Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ ​ರಾಜಾಸೀಟು ಉದ್ಯಾನವನದಲ್ಲಿ...

ಮಡಿಕೇರಿ ​ರಾಜಾಸೀಟು ಉದ್ಯಾನವನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ

3 Feb 2023 7:44 PM IST
share
ಮಡಿಕೇರಿ ​ರಾಜಾಸೀಟು ಉದ್ಯಾನವನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ

ಮಡಿಕೇರಿ ಫೆ.3 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಫೆಬ್ರವರಿ, 06 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. 

ಅಲ್ಲಿನ ಪುಷ್ಪಗಳಿಂದ ನಿರ್ಮಾಣವಾಗಿರುವ ಕಲಾಕೃತಿಗಳು ಒಂದಕ್ಕೊಂದು ಗಮನ ಸೆಳೆಯುತ್ತಿವೆ. ನಾಲ್ಕುನಾಡು ಅರಮನೆ ಕಲಾಕೃತಿಯ ಚಿತ್ರದಲ್ಲಿ ರಾಜರು ಕುಳಿತಿರುವುದು, ಹಾಗೆಯೇ ಕೊಡವ ಉಡುಪಿನಲ್ಲಿ ಸ್ವಾಗತಿಸುವ ಚಿತ್ರಗಳು, ಸಿಂಡ್ರೆಲಾ,  ಹಾಗೆಯೇ ವೈನ್‍ಕಪ್ ಒಳಗೊಂಡ ಚಿತ್ರಗಳು, ಹೆಸರು ಕಾಳು ಮತ್ತು ಬಿಳಿ ಎಳ್ಳು ಮೂಲಕ ಕ್ರೀಯಾಶೀಲವಾಗಿ ನಿರ್ಮಾಣ ಮಾಡಿರುವ ಸೈನಿಕ, ಹೀಗೆ ರಾಜಸೀಟು ಉದ್ಯಾನವನದಲ್ಲಿ ಮತ್ತೊಮ್ಮೆ ಮೊಗದೊಮ್ಮೆ ನೋಡುವಂತೆ ಜನಮನ ಸೆಳೆಯುತ್ತಿವೆ.   
ಪ್ರಧಾನಮಂತ್ರಿ ನರೇಂದ್ರ ಮೋದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್,ಅಂಬೇಡ್ಕರ್, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ, ರಾಷ್ಟ್ರಕವಿ ಕುವೆಂಪು, ಸ್ವಾಮಿ ವಿವೇಕಾನಂದ, ನೇತಾಜಿ ಸುಭಾಷ್ ಚಂದ್ರಬೋಸ್, ಭಗತ್‍ಸಿಂಗ್, ಪುನಿತ್ ರಾಜ್‍ಕುಮಾರ್  ಸೇರಿದಂತೆ ವಿವಿಧ ಗಣ್ಯರ ಕಲಾಕೃತಿಯನ್ನು ತರಕಾರಿ/ ಹಣ್ಣುಗಳಲ್ಲಿ ಕೆತ್ತನೆ ಮಾಡಲಾಗಿದೆ. ವಿವಿಧ ಅಲಂಕಾರಿಕ ಗಿಡಗಳಾದ ಬೋನ್ಸ್‍ಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆ ಹಾಗೂ ಅಂಥೋರಿಯಂ ಹೂವಿನ ಪ್ರದರ್ಶನ ಗಮನ ಸೆಳೆಯುತ್ತಿದೆ.    

ಚುನಾವಣೆ, ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನ ಮತ್ತೊಮ್ಮೆ ಓದುವಂತೆ ಮಾಡುತ್ತದೆ. 18 ವರ್ಷ ಪೂರ್ಣಗೊಂಡಿರುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿ, ಹೆಸರು ಸೇರ್ಪಡೆ ಮಾಡಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಿ, ಹೀಗೆ ಪ್ರತಿಯೊಂದು ಕಲಾಕೃತಿಗಳು ನೋಡುಗರನ್ನು ಮತ್ತೊಮ್ಮೆ ವೀಕ್ಷಿಸುವಂತೆ ಮಾಡುತ್ತವೆ.  

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕಾಫಿ ಮಂಡಳಿ ನಿರ್ದೇಶಕರಾದ ತಳೂರು ಕಿಶೋರ್ ಕುಮಾರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಸಿ.ಎಂ., ನಗರಸಭಾ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.   

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಫಲಪುಷ್ಪ ಪ್ರದರ್ಶನವನ್ನು ವರ್ಷದಿಂದ ವರ್ಷಕ್ಕೆ ಅತ್ಯುತ್ತಮವಾಗಿ ಏರ್ಪಡಿಸಲಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ರಾಜಾಸೀಟು ಉದ್ಯಾನವನ ಫಲಪುಷ್ಪ ಪ್ರದರ್ಶನವು ಕಣ್ಮನ ಸೆಳೆಯುತ್ತಿದ್ದು, ಪ್ರವಾಸಿಗರಲ್ಲಿ ಒಂದು ರೀತಿ ಸಂತಸ ತರುತ್ತದೆ. ನಾಡಿನ ಪ್ರವಾಸಿಗರು ರಾಜಸೀಟು ಉದ್ಯಾನವನದ ಫಲಪುಷ್ಪ ಪ್ರದರ್ಶನ ವೀಕ್ಷಿಸುವಂತಾಗಬೇಕು ಎಂದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಆಗಮಿಸಿ ಗ್ರೇಟರ್ ರಾಜಸೀಟು ಮತ್ತು ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ಇತರೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗು ಜಿಲ್ಲೆಗೆ ಹೆಚ್ಚಿನ ಅನುದಾನ ನೀಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು. 

      

share
Next Story
X