Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನರನ್ನು ಪರಸ್ಪರ ಎತ್ತಿಕಟ್ಟುತ್ತಿರುವ...

ಜನರನ್ನು ಪರಸ್ಪರ ಎತ್ತಿಕಟ್ಟುತ್ತಿರುವ ಬಿಜೆಪಿ: ಸಸಿಕಾಂತ್ ಸೆಂಥಿಲ್

5 Feb 2023 11:06 PM IST
share
ಜನರನ್ನು ಪರಸ್ಪರ ಎತ್ತಿಕಟ್ಟುತ್ತಿರುವ ಬಿಜೆಪಿ: ಸಸಿಕಾಂತ್ ಸೆಂಥಿಲ್

ಬೆಂಗಳೂರು, ಫೆ. 5: ಸಮಾಜದಲ್ಲಿ 20 ಮಂದಿಯನ್ನು ಗುರಿಯಾಗಿಸಿಕೊಂಡು ದ್ವೇಷದ ಮಾತುಗಳ ಮೂಲಕ 80 ಜನರ ಮೇಲೆ ಎತ್ತಿಕಟ್ಟಿ ಮತ ಪಡೆಯುವುದೇ ಬಲಪಂಥೀಯರ ಪ್ರಮುಖ ಬಲ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ರವಿವಾರ ನಗರದ ಗಾಂಧಿಭವನ ಸಭಾಂಗಣದಲ್ಲಿ ‘ನಮ್ಮ ಧ್ವನಿ ಬಳಗ’ವೂ ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ನೆನಪಿನಲ್ಲಿ ಆಯೋಜಿಸಿದ್ದ ಪ್ರಬುದ್ಧ ಭಾರತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿರುವ ಶೇ.20ರಷ್ಟು ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಅವರ ವಿರುದ್ಧ ಅಪಪ್ರಚಾರ, ಸುಳ್ಳು ಸುದ್ದಿಗಳನ್ನು 80ರಷ್ಟಿರುವ ಇತರೆ ಸಮುದಾಯದ ಮೇಲೆ ಹೇರಿ, ಭಯ ಸೃಷ್ಟಿಸುತ್ತಾರೆ. ಆನಂತರ, ಚುನಾವಣೆ ಸಂದರ್ಭದಲ್ಲಿ ಈ ಭಯವನ್ನೆ ಪ್ರಸ್ತಾಪಿಸಿ ಮತಗಳಾಗಿ ಪರಿವರ್ತನೆ ಮಾಡುವ ಕಲೆಯನ್ನೆ ಬಲಪಂಥೀಯರು ರೂಢಿಸಿಕೊಂಡಿದ್ದಾರೆ. ಈ ಹಿಂದೆಯೂ ಇದೇ ಈ ರೀತಿಯ ಮಾದರಿ ಜಾರಿಮಾಡುವಲ್ಲಿ ಸಾರ್ವಧಿಕಾರಿ ಅಡೋಲ್ಪ್ ಹಿಟ್ಲರ್ ಸಹ ಯಶಸ್ವಿ ಆಗಿದ್ದ ಎಂದು ಹೇಳಿದರು.

ಅವರು(ಬಿಜೆಪಿ) ಮತ್ತೆ ಅಧಿಕಾರಕ್ಕೇರಿದರೆ ಮುಸ್ಲಿಮರಲ್ಲ. ಹಿಂದೂಗಳೆ ಅತಿ ಹೆಚ್ಚು ಸಂಕಷ್ಟಕ್ಕೆ ಗುರಿಯಾಗುತ್ತಾರೆ. ಅದರಲ್ಲೂ ದಲಿತರು, ಹಿಂದುಳಿದ ವರ್ಗದವರು ತಮ್ಮ ಅಸ್ತಿತ್ವವೇ ಇಲ್ಲದಂತೆ ಕಳೆದುಹೋಗುತ್ತಾರೆ. ಮತ್ತೊಮ್ಮೆಅಸಮಾನತೆ, ಜಾತಿ ಪದ್ಧತಿ ಸೃಷ್ಟಿಸಲು ಅವರು ಕನಸನ್ನೆ ಕಂಡಿದ್ದು, ಅದಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ ಎಂದು ಅವರು ಹೇಳಿದರು.

ಭಾರತದ ಜನರು ಎಂದಿಗೂ ಕೋಮುವಾದಿಗಳಲ್ಲ. ಎಲ್ಲರೂ ಪ್ರೀತಿ, ವಿಶ್ವಾಸದಿಂದ ಇದ್ದಾರೆ. ಇಡೀ ಪ್ರಪಂಚದಲ್ಲಿಯೇ ವೈವಿಧ್ಯತೆ ಇದ್ದರೂ ಏಕತೆಯಿಂದ ಬದುಕುತ್ತಿರುವ ಏಕೈಕ ರಾಷ್ಟ್ರ. ಆದರೆ, ಕೋಮುವಾದಿ ಚಿಂತನೆಯಿಂದ ಬಂದಿರುವವರು ದೇಶದಲ್ಲಿ ತಾರತಮ್ಯ ಪೋಷಿಸುತ್ತಿದ್ದಾರೆ. ಎಲ್ಲರೂ ಒಂದೇ ವಿಚಾರವನ್ನು ಒಪ್ಪಿಕೊಳ್ಳಬೇಕು ಎಂದು ಜನರ ಮೇಲೆ ಕಾನೂನು ಹೇರುವ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಹೇಳಿದರು.

ಹಿಂದೂಗಳ ಪರವೋ, ಮುಸ್ಲಿಮರ ಪರವೋ ಎನ್ನುವ ಒಂದೇ ಪ್ರಶ್ನೆ ಅವರಲ್ಲಿದೆ. ನೀವು ಸಂವಿಧಾನದ ಪರವೋ, ವಿರುದ್ಧವೋ ಎನ್ನುವ ಪ್ರಶ್ನೆ ಅವರನ್ನು ಕೇಳಿ. ಸಂವಿಧಾನ ಒಪ್ಪಿಕೊಳ್ಳದವರನ್ನು ಅಧಿಕಾರದಲ್ಲಿ ಮುಂದುವರಿಯಲು ಬಿಡಬಾರದು. ವೈವಿಧ್ಯತೆಯೊಂದಿಗೆ ದೇಶ ಹೇಗೆ ಅಭಿವೃದ್ಧಿ ಮಾಡಬೇಕು ಎನ್ನುವ ಸಂಗತಿ ಸಂವಿಧಾನದಲ್ಲಿದೆ. ಸಂವಿಧಾನ ಸಮರ್ಪಕ ಜಾರಿಗೊಳಿಸಿದರೆ ತನ್ನಷ್ಟಕ್ಕೆ ಅಭಿವೃದ್ಧಿಯಾಗುತ್ತದೆ. ಆದರೆ, ಕೋಮುವಾದಿಗಳಿಗೆ ಅದು ಬೇಕಾಗಿಲ್ಲ ಎಂದು ನುಡಿದರು.

ಈ ಸಂದರ್ಭದಲ್ಲಿ ಚಿಂತಕ ಎಲ್.ಎನ್.ಮುಕುಂದರಾಜ್, ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು, ಹೋರಾಟಗಾರರಾದ ಮಾವಳ್ಳಿ ಶಂಕರ್, ಮುನೀರ್ ಕಟಿಪಳ್ಳ, ನವೀನ್ ಕರುವಾನೆ, ಕಾಂಗ್ರೆಸ್ ನಾಯಕ ನಿಕೇತ್ ರಾಜ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

'ಕುತಂತ್ರ ಮಾಡುತ್ತಾರೆ': ದೇಶದ ಶೇ.80 ಮತ್ತು ಶೇ.20 ಜನರನ್ನು ಪ್ರತ್ಯೇಕಿಸಿ ಕಥೆ ಹೇಳುವ ಕೆಲಸವನ್ನು ಕೋಮುವಾದಿಗಳು ಮಾಡುತ್ತಿದ್ದಾರೆ. ಶೇ.20 ಜನಸಂಖ್ಯೆಯಿಂದ ಅಪಾಯವಿದೆ ಎನ್ನುವ ಆತಂಕವನ್ನು ಶೇ.80ರಷ್ಟು ಜನರಲ್ಲಿ ತುಂಬಿ, ದ್ವೇಷ, ಅಸೂಯೆಗಳನ್ನು ಹುಟ್ಟುಹಾಕಿ ಅಧಿಕಾರದಲ್ಲಿ ಮುಂದುವರಿಯುವ ಕುತಂತ್ರ ಮಾಡುತ್ತಿದ್ದಾರೆ ಎಂದು ಸೆಸಿಕಾಂತ್ ಸೆಂಥಿಲ್ ಹೇಳಿದರು.

share
Next Story
X