ಶಂಕಿತ ನಕ್ಸಲ್ ಸಂಘಟನೆಯ ನಾಯಕ ರೂಪೇಶ್ ಮಡಿಕೇರಿ ನ್ಯಾಯಾಲಯಕ್ಕೆ ಹಾಜರು
ಮಡಿಕೇರಿ ಫೆ.2 : ನಕ್ಸಲ್ ಸಂಘಟನೆಯ ಶಂಕಿತ ಮುಖಂಡ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಕ್ಸಲ್ ಪ್ರಕರಣವನ್ನು ಎದುರಿಸುತ್ತಿರುವ ರೂಪೇಶ್ ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕೇರಳ ಹಾಗೂ ಕರ್ನಾಟಕ ಪೊಲೀಸರ ಬಿಗಿ ಭದ್ರತೆಯಲ್ಲಿ ಬಂದ ರೂಪೇಶ್ ಘೋಷಣೆಗಳನ್ನು ಕೂಗಿದರು.
ಕೇರಳ ರಾಜ್ಯದ ವೈವೂರು ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ರೂಪೇಶ್‍ನನ್ನು ಬುಧವಾರ ಸಂಜೆ ವೇಳೆಯಲ್ಲಿ ಮಡಿಕೇರಿಗೆ ಕರೆತಂದು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು. ಗುರುವಾರ ಬೆಳಗೆ ಶಸ್ತ್ರ ಸಜ್ಜಿತ ಕೊಡಗು ಕಮಾಂಡೋ ಮತ್ತು ಕೇರಳ ಥಂಡರ್ ಬೋಲ್ಟ್ ಕಮಾಂಡೋಗಳ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಯಿತು.
ಇದನ್ನೂ ಓದಿ: ಬೆಂಗಳೂರು | ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ: ತಾಯಿ, ಮಗಳು ಮೃತ್ಯು
Next Story