Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ...

ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಮಾರ್ಪಾಡು: ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕಿರುವ ಅಭ್ಯರ್ಥಿಗಳು

4 Feb 2023 11:51 AM IST
share
ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಮಾರ್ಪಾಡು: ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕಿರುವ ಅಭ್ಯರ್ಥಿಗಳು

ಹೊಸದಿಲ್ಲಿ: ಸೇನೆಯು ತನ್ನ ಅಗ್ನಿವೀರ್ (Agniveer) ನೇಮಕಾತಿ ಪ್ರಕ್ರಿಯೆಯಲ್ಲಿ ಮಾರ್ಪಾಡು ಮಾಡಿದ್ದು, ಸೇನೆಗೆ ಸೇರ್ಪಡೆಯಾಗಲು ಬಯಸುವವರು ತಮ್ಮ ಹೆಸರು ನೋಂದಾಯಿಸಿಕೊಂಡಿರುವ ಕೇಂದ್ರಗಳಲ್ಲಿ ಮೊದಲು ಆನ್‌ಲೈನ್‌ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕಾಗಿದೆ. ಇದರ ನಂತರ ನೇಮಕಾತಿ ರ್ಯಾಲಿಗಳಲ್ಲಿ ದೈಹಿಕ ಅರ್ಹತಾ ಪರೀಕ್ಷೆ ನಡೆದ ನಂತರ, ಆಯ್ಕೆಗೂ ಮುನ್ನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ ಎಂದು indianexpress.com ವರದಿ ಮಾಡಿದೆ.

ಈ ಕುರಿತು ಶುಕ್ರವಾರ ಜಾಹೀರಾತು ಬಿಡುಗಡೆ ಮಾಡಿರುವ ಸೇನೆಯು, ಸೇನೆಗೆ ಸೇರ್ಪಡೆಯಾಗಲು ಬಯಸುವ ಅಭ್ಯರ್ಥಿಗಳು ಹಾದು ಹೋಗಬೇಕಾದ ಮೂರು ಹಂತಗಳ ಕುರಿತು ವಿವರಿಸಿದೆ. ಇದಕ್ಕೂ ಮುನ್ನ ಇದ್ದ ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ಸೇನೆಗೆ ಸೇರ್ಪಡೆಯಾಗಲು ಬಯಸುವ ಅಭ್ಯರ್ಥಿಗಳು ಮೊದಲು ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ನಂತರ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಿತ್ತು‌ ಈ ಎರಡರಲ್ಲೂ ಉತ್ತೀರ್ಣರಾದವರು ಕೊನೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕಾಗಿತ್ತು.

ಈವರೆಗೆ 19,000 ಅಗ್ನಿವೀರ್ ಯೋಧರು ಸೇನೆಗೆ ಸೇರ್ಪಡೆಯಾಗಿದ್ದು, ಮಾರ್ಚ್ ಮೊದಲ ವಾರದ ವೇಳೆಗೆ ಇನ್ನೂ 21,000 ಯೋಧರು ಸೇನೆಗೆ ಸೇರ್ಪಡೆಯಾಗಲಿದ್ದಾರೆ. 2023-24ನೇ ಸುತ್ತಿನಲ್ಲಿ ಸೇನೆಗೆ ಸೇರ್ಪಡೆಯಾಗಲು ಬಯಸುತ್ತಿರುವ 40,000 ಅಭ್ಯರ್ಥಿಗಳಿಗೆ ನೂತನ ನೇಮಕಾತಿ ನಿಯಮಗಳು ಅನ್ವಯಿಸಲಿವೆ.

ಇದಕ್ಕೂ ಮುನ್ನ, ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳ ಸಂಖ್ಯೆ ಸಣ್ಣ ಪಟ್ಟಣಗಳಲ್ಲಿ ಸುಮಾರು 5,000 ಇದ್ದರೆ, ದೊಡ್ಡ ನಗರಗಳಲ್ಲಿ ಸುಮಾರು 1.5 ಲಕ್ಷದವರೆಗೆ ಇತ್ತು.

ಈ ಕುರಿತು The Indian Express ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಸೇನಾ ಅಧಿಕಾರಿಯೊಬ್ಬರು, ನೇಮಕಾತಿ ರ್ಯಾಲಿಗಳಲ್ಲಿ ಭಾಗವಹಿಸುವ ಸಾವಿರಾರು ಅಭ್ಯರ್ಥಿಗಳಿಗೆ ತಗುಲುವ ಭಾರಿ ಮೊತ್ತದ ಆಡಳಿತಾತ್ಮಕ ವೆಚ್ಚ ಹಾಗೂ ಸಾರಿಗೆ ವೆಚ್ಚವನ್ನು ಪರಿಗಣಿಸಿ, ನೇಮಕಾತಿ ಪ್ರಕ್ರಿಯೆಯಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

"ಈ ಹಿಂದಿನ ಪ್ರಕ್ರಿಯೆಯಲ್ಲಿ ದೊಡ್ಡ ಸಂಖ್ಯೆಯ ಅಭ್ಯರ್ಥಿಗಳನ್ನು ತಪಾಸಣೆಗೊಳಪಡಿಸಬೇಕಾಗಿತ್ತು. ಇದರಿಂದ ಆಡಳಿತಾತ್ಮಕ ಸಂಪನ್ಮೂಲಗಳ ಮೇಲೆ ಒತ್ತಡ ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ದೊಡ್ಡ ಸಂಖ್ಯೆಯ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಬೇಕಾಗಿತ್ತು ಮತ್ತು ಗಮನಾರ್ಹ ಪ್ರಮಾಣದ ವೈದ್ಯಕೀಯ ಸಿಬ್ಬಂದಿಯನ್ನು ಸೇನಾ ನೇಮಕಾತಿ ರ್ಯಾಲಿಗಳಿಗೆ ಮೀಸಲಿಡಬೇಕಿತ್ತು" ಎಂದು ಅವರು ಹೇಳಿದ್ದಾರೆ.

ಹೊಸ ನೇಮಕಾತಿ ಪ್ರಕ್ರಿಯೆಯಿಂದ ರ್ಯಾಲಿ ಆಯೋಜನೆಗೆ ತಗುಲುತ್ತಿದ್ದ ವೆಚ್ಚದಲ್ಲಿ ಗಮನಾರ್ಹ ಪ್ರಮಾಣದ ಕಡಿತವಾಗಲಿದೆ ಮತ್ತು ಆಡಳಿತಾತ್ಮಕ ಹಾಗೂ ಸಾರಿಗೆ ಸೌಕರ್ಯದ ಮೇಲಿನ ಹೊರೆ ತಗ್ಗಲಿದೆ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರು: ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

share
Next Story
X