Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್:...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಸಿಎಂ ಬೊಮ್ಮಾಯಿ ಭರವಸೆ

4 Feb 2023 7:48 PM IST
share
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಸಿಎಂ ಬೊಮ್ಮಾಯಿ ಭರವಸೆ

ವಿಜಯಪುರ, ಫೆ. 4: ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ನೀಡಬೇಕೆಂಬ ಬೇಡಿಕೆ ಇದ್ದು, ಈ ಬಾರಿಯ ಬಜೆಟ್‍ನಲ್ಲಿ ಇದಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಿರುವ 37ನೆ ಪತ್ರಕರ್ತರ ಸಮ್ಮೇಳನದಲ್ಲಿ ಹಿರಿಯ ಪತ್ರಕರ್ತ ಬಿ.ಎನ್.ಮಲ್ಲೇಶ್, ಸುದ್ದಿ ವಾಚಕಿ ಸುಕನ್ಯಾ, ಸಿಎಂ ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ಅವರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು. 

ನಿವೃತ್ತ ಪತ್ರಕರ್ತರ ಮಾಸಾಸನ ಹೆಚ್ಚಳಕ್ಕೂ ಬಜೆಟ್‍ನಲ್ಲಿ ಅವಕಾಶ ಕಲ್ಪಿಸಲಾಗುವುದು. ಪತ್ರಕರ್ತರ ಭವನಗಳ ನಿರ್ವಹಣೆ ಪತ್ರಕರ್ತರಿಗೆ ನೀಡಲು ಕ್ರಮ ವಹಿಸಲಾಗುವುದು. ಇಲ್ಲವಾದರೆ ಸರಕಾರವೇ ಆ ಜವಾಬ್ದಾರಿಯನ್ನು ನಿರ್ವಹಿಸಲಿದೆ ಎಂದ ಅವರು, ಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೆ ಅಖಂಡ ಕರ್ನಾಟಕದ ಭಾಗಬೇಕು. ಆಗ ಮಾತ್ರ ರಾಜ್ಯದ ಗಟ್ಟಿ ಧ್ವನಿ ಎಲ್ಲೆಡೆ ಕೇಳುತ್ತದೆ ಎಂದು ಸಲಹೆ ನೀಡಿದರು.

ಅವಿನಾಭಾವ ಸಂಬಂಧ: ಪತ್ರಕರ್ತರು ಹಾಗೂ ರಾಜಕಾರಣಿಗಳದ್ದು ಅವಿನಾಭಾವ ಸಂಬಂಧ. ಪರಸ್ಪರರನ್ನು ಬಿಟ್ಟು ಕೆಲಸ ಮಾಡಲಾಗುವುದಿಲ್ಲ. ತಮ್ಮ ಅಭಿಪ್ರಾಯಗಳ ಮೂಲಕ ನಮ್ಮ ವ್ಯಕ್ತಿತ್ವ ರೂಪಿಸಲು ಪತ್ರಕರ್ತರು ಕಾರಣ. ರಾಜಕಾರಣಿಗಳು ಇಲ್ಲದಿದ್ದರೆ, ಪತ್ರಿಕೆಗಳನ್ನು ಯಾರೂ ಓದುತ್ತಿರಲಿಲ್ಲ ಎಂದರು.

ರಾಜಕಾರಣಿಗಳು ಮತ್ತು ಪತ್ರಕರ್ತರ ನಡುವೆ ಆರೋಗ್ಯಕರ ಸಂಬಂಧವಿದ್ದರೆ ಆಡಳಿತ ಉತ್ತಮವಾಗಿರುತ್ತದೆ. ಪತ್ರಿಕೋದ್ಯಮ ಬಹಳಷ್ಟು ಬದಲಾವಣೆ ಕಂಡಿದೆ. ಪ್ರತಿಯೊಬ್ಬ ಓದುಗನೂ ಪರ್ತಕರ್ತನಾಗಿದ್ದಾನೆ. ಇಂತಹ ಸಂದರ್ಭದಲ್ಲಿ ಪತ್ರಿಕೋದ್ಯಮವನ್ನು ಉಳಿಸಿಕೊಂಡು ಪರ್ತಕರ್ತರ ವೃತ್ತಿಯನ್ನು ಗಟ್ಟಿಗೊಳಿಸುವುದು ಸವಾಲಿನ ಕೆಲಸ ಎಂದು ಅವರು ನುಡಿದರು.

ದೇಶಕ್ಕೆ ಅನ್ನ ನೀಡುವ ರಾಜ್ಯ ಆಗಬೇಕು: ‘ಕರ್ನಾಟಕ, ಇಡೀ ದೇಶಕ್ಕೆ ಅನ್ನ ನೀಡುವ ರಾಜ್ಯವಾಗುವ ನಿಟ್ಟಿನಲ್ಲಿ ಆ ಕನಸಿನ ಈಡೇರಿಕೆಗೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡಬೇಕಿದೆ’ ಎಂದ ಅವರು, ಆಡಳಿತ ಮಾಡುವವರಿಗೆ ಸ್ಪಷ್ಟತೆ ಇದ್ದು, ನಮ್ಮ ಕರ್ತವ್ಯ ವ್ಯಾಪ್ತಿಯ ಬಗ್ಗೆ ಅರಿವಿರಬೇಕು. ಜನರಿಗೆ ಒಳಿತು ಮಾಡಲು ಒಂದು ಕಾರಣ ಸಾಕು. ಪ್ರಾದೇಶಿಕವಾಗಿರುವ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಾಗ ಮಾತ್ರ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧ್ಯ ಎಂದರು.

ಸಚಿವರಾದ ಸಿ.ಸಿ.ಪಾಟೀಲ್, ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಇನ್ನಿತರರು ಹಾಜರಿದ್ದರು.

share
Next Story
X