ಮಂಗಳೂರು: ಪ್ರೆಸಿಡೆನ್ಸಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಮಂಗಳೂರು: ನಗರ ಹೊರವಲಯದ ನೀರುಮಾರ್ಗ ಸಮೀಪದ ಕೆಲರೈ ಎಂಬಲ್ಲಿರುವ ಪ್ರೆಸಿಡೆನ್ಸಿ ಶಾಲೆ ಮತ್ತು ಪಿಯು ಕಾಲೇಜಿನ ನಿರ್ಗಮಿತ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಶನಿವಾರ ಪ್ರೆಸಿಡೆನ್ಸಿ ಕ್ಯಾಂಪಸ್‌ನಲ್ಲಿ ನಡೆಯಿತು.
ನಿರ್ಗಮಿತ ವಿದ್ಯಾರ್ಥಿಗಳ ಮೆರವಣಿಗೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಪವಿತ್ರ ಗ್ರಂಥಗಳಾದ ಕುರ್‌ಆನ್, ಬೈಬಲ್ ಮತ್ತು ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಲಾಯಿತು.
ಬಳಿಕ ಪ್ರೆಸಿಡೆನ್ಸಿ ಶಾಲೆ ಮತ್ತು ಪಿಯು ಕಾಲೇಜಿನ ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರಶಸ್ತಿ ವಿಜೇತರು ಹಾಗೂ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಸಾಧಕರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಅಬಕಾರಿ ಇಲಾಖೆಯ ಎಸ್ಪಿಅಮರನಾಥ್ ಎಸ್.ಎಸ್. ಭಂಡಾರಿ, ಪ್ರೆಸಿಡೆನ್ಸಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್ಸ್‌ನ ಉಪಾಧ್ಯಕ್ಷ ಸುಹೈಲ್ ಅಹ್ಮದ್ ಭಾಗವಹಿಸಿದ್ದರು.
ಈ ಸಂದರ್ಭ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲೆ ಶೈಲಾ ಸಲ್ಡಾನ್ಹಾ ‘ವಿದ್ಯಾರ್ಥಿಗಳ ಸಹಕಾರದಿಂದ ಸಂಸ್ಥೆಯು ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಕೋವಿಡ್ ಸಂದರ್ಭ ಕಾಲೇಜು ಮತ್ತು ವಿದ್ಯಾರ್ಥಿಗಳು ತಮಗೆದುರಾದ ಸವಾಲುಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿ ನಿಂತಿರುವುದು ಶ್ಲಾಘನೀಯ’ ಎಂದರು.
ಕಾರ್ಯಕ್ರಮದಲ್ಲಿ ಮ್ಯಾನೇಜ್‌ಮೆಂಟ್ ಕೋ-ಆರ್ಡಿನೇಟರ್ ಜಾವೇದ್ ಲತೀಫ್, ಆಯಿಷಾ ಇಲ್ಹಾಮ್, ಆನಂದ್ ಪ್ರಸಾದ್, ಸುಮನ್ ಶೆಟ್ಟಿ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಅಖಿಲೇಶ್ ಕುಕಿಯಾನ್ ಸ್ವಾಗತಿಸಿದರು. ಸುರಕ್ಷಾ ವಂದಿಸಿದರು. ಪ್ರೀತಿ ಜೆ. ಸಲ್ಡಾನ್ಹಾ ಮತ್ತು ಆಂಗಲೀನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.