Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಲಸ ಮಾಡದವರನ್ನು ಮುಲಾಜಿಲ್ಲದೆ...

ಕೆಲಸ ಮಾಡದವರನ್ನು ಮುಲಾಜಿಲ್ಲದೆ ಬದಲಾಯಿಸುತ್ತೇನೆ: ಘೋಷಿತ ಅಭ್ಯರ್ಥಿಗಳಿಗೆ ಕುಮಾರಸ್ವಾಮಿ ಎಚ್ಚರಿಕೆ

''ಸುಮ್ಮನೆ ಮನೆಯಲ್ಲಿ ಕೂತು ಗೆಲ್ಲಬೇಕು ಎಂದರೆ ಗೆಲ್ಲಲು ಸಾಧ್ಯ ಇಲ್ಲ...''

4 Feb 2023 5:04 PM IST
share
ಕೆಲಸ ಮಾಡದವರನ್ನು ಮುಲಾಜಿಲ್ಲದೆ ಬದಲಾಯಿಸುತ್ತೇನೆ: ಘೋಷಿತ ಅಭ್ಯರ್ಥಿಗಳಿಗೆ ಕುಮಾರಸ್ವಾಮಿ ಎಚ್ಚರಿಕೆ
''ಸುಮ್ಮನೆ ಮನೆಯಲ್ಲಿ ಕೂತು ಗೆಲ್ಲಬೇಕು ಎಂದರೆ ಗೆಲ್ಲಲು ಸಾಧ್ಯ ಇಲ್ಲ...''

ಬೆಂಗಳೂರು: 'ಚುನಾವಣೆಗೆ ಕೇವಲ ಇನ್ನೆರಡು ತಿಂಗಳು ಮಾತ್ರ ಇದ್ದು, ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಪ್ರಕಟ ಆಗಬಹುದು. ಆದ್ದರಿಂದ ಎಲ್ಲ ಘೋಷಿತ  ಅಭ್ಯರ್ಥಿಗಳು ವೇಗವಾಗಿ ಜನರನ್ನು ತಲುಪುವ ಕೆಲಸ ಮಾಡಬೇಕು. ಯಾರಾದರೂ ಉದಾಸೀನ ಮಾಡಿದರೆ ಅಂಥ ಅಭ್ಯರ್ಥಿಗಳನ್ನು ಮುಲಾಜಿಲ್ಲದೆ ಬದಲಾವಣೆ ಮಾಡಲಾಗುವುದು' ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. 

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಕರೆಯಲಾಗಿದ್ದ ಮೊದಲ ಪಟ್ಟಿಯಲ್ಲಿರುವ 93 ಅಭ್ಯರ್ಥಿಗಳ ಸಭೆಯಲ್ಲಿ ಮಾಜಿ ಅವರು ಮಾತನಾಡಿದರು.

'ಸುಮ್ಮನೆ ಮನೆಯಲ್ಲಿ ಕೂತು ಗೆಲ್ಲಬೇಕು ಎಂದರೆ ಗೆಲ್ಲಲು ಸಾಧ್ಯ ಇಲ್ಲ. ಕೆಲ ಕ್ಷೇತ್ರಗಳಲ್ಲಿ ನಾವು ಹಾಕಿರುವ ಅಭ್ಯರ್ಥಿಗಳು ಹಾಗೂ ಆಯಾ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಗೆ ಸಿಕ್ಕಿರುವ ಸ್ಪಂದನೆ ಬಿಜೆಪಿ ಕಾಂಗ್ರೆಸ್ ಪ್ರಮುಖ ದಿಗ್ಗಜ ನಾಯಕರ ನಿದ್ದೆಗೆಡುವಂತೆ ಮಾಡಿದೆ. ಕೆಲಸ ಮಾಡದ, ವೇಗವಾಗಿ ಮುನ್ನಡೆಯದ ಅಭ್ಯರ್ಥಿಗಳನ್ನು ಮುಲಾಜಿಲ್ಲದೆ ಬದಲಾಯಿಸುತ್ತೇನೆ. ಆರೇಳು ಕ್ಷೇತ್ರಗಳಲ್ಲಿ ಘೋಷಿತ ಅಭ್ಯರ್ಥಿಗಳ ವೇಗ ನನಗೆ ತೃಪ್ತಿ ನೀಡಿಲ್ಲ. ಅವರನ್ನು ಬದಲಾವಣೆ ಮಾಡಲಾಗುವುದು' ಎಂದು ಹೇಳಿದರು. 

'ಪ್ರತಿ ಕ್ಷೇತ್ರವೂ ನನಗೆ ಮುಖ್ಯ, ನಾನು ಕಠಿಣ ನಿರ್ಧಾರ ಕೈಗೊಳ್ಳುವ ಬಗ್ಗೆ ಹಿಂದೆ ಸರಿಯುವುದಿಲ್ಲ. ಮುಲಾಜಿಲ್ಲದೆ ಕಠಿಣ ನಿರ್ಧಾರ ಕೈಗೊಳ್ಳುವ ಅವಕಾಶ ನನ್ನ ಮುಂದೆ ಮುಕ್ತವಾಗಿದೆ. ಕೆಲವರು ಬಹಳ ಉತ್ತವಾಗಿ ಕೆಲಸ ಮಾಡುತ್ತಿದ್ದಾರೆ, ನನಗೆ ಖುಷಿ ಇದೆ, ಕೆಲವರು ಉಪಯೋಗ ಇಲ್ಲ' ಎಂದರು ಅವರು.

ಜಿಲ್ಲಾಧ್ಯಕ್ಷರಿಗೆ ಚುರುಕು: ಕೆಲ ಜಿಲ್ಲೆಗಳಲ್ಲಿ 8-10 ವರ್ಷಗಳಿಂದ ಅಧ್ಯಕ್ಷರಾದವರು ಇದ್ದಾರೆ, ಆದರೆ, ಒಬ್ಬ ಸೂಕ್ತ ಅಭ್ಯರ್ಥಿಯನ್ನು ಹುಡುಕಲು ಸಾಧ್ಯವಾಗದಿದ್ದರೆ ಹೇಗೆ? ಇನ್ನು ಯಾವ ಸೀಮೆಯ ಅಧ್ಯಕ್ಷಗಿರಿ ನಿಮ್ಮದು? ಇದನ್ನು ಸಹಿಸುವ ಪ್ರಶ್ನೆ ಇಲ್ಲ. ಈಗಾಗಲೇ ಆಯ್ಕೆಯಾಗಿರುವ ಅಭ್ಯರ್ಥಿಗಳ ಗೆಲುವಿಗೆ ಜಿಲ್ಲಾಧ್ಯಕ್ಷರು, ಜಿಲ್ಲೆಗಳ ಎಲ್ಲಾ ಮುಖಂಡರು ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಪಕ್ಷದ ನಿರ್ಣಯವನ್ನು ಎಲ್ಲರೂ ಗೌರವಿಸಬೇಕು, ಅಶಿಸ್ತನ್ನು ಸಹಿಸಲ್ಲ ಎಂದು ಹೇಳಿದರು. 

ಮತಗಟ್ಟೆ ಮಟ್ಟದಲ್ಲಿ ಕೆಲಸ ಮಾಡಬೇಕು, ಮನೆ ಮನೆಗೂ ಹೋಗಿ ಜನರಿಗೆ ನಮ್ಮ ಕಾರ್ಯಕ್ರಮಗಳ ಬಗ್ಗೆ ತಿಳಿಸಬೇಕು.
ಗೆಲ್ಲಲು ಇರುವ ಪ್ರತಿ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದ ಅವರು, ಪ್ರಚಾರ ಹೇಗೆ ಮಾಡಬೇಕು ಎಂಬ ಬಗ್ಗೆ ಅಭ್ಯರ್ಥಿಗಳಿಗೆ ಸಲಹೆ ನೀಡಿದರು.

ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪೂರ್, ಎನ್ ಎಂ ನಂಬಿ, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ  ಕೆ ಎನ್ ತಿಪ್ಪೇಸ್ವಾಮಿ, ರಾಮನಗರ ಕ್ಷೇತ್ರದ ಅಭ್ಯರ್ಥಿ ಹಾಗೂ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಎಲ್ಲ ಶಾಸಕರು, ಘೋಷಿತ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು.

share
Next Story
X