ಕುದ್ರೋಳಿ: ಬಾಲಕಿ ಆತ್ಮಹತ್ಯೆ

ಮಂಗಳೂರು, ಫೆ.5: ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಇಲ್ಲಿನ ನಿವಾಸಿ ರಿಯಾಝ್ ಎಂಬವರ ಪುತ್ರಿ ಖತೀಜಾ ರೀನಾ(16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಇಂದು ಬೆಳಗ್ಗೆ 8:30ರ ಸುಮಾರಿಗೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮಾನಸಿಕ ಒತ್ತಡ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಸ್ಥಳಕ್ಕೆ ಬಂದರ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story