ಜಪ್ಪಿನಮೊಗರು: ಗ್ಯಾರೇಜ್‌ನಲ್ಲಿ ಬೆಂಕಿ ಆಕಸ್ಮಿಕ; ಬಸ್ ಸಹಿತ ಕೆಲವು ವಾಹನಗಳು ಬೆಂಕಿಗೆ ಆಹುತಿ

ಮಂಗಳೂರು: ರಾ.ಹೆ.66ರ ಜಪ್ಪಿನಮೊಗರಿನ ಗ್ಯಾರೇಜ್‌ವೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಗ್ಯಾರೇಜ್‌ನ ಮುಂದೆ ದುರಸ್ತಿಗಾಗಿ ನಿಲ್ಲಿಸಲಾಗಿದ್ದ ಹಳೆಯ ಬಸ್ ಮತ್ತಿತರ ಕೆಲವು ವಾಹನಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಸುಮಾರು 10:15ರ ವೇಳೆಗೆ ಈ ಅವಘಡ ಸಂಭವಿಸಿದೆ.
ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗವು ಪೊಲೀಸರು ಮತ್ತು ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

Next Story