Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಚ್ಚುತ್ತಿರುವ ತೆರಿಗೆ ವಂಚನೆ: ವಿಮಾ...

ಹೆಚ್ಚುತ್ತಿರುವ ತೆರಿಗೆ ವಂಚನೆ: ವಿಮಾ ಕಂಪನಿಗಳ ಮೇಲೆ ನಿಗಾ

5 Feb 2023 4:56 PM IST
share
ಹೆಚ್ಚುತ್ತಿರುವ ತೆರಿಗೆ ವಂಚನೆ: ವಿಮಾ ಕಂಪನಿಗಳ ಮೇಲೆ ನಿಗಾ

ಹೊಸದಿಲ್ಲಿ,ಫೆ.5: ವಿಮಾ ನಿಯಂತ್ರಣ ಪ್ರಾಧಿಕಾರದ ನಿಯಮಗಳನ್ನು ಮೀರಿ ಏಜೆಂಟರಿಗೆ ಕಮಿಷನ್ ಪಾವತಿಯಲ್ಲಿ ಹೆಚ್ಚಿನ ಅಕ್ರಮಗಳು ಮತ್ತು ತೆರಿಗೆ ವಂಚನೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ(Income Tax Department)ಯು ಶೀಘ್ರವೇ ವಿಮಾ ಕಂಪನಿಗಳನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯ ಅಧ್ಯಕ್ಷ ನಿತಿನ್ ಗುಪ್ತಾ(Nitin Gupta) ತಿಳಿಸಿದ್ದಾರೆ.

ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು,‘ಇತ್ತೀಚಿಗಷ್ಟೇ ನಾವು ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದು,ವಿಮಾ ಕಂಪನಿಗಳು ಕಮಿಷನ್ ಪಾವತಿಸುವ ರೀತಿಯಲ್ಲಿ ಹಲವಾರು ಅಕ್ರಮಗಳು ಬೆಳಕಿಗೆ ಬಂದಿವೆ. ಎಲ್ಲ ವಿಮಾ ಕಂಪನಿಗಳು ಈ ಅಕ್ರಮಗಳನ್ನು ನಡೆಸಿವೆ. ತೆರಿಗೆ ವಂಚನೆ ಮತ್ತು ನಿಯಂತ್ರಣ ಪ್ರಾಧಿಕಾರದ ನಿಯಮಗಳನ್ನು ಮೀರಿದ್ದನ್ನು ನಾವು ಕಂಡುಕೊಂಡಿದ್ದೇವೆ. ಈ ಕಂಪನಿಗಳು ನಿಯಂತ್ರಣ ಪ್ರಾಧಿಕಾರದ ನಿಯಮಗಳನ್ನು ಮೀರಿರುವುದರಿಂದ ಅಂತಹ ವೆಚ್ಚಗಳಿಗೆ ಆದಾಯ ತೆರಿಗೆ ಕಾಯ್ದೆಯಡಿ ವಿನಾಯಿತಿಗೆ ಅನುಮತಿಸಲಾಗುವುದಿಲ್ಲ ’ಎಂದು ತಿಳಿಸಿದರು.

ಈ ಪ್ರಕರಣಗಳಲ್ಲಿ ಕಾನೂನು ಕ್ರಮಗಳು ಪ್ರಗತಿಯಲ್ಲಿವೆಯೇ ಎಂಬ ಪ್ರಶ್ನೆಗೆ ಗುಪ್ತಾ,‘ಅಗತ್ಯವಿರುವ ಯಾವುದೇ ಕ್ರಮವನ್ನು ನಾವು ಆರಂಭಿಸುತ್ತೇವೆ,ಆದರೆ ಅವು ಕಾನೂನನ್ನು ಉಲ್ಲಂಘಿಸಿರುವ ರೀತಿಯು ಅತಿರೇಕದ್ದಾಗಿದೆ. ಅವು ಪವಿತ್ರ ಗೋವುಗಳೇನೂ ಅಲ್ಲ’ ಎಂದು ಉತ್ತರಿಸಿದರು.
ಆದಾಯ ತೆರಿಗೆ ಇಲಾಖೆಯು ಕಂಡುಕೊಂಡಿರುವ ಅಂಶಗಳನ್ನು ಜಿಎಸ್ಟಿ ಕಾಯ್ದೆ ಗುಪ್ತಚರ ಮಹಾನಿರ್ದೇಶನಾಲಯವು 2022ರಲ್ಲಿ ಆರಂಭಿಸಿದ್ದ ತನಿಖೆಯೊಂದಿಗೆ ತಳುಕು ಹಾಕಬಹುದು. 824 ಕೋ.ರೂ.ಗಳ ಅನರ್ಹ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆದುಕೊಂಡಿದ್ದಕ್ಕಾಗಿ 16 ವಿಮಾ ಕಂಪನಿಗಳು ಮಹಾನಿರ್ದೇಶನಾಲಯದ ತನಿಖೆಗೊಳಪಟ್ಟಿವೆ.

ಕಾರ್ಪೊರೇಟ್ ವಿಮಾ ಏಜಂಟರಿಗೆ ಕೇವಲ ನಾಮಮಾತ್ರ ಕಮಿಷನ್ ಪಾವತಿಗೆ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಅನುಮತಿಸಿದೆ. ಆದರೆ ಮೈಕ್ರೋ ಫೈನಾನ್ಸಿಂಗ್ ವ್ಯವಹಾರದಲ್ಲಿ ತೊಡಗಿಕೊಂಡಿರುವ ಬ್ಯಾಂಕೇತರ ಹಣಕಾಸು ಕಂಪನಿಗಳಂತಹ ಕಾರ್ಪೊರೇಟ್ ಏಜಂಟರಿಗೆ ಹೆಚ್ಚಿನ ಕಮಿಷನ್ ಪಾವತಿಸಲು ಈ ವಿಮಾ ಕಂಪನಿಗಳು ಈ ನಿಯಮಗಳನ್ನು ತಪ್ಪಿಸುತ್ತಿವೆ ಎನ್ನುವುದು ಪರೋಕ್ಷ ತೆರಿಗೆ ಇಲಾಖೆಯ ತನಿಖೆಯಿಂದ ತಿಳಿದುಬಂದಿದೆ.

ವೆಬ್ ಮಾರ್ಕೆಟಿಂಗ್ ಅಥವಾ ಜಾಹೀರಾತುಗಳಂತಹ ಸೇವೆಗಳನ್ನು ವಾಸ್ತವದಲ್ಲಿ ಪಡೆದುಕೊಳ್ಳದೆ,ಅವುಗಳನ್ನು ಪೂರೈಸಲಾಗಿದೆ ಎಂದು ಮಧ್ಯವರ್ತಿಗಳಿಂದ ಇನ್ವಾಯ್ಸಾಗಳನ್ನು ಪಡೆದುಕೊಳ್ಳುವುದು ಈ ಕಂಪನಿಗಳು ಅಧಿಕ ಕಮಿಷನ್ ಪಾವತಿಯಲ್ಲಿ ಅನುಸರಿಸುತ್ತಿರುವ ಕಾರ್ಯತಂತ್ರವಾಗಿದೆ. 2022.ಸೆ.30ರ ವೇಳೆಗೆ ಈ ಕಂಪನಿಗಳು 824 ಕೋ.ರೂ.ಗಳ ಪೈಕಿ 217 ಕೋ.ರೂ.ಗಳನ್ನು ‘ಸ್ವಯಂಪ್ರೇರಿತ’ವಾಗಿ ಜಿಎಸ್ಟಿ ಬೊಕ್ಕಸಕ್ಕೆ ರವಾನಿಸಿವೆ.

ಐದು ಲಕ್ಷ ರೂ.ಗಿಂತ ವಾರ್ಷಿಕ ಪ್ರೀಮಿಯಮ್ನ ಜೀವವಿಮೆ ಪಾಲಿಸಿಗಳನ್ನು ಶ್ರೀಮಂತರು ಮಾತ್ರ ಖರೀದಿಸುತ್ತಾರೆ,ಹೀಗಾಗಿ ಇಂತಹವರಿಗೆ ತೆರಿಗೆಯನ್ನು ವಿಧಿಸುವ ಬಜೆಟ್ ನಿರ್ಧಾರವು ಸಾಮಾನ್ಯ ತೆರಿಗೆದಾರರಿಗೆ ಹೊಡೆತವನ್ನು ನೀಡುವುದಿಲ್ಲ. ಅಲ್ಲದೆ ಬಜೆಟ್ ನಿರ್ಧಾರವು ಮರಣ ಸೌಲಭ್ಯಗಳನ್ನು ಮಾತ್ರ ಒದಗಿಸುವ ಟರ್ಮ್ ಇನ್ಶೂರನ್ಸ್ ಪಾಲಿಸಿಗಳಿಗೆ ಅನ್ವಯಿಸುವುದಿಲ್ಲ ಎಂದು ಗುಪ್ತಾ ಈ ಸಂದರ್ಭದಲ್ಲಿ ತಿಳಿಸಿದರು.

share
Next Story
X