Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕ ಝಮೀರ್ ಅಹ್ಮದ್ ಖಾನ್ ವಿರುದ್ಧ...

ಶಾಸಕ ಝಮೀರ್ ಅಹ್ಮದ್ ಖಾನ್ ವಿರುದ್ಧ ಜೆಡಿಎಸ್ ವಾಗ್ದಾಳಿ

5 Feb 2023 7:13 PM IST
share
ಶಾಸಕ ಝಮೀರ್ ಅಹ್ಮದ್ ಖಾನ್ ವಿರುದ್ಧ ಜೆಡಿಎಸ್ ವಾಗ್ದಾಳಿ

ಬೆಂಗಳೂರು, ಫೆ. 5: ‘ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಶಾಸಕ ಝಮೀರ್ ಅಹ್ಮದ್ ಖಾನ್, ನಿಮಗೆ ಮುಸ್ಲಿಮ್ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಎಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರುವುದಿಲ್ಲ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ‘ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೆ ಕ್ಷೇತ್ರದ ಗೋರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಮ್ ಬಂಧುಗಳು ಎಂತಹ ಕಷ್ಟದ ಸ್ಥಿತಿಯಲ್ಲಿ ಇದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಮ್ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿ ಬಗ್ಗೆ ಅರಿವಿದೆಯಾ?’ ಎಂದು ಪ್ರಶ್ನಿಸಿದೆ.

‘ಹರುಕಲು ನಾಲಿಗೆಯ ಝಮೀರ್, ಮುಸ್ಲಿಮ್ ಸಮುದಾಯಕ್ಕೆ ಸೇರಿದ ನಿಮಗೆ ರಾಜಕೀಯ ಜನ್ಮಕೊಟ್ಟಿದು ಇದೇ ಕುಮಾರಣ್ಣ. ವಿಧಾನಸಭೆಯ ಮಾರ್ಷಲ್‍ಗಳು ಕುತ್ತಿಗೆಪಟ್ಟಿ ಹಿಡಿದು ಹೊರದಬ್ಬಿದಾಗ ಇದೇ ಕುಮಾರಣ್ಣ ನಿಮ್ಮ ಮಾನ ಕಾಪಾಡಿದ್ದು. ಅಂದು ಶಪಥಗೈದ ಕುಮಾರಣ್ಣ ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದು ನೆನಪಿಲ್ಲವೇ? ನಿಯತ್ತಿಲ್ಲದ ನಿಮಗೆ ಇದೆಲ್ಲಾ ಅರ್ಥವಾದೀತೆ? ಎಂದು ಜೆಡಿಎಸ್ ಟೀಕಿಸಿದೆ.

‘ಉಂಡ ಮನೆಯ ಗಳ ಇರಿಯುವ ಝಮೀರ್, ಸಿ.ಎಂ.ಇಬ್ರಾಹೀಂ ಅವರ ರಾಜಕೀಯ ಹಿತದ ಬಗ್ಗೆ ಈಗ ನೆನಪು ಬಂತಾ ನಿಮಗೆ? ಹಿಂದೆ, ಇದೇ ಸಿಎಂ ಇಬ್ರಾಹೀಂ ಅವರನ್ನು ಅದೇ ನಿಮ್ಮ ನಾಯಕ ಶಿಕಾಮಣಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟಕ್ಕೆ ಯಾಕೆ ಸೇರಿಸಿಕೊಳ್ಳಲಿಲ್ಲ? ಹೋಗಲಿ, ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ಅವಕಾಶವೂ ಇತ್ತು. ಅದನ್ನು ಮಾಡಲಿಲ್ಲ ಯಾಕಪ್ಪಾ ಝಮೀರ್? ಎಂದು ಜೆಡಿಎಸ್ ಕೇಳಿದೆ.

‘ಇಬ್ರಾಹೀಂ ಅವರನ್ನು ನಾವು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಪಕ್ಷಕ್ಕೆ ಬಂದಾಗ ಪ್ರೀತಿಯಿಂದ ಬರ ಮಾಡಿಕೊಂಡಿದ್ದೇವೆ. ಈಗ ಅವರು ನಮ್ಮ ಅಧ್ಯಕ್ಷರು. ನಿಮ್ಮ ಗಂಜಿ ಕೇಂದ್ರವಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಓರ್ವ ಮುಸ್ಲಿಮ್ ನಾಯಕ ಪಕ್ಷದ ಅಧ್ಯಕ್ಷರಾಗುವುದು ಸಾಧ್ಯವೇ? ಕಾಮಾಲೆ ಕಣ್ಣಲ್ಲಿ ಕೆಂಡ ಸುರಿದುಕೊಂಡರೆ ಯಾರಿಗೆ ನಷ್ಟ ಝಮೀರ್? ಎಂದು ಜೆಡಿಎಸ್ ತಿರುಗೇಟು ನೀಡಿದೆ.

‘ಇಬ್ರಾಹೀಂ ಅವರ ಪುತ್ರನ ಬಗ್ಗೆ ವಿಷಕಾರುವ ಕೆಟ್ಟ ಪ್ರಯತ್ನ ಮಾಡಿದ್ದೀರಿ. ಹುಮನಾಬಾದ್‍ನಲ್ಲಿ ಯುವಕ ಸಿಎಂ ಫಯಾಜ್ ಗೆದ್ದೇ ಗೆಲ್ಲುತ್ತಾರೆ. ನಿಮಗೂ ಈ ವಿಷಯ ಚೆನ್ನಾಗಿ ಗೊತ್ತು. ಪಂಚರತ್ನ ರಥಯಾತ್ರೆ ಈ ಕ್ಷೇತ್ರದಲ್ಲಿ ಹೇಗೆ ಅಬ್ಬರಿಸಿತು ಎನ್ನುವ ಮಾಹಿತಿ ಪಡೆದುಕೊಳ್ಳಿ. ನಿಮ್ಮದೆ ಸಮುದಾಯದ ತರುಣನ ಮೇಲೆ ಈ ಪರಿಯ ಮತ್ಸರ ಏಕೆ ಝಮೀರ್? ಎಂದು ಜೆಡಿಎಸ್ ಕಿಡಿಕಾರಿದೆ.

‘ಇಬ್ರಾಹೀಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹೀಂ ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ’ ಎಂದು ಜೆಡಿಎಸ್ ಆರೋಪಿಸಿದೆ.

‘ಇಬ್ರಾಹೀಂ ಅವರನ್ನು ಕಾಂಗ್ರೆಸ್‍ನಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಂತೆ, ಈಗ ಅವರ ಮಗನ ವಿಷಯದಲ್ಲೂ ದುಷ್ಟತಂತ್ರ ಹೂಡಲು ಹೊರಟಿದ್ದೀರಿ. ಸಿದ್ದಹಸ್ತನ ಜತೆ ಸೇರಿ ಮುಸ್ಲಿಮ್ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿದ ಮಿಸ್ಟರ್ ಝಮೀರ್, ಮುಸ್ಲಿಮ್ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ’

-ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.1/8

— Janata Dal Secular (@JanataDal_S) February 5, 2023

ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ.7/8

— Janata Dal Secular (@JanataDal_S) February 5, 2023
share
Next Story
X