Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೈತ್ರಿಕೂಟದ ಪೋಸ್ಟರ್ ನಿಂದ ಬಿಜೆಪಿ...

ಮೈತ್ರಿಕೂಟದ ಪೋಸ್ಟರ್ ನಿಂದ ಬಿಜೆಪಿ ನಾಯಕರ ಚಿತ್ರ ಕೈಬಿಟ್ಟು ಸ್ಪಷ್ಟ ಸಂದೇಶ ನೀಡಿದ ಎಐಎಡಿಎಂಕೆ

2 Feb 2023 1:07 PM IST
share
ಮೈತ್ರಿಕೂಟದ ಪೋಸ್ಟರ್  ನಿಂದ  ಬಿಜೆಪಿ ನಾಯಕರ ಚಿತ್ರ ಕೈಬಿಟ್ಟು ಸ್ಪಷ್ಟ ಸಂದೇಶ ನೀಡಿದ ಎಐಎಡಿಎಂಕೆ

ಚೆನ್ನೈ: ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾದ ಎಡಪ್ಪಾಡಿ ಕೆ. ಪಳನಿಸಾಮಿ (ಇಪಿಎಸ್) (Edappadi K Palanisami) ನೇತೃತ್ವದ ಎಐಎಡಿಎಂಕೆ ಹಾಗೂ  ಅದರ ಮಿತ್ರಪಕ್ಷ ಬಿಜೆಪಿ ನಡುವೆ ಹೆಚ್ಚುತ್ತಿರುವ ಘರ್ಷಣೆಯ ಸ್ಪಷ್ಟ ಸೂಚನೆಯೊಂದು ಲಭಿಸಿದೆ. ಎಐಎಡಿಎಂಕೆ ಪಕ್ಷವು  ಈರೋಡ್ ಪೂರ್ವ ವಿಧಾನಸಭೆಗೆ ಉಪಚುನಾವಣೆಯ ಕೆಲವೇ ದಿನಗಳ ಮೊದಲು  ತನ್ನ ಮಿತ್ರ ಪಕ್ಷವಾದ ಬಿಜೆಪಿಯನ್ನು ಸದ್ದಿಲ್ಲದೆ ಪೋಸ್ಟರ್ ನಿಂದ ಹೊರ ಹಾಕಿತು. ಫೆಬ್ರವರಿ 27ಕ್ಕೆ  ಉಪ ಚುನಾವಣೆ  ನಿಗದಿಯಾಗಿದೆ.

ಬುಧವಾರ ಬೆಳಗ್ಗೆ ಪಕ್ಷದ ಕಚೇರಿಯಲ್ಲಿ ಹಾಕಲಾದ ಪೋಸ್ಟರ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರ ಯಾವುದೇ ಚಿತ್ರಗಳಿರಲಿಲ್ಲ. ಮೈತ್ರಿಕೂಟದ ಹೆಸರನ್ನು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ)ಬದಲು  'ನ್ಯಾಷನಲ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಅಲೈಯನ್ಸ್' (ಎನ್ಡಿಪಿಎ) ಎಂದು ಬದಲಾಯಿಸಲಾಗಿತ್ತು.  ಆದರೆ, ಕೆಲವೇ ಗಂಟೆಗಳ ನಂತರ  ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ , "ಸೂಕ್ತ ಉತ್ತರ ನೀಡಲಾಗುವುದು.  ಮೈತ್ರಿಯ ಹೆಸರನ್ನು ಮರುಸ್ಥಾಪಿಸಲಾಗಿದೆ'' ಎಂದರು.

"ಪಳನಿಸ್ವಾಮಿ ಅವರು ಬಿಜೆಪಿಗೆ ಸ್ಪಷ್ಟ ಸಂದೇಶವನ್ನು ಕಳುಹಿಸಿದ್ದಾರೆ.  ಆ ಪಕ್ಷ  ತಮಿಳುನಾಡಿನಲ್ಲಿ ತನ್ನ ಸ್ಥಾನವನ್ನು ತಿಳಿದುಕೊಳ್ಳಬೇಕು" ಎಂದು ಹೆಸರು ಹೇಳಲಿಚ್ಛಿಸದ ಎಐಎಡಿಎಂಕೆ ನಾಯಕರೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಜಯಲಲಿತಾ ನಿಧನದ ನಂತರ ಪಳನಿಸ್ವಾಮಿ ಹಾಗೂ ಒ.ಪನ್ನೀರ್ ಸೆಲ್ವಂ ನಡುವೆ ನಾಯಕತ್ವದ ಕಿತ್ತಾಟದ ಲಾಭ ಪಡೆಯಲು 234 ಸದಸ್ಯ ಬಲದ ವಿಧಾನಸಭೆಯಲ್ಲಿ ನಾಲ್ವರು ಶಾಸಕರೊಂದಿಗೆ ರಾಜ್ಯದಲ್ಲಿ ಅಲ್ಪ ಅಸ್ತಿತ್ವವನ್ನು ಹೊಂದಿರುವ ಬಿಜೆಪಿ, ಕಳೆದ ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷ ಎಂದು ಬಿಂಬಿಸಿಕೊಳ್ಳಲು ಆರಂಭಿಸಿದ ನಂತರ ಎನ್ ಡಿಎ ಮೈತ್ರಿಯಲ್ಲಿ ಸಮಸ್ಯೆ ಉಂಟಾಗಿದೆ.  

share
Next Story
X