Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ: ಬಾಲ್ಯ ವಿವಾಹದ ಹಿನ್ನೆಲೆಯಲ್ಲಿ...

ಅಸ್ಸಾಂ: ಬಾಲ್ಯ ವಿವಾಹದ ಹಿನ್ನೆಲೆಯಲ್ಲಿ ಬಂಧನ; ಪೊಲೀಸ್ ಠಾಣೆ ಮುಂದೆ ಮಹಿಳೆಯರ ಪ್ರತಿಭಟನೆ

ಯಾವುದೇ ಅನುಕಂಪವಿಲ್ಲ ಎಂದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

5 Feb 2023 1:41 PM IST
share
ಅಸ್ಸಾಂ: ಬಾಲ್ಯ ವಿವಾಹದ ಹಿನ್ನೆಲೆಯಲ್ಲಿ ಬಂಧನ; ಪೊಲೀಸ್ ಠಾಣೆ ಮುಂದೆ ಮಹಿಳೆಯರ ಪ್ರತಿಭಟನೆ
ಯಾವುದೇ ಅನುಕಂಪವಿಲ್ಲ ಎಂದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಮೋರಿಗಾಂವ್: ಶನಿವಾರ ಬೆಳಗ್ಗೆ 11.30ರ ವೇಳೆಗೆ ನೂರಾರು ಮಹಿಳೆಯರು ಲಾಹರಿಘಾಟ್ ಪೊಲೀಸ್ ಠಾಣೆಯೆದುರು ಜಮಾಯಿಸಿ, ಠಾಣೆಯ ಗೇಟ್ ಅನ್ನು ತಳ್ಳಾಡುವುದರೊಂದಿಗೆ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸ್ ಸಿಬ್ಬಂದಿಗಳು ಅವರನ್ನೆಲ್ಲ ಹಿಂದಕ್ಕೆ ನೂಕಿದರಾದರೂ, ಈ ಪೈಕಿ ಸುಮಾರು ಆರು ಮಂದಿ ಮಹಿಳೆಯರು ಠಾಣೆಯ ಆವರಣ ಪ್ರವೇಶಿಸುವುದರಲ್ಲಿ ಯಶಸ್ವಿಯಾಗಿ, ಠಾಣೆಯ ಅಂಗಳದಲ್ಲಿ ಅಂಗಾತ ಮಲಗಿ ಪ್ರತಿಭಟಿಸಿದರು. ಈ ಮಹಿಳೆಯರು ಶುಕ್ರವಾರ ಬಾಲ್ಯ ವಿವಾಹದ ಆರೋಪದಲ್ಲಿ ಬಂಧಿತನಾಗಿದ್ದ ಇಸ್ಲಾಂ ಎಂಬ ವ್ಯಕ್ತಿಯ ಸಂಬಂಧಿಕರಾಗಿದ್ದರು ಎಂದು indianexpress.com ವರದಿ ಮಾಡಿದೆ.

ಇವರೊಂದಿಗೆ, ಗೇಟಿನ ಹೊರಗೆ ಮೂರು ತಿಂಗಳ ಮಗುವನ್ನು ಕಂಕುಳಲ್ಲಿ ಇಟ್ಟುಕೊಂಡಿದ್ದ ಮಹಿಳೆಯೊಬ್ಬರೂ ನಿಂತಿದ್ದರು. ಆಕೆಯ ಪತಿ ಹನೀಫ್ ಅನ್ನು ಶುಕ್ರವಾರ ಮಧ್ಯರಾತ್ರಿ ಬಂಧಿಸಲಾಗಿತ್ತು. ನಾವಿಬ್ಬರೂ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದೆವು ಎಂದು ಆಕೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ನಾನು ನನ್ನ ಮಗುವನ್ನು ಹೇಗೆ ನೋಡಿಕೊಳ್ಳುವುದೆಂದೇ ಚಿಂತೆಯಾಗಿದೆ. ನನ್ನ ಪತಿಯು ಕೃಷಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ನಾನು ಆತನನ್ನು ಮದುವೆಯಾಗಲು ಮನೆ ಬಿಟ್ಟು ಓಡಿ ಬಂದಿರುವುದರಿಂದ ನನಗೆ ಬೇರಾವುದೇ ಬೆಂಬಲವಿಲ್ಲ. ಸದ್ಯ ನನ್ನ ಬಳಿ ಒಂದು ರೂಪಾಯಿ ಕೂಡಾ ಇಲ್ಲ" ಎಂದು 18 ವರ್ಷದ ಆ ಮಹಿಳೆಯು ಅಳಲು ತೋಡಿಕೊಂಡಿದ್ದಾರೆ.

ಈ ನಡುವೆ, "ಬಾಲ್ಯ ವಿವಾಹಗಳ ಬಗ್ಗೆ ನನಗೆ ಶೂನ್ಯ ಸಹಾನುಭೂತಿಯಿದೆ. ಅಪ್ರಾಪ್ತ ಬಾಲಕಿ ಮದುವೆಯಾಗಿ ದೈಹಿಕ ಸಂಪರ್ಕವೇರ್ಪಟ್ಟರೆ, ನಾನದನ್ನು ಅತ್ಯಾಚಾರವೆಂದೇ ಕರೆಯುತ್ತೇನೆ. ಆ ಬಾಲಕಿ ಆ ಸಮಸ್ಯೆಯಲ್ಲೇ ಮುಂದುವರಿಯಲಿ ಎಂದು ನಾವು ಬಯಸಬೇಕೇ? ಭವಿಷ್ಯದಲ್ಲಿ ಲಕ್ಷಾಂತರ ಬಾಲಕಿಯರು ಇಂತಹ ಪರಿಸ್ಥಿತಿಯಿಂದ ನರಳುವುದನ್ನು ತಪ್ಪಿಸಲು ಒಂದು ತಲೆಮಾರು ನರಳಲೇಬೇಕಿದೆ" ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ಅಸ್ಸಾಂ ರಾಜ್ಯ ಸರ್ಕಾರ ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ ಆರಂಭಿಸಿದಾಗಿನಿಂದ ಈವರೆಗೆ 2,258 ಮಂದಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪತ್ನಿಯ ತಲೆಗೆ ಹೊಡೆದ ಆರೋಪ: ವಿನೋದ್ ಕಾಂಬ್ಳಿ ವಿರುದ್ಧ ಪ್ರಕರಣ

share
Next Story
X