Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟೀಕೆಗಳಿಗೆ ಹೆದರುವ ಗಿರಾಕಿ ನಾನಲ್ಲ,...

ಟೀಕೆಗಳಿಗೆ ಹೆದರುವ ಗಿರಾಕಿ ನಾನಲ್ಲ, ಹೆದರಿಸುವ ಪ್ರಯತ್ನ ಮಾಡಿದರೆ ತೊಡೆ ತಟ್ಟೋಕೆ ನನಗೂ ಗೊತ್ತಿದೆ: ಸಿದ್ದರಾಮಯ್ಯ

5 Feb 2023 10:35 PM IST
share
ಟೀಕೆಗಳಿಗೆ ಹೆದರುವ ಗಿರಾಕಿ ನಾನಲ್ಲ, ಹೆದರಿಸುವ ಪ್ರಯತ್ನ ಮಾಡಿದರೆ ತೊಡೆ ತಟ್ಟೋಕೆ ನನಗೂ ಗೊತ್ತಿದೆ: ಸಿದ್ದರಾಮಯ್ಯ

ವಿಜಯನಗರ, ಫೆ. 5: ‘ನಾನು ನ್ಯಾಯಕ್ಕಾಗಿ ತಲೆಬಾಗುವೆನೇ ಹೊರತು ಮತ್ತಾವುದಕ್ಕೂ ತಲೆಬಾಗಲಾರೆ. ಟೀಕೆಗಳಿಗೆ ಹೆದರುವ ಗಿರಾಕಿ ನಾನಲ್ಲ. ಯಾರಾದರೂ ಹೆದರಿಸುವ ಪ್ರಯತ್ನ ಮಾಡಿದರೆ ತೊಡೆ ತಟ್ಟುವುದು ನನಗೂ ಗೊತ್ತಿದೆ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

ರವಿವಾರ ಜಿಲ್ಲೆಯ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರದಲ್ಲಿ ಯಾತ್ರಿ ನಿವಾಸ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರ ಇದ್ದಾಗಲೂ ಮತ್ತು ಇಲ್ಲದಿದ್ದಾಗಲೂ ನಾನು ಸಾಮಾಜಿಕ ನ್ಯಾಯದ ಪರ ಹೋರಾಟ ಮಾಡಿದ್ದೇನೆ. ಮುಂದೆಯೂ ಹೋರಾಡುವೆ. ನಾನೆಂದೂ ಅಧಿಕಾರದ ಹಿಂದೆ ಬಿದ್ದಿಲ್ಲ. ನನಗೆ ನ್ಯಾಯಯುತವಾಗಿದೆ ಎಂದು ಅನಿಸಿದ್ದನ್ನು ಮಾಡುತ್ತೇನೆ ಎಂದು ನುಡಿದರು.

‘ನಾನು ಕುರುಬ ಸಮುದಾಯಕ್ಕೆ ಸೇರಿದವನು ಎನ್ನುವ ಕಾರಣಕ್ಕೆ ‘ಟಗರು’ ಎನ್ನುವುದಲ್ಲ, ನಾನು ರೂಪಿಸಿದ ಅನ್ನಭಾಗ್ಯ ಯೋಜನೆ ಯಾವುದೇ ಒಂದು ಜಾತಿಗೆ ಮಾತ್ರ ಸೀಮಿತಗೊಳಿಸಿ ಜಾರಿ ಮಾಡಿದ್ವಾ? ಎಲ್ಲ ಬಡವರಿಗೆ ನೀಡಿರಲಿಲ್ವಾ? ಕೃಷಿ ಭಾಗ್ಯ ಯೋಜನೆಯನ್ನು ಬರೀ ಕುರುಬ ಜಾತಿಯ ರೈತರಿಗೆ ಮಾತ್ರ ನೀಡಿದ್ದೆವಾ? ಇಂದಿರಾ ಕ್ಯಾಂಟೀನ್, ವಿದ್ಯಾಸಿರಿ, ಶಾದಿ ಭಾಗ್ಯ, ಇವೆಲ್ಲ ಯೋಜನೆಗಳನ್ನು ಈ ನಾಡಿನಲ್ಲಿ ದುರ್ಬಲರಿಗೆ ಸಹಾಯವಾಗಲಿ ಎಂದು ಮಾಡಿದ್ದು ಎಂದು ಸ್ಪಷ್ಟಪಡಿಸಿದರು.

ಸಿಎಂ ಬೊಮ್ಮಾಯಿ ನಿನ್ನೆ ಕುರುಬ ಸಮುದಾಯವನ್ನು ಎಸ್.ಟಿ.ಗೆ ಸೇರ್ಪಡೆ ಮಾಡುವ ಭರವಸೆ ನೀಡಿದ್ದಾರೆ. ಆ ಕೆಲಸ ಮಾಡಬೇಕಾಗಿರುವುದು ಕೇಂದ್ರ ಸರಕಾರ. ಇಲ್ಲಿ ನಿಂತು ಮೀಸೆ ತಿರುವಿ ಭಾಷಣ ಮಾಡಿದರೆ ಅರ್ಥವಿಲ್ಲ. ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿ ಸಂವಿಧಾನ ತಿದ್ದುಪಡಿ ಮಾಡಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.


‘ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದು, ಸಂವಿಧಾನ ತಿದ್ದುಪಡಿಯನ್ನೇ ಮಾಡಿಲ್ಲ. ಮೂಗಿಗೆ ತುಪ್ಪ ಹಚ್ಚುವವರನ್ನು ನೋಡಿದ್ದೇವೆ. ಆದರೆ, ಹಣೆಗೆ ತುಪ್ಪ ಹಚ್ಚುವವರನ್ನು ನೋಡಿದ್ದು ಇದೇ ಮೊದಲು. ಮೇಲ್ಜಾತಿಯ ಬಡವರಿಗೆ ಯಾವುದೇ ಶಿಫಾರಸ್ಸು ಇಲ್ಲದೆ ಶೇ.10ರಷ್ಟು ಹೆಚ್ಚಳ ಮಾಡಿದ್ದು, ಸಂವಿಧಾನಬಾಹಿರ. ಇದರ ವಿರುದ್ದ ಧ್ವನಿಯೆತ್ತಬೇಕು’

-ಸಿದ್ದರಾಮಯ್ಯ ವಿಪಕ್ಷ ನಾಯಕ

share
Next Story
X