ ಇಲಾಖೆ, ಕೇಂದ್ರ ತೆರಿಗೆ ಮತ್ತು ಸುಂಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಾಜರಿದ್ದರು.

share
Next Story
X