Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 'ಜೆಲ್ ಭರೋ ತೆಹ್ರೀಕ್' ಚಳವಳಿಗೆ ಇಮ್ರಾನ್...

'ಜೆಲ್ ಭರೋ ತೆಹ್ರೀಕ್' ಚಳವಳಿಗೆ ಇಮ್ರಾನ್ ಖಾನ್ ಕರೆ

ಪಕ್ಷದ ನಾಯಕರ ಬಂಧನಕ್ಕೆ ಖಂಡನೆ

5 Feb 2023 11:25 PM IST
share
ಜೆಲ್ ಭರೋ ತೆಹ್ರೀಕ್ ಚಳವಳಿಗೆ ಇಮ್ರಾನ್ ಖಾನ್ ಕರೆ
ಪಕ್ಷದ ನಾಯಕರ ಬಂಧನಕ್ಕೆ ಖಂಡನೆ

ಲಾಹೋರ್,ಫೆ.5: ಬಂಧನದಲ್ಲಿರುವ ತನ್ನ ಪಕ್ಷದ ನಾಯಕರ ಮೇಲೆ ದೌರ್ಜನ್ಯ ಹಾಗೂ ಸಾರ್ವತ್ರಿಕ ಚುನಾವಣೆ ಘೋಷಣೆಗೆ ವಿಳಂಬ ವಿರೋಧಿಸಿ 'ಜೈಲ್ ಭರೋ ತೆಹ್ರೀಕ್' ಆಂದೋಲನ ನಡೆಸುವಂತೆ ಪಾಕಿಸ್ತಾನದ ತೆಹ್ರೀಕೆ ಇನ್ಸಾಫ್ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ತನ್ನ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಲಾಹೋರ್ನ ಝಮಾನ್ ಪಾರ್ಕ್ ನಲ್ಲಿರುವ ತನ್ನ ನಿವಾಸದಿಂದ ಟೆಲಿವಿಶನ್ ಮೂಲಕ ಮಾಡಿದ

ತೆಹ್ರೀಕೆ ಇನ್ಸಾಫ್ ಪಕ್ಷದ ಹಿರಿಯ ಉಪಾಧ್ಯಕ್ಷ ಫವಾದ್ ಚೌಧುರಿ ಹಾಗೂ ರಾಷ್ಟ್ರೀಯ ಅಸೆಂಬ್ಲಿಯ ಮಾಜಿ ಸದಸ್ಯ ಶಾನ್ದನಾ ಗುಲ್ಝಾರ್ ವಿರುದ್ಧ ದೇಶದ್ರೋಹದ ಆರೋಪಗಳನ್ನು ದಾಖಲಿಸಿ ಬಂಧಿಸಿದ ಹಿನ್ನೆಲೆಯಲ್ಲಿ ಇಮ್ರಾನ್ ಬೆಂಬಲಿಗರಿಗೆ ಈ ಕರೆಯನ್ನು ಕೊಟ್ಟಿದ್ದಾರೆ. ''ಜೈಲ್ ಭರೋ ತೆಹ್ರೀಕ್ ಚಳವಳಿಗಾಗಿ ನಾನು ನೀಡುವ ಕರೆಗೆ ಸಿದ್ಧವಾಗಿರಿ ಹಾಗೂ ಕಾದುನಿಂತಿರಿ ಎಂದು ಜನತೆಯನ್ನು ನಾನು ಕೇಳಿಕೊಳ್ಳುತ್ತಿದ್ದೇನೆ. ಅವರೆಲ್ಲರನ್ನು ತುಂಬಿಸಿಕೊಳ್ಳಲು ಪಾಕಿಸ್ತಾನದ ಜೈಲುಗಳಲ್ಲಿ ಅಷ್ಟೊಂದು ಜಾಗವಿರಲಾರದು'' ಎಂದು ಇಮ್ರಾನ್ ಖಾನ್ ತನ್ನ ಟಿವಿ ಭಾಷಣದಲ್ಲಿ ಹೇಳಿದರು. ಕಿರುಕುಳ ಹಾಗೂ ಕಸ್ಟಡಿ ಹಿಂಸೆಯಿಂದ ನಾವು ಭಯಭೀತರಾಗಿದ್ದೇವೆಂದು ಒಂದು ವೇಳೆ ಪಾಕಿಸ್ತಾನದ ಮುಸ್ಲಿಂ ಲೀಗ್-ನವಾಝ್ (ಪಿಎಂಎಲ್-ಎನ್) ಹಾಗೂ ಸೇನಾ ಸಂಸ್ಥಾಪನೆಯಲ್ಲಿರುವ ಅವರ ನಿಯಂತ್ರಕರು ಭಾವಿಸಿದ್ದೇ ಆದಲ್ಲಿ, ಖಂಡಿತವಾಗಿಯೂ ಅವರು ತಪ್ಪು ತಿಳಿದಿದ್ದಾರೆಂದು ಅರ್ಥ'' ಎಂದರು.

ಚುನಾವಣಾ ಆಯೋಗದ ಸದಸ್ಯರು ಹಾಗೂ ಅವರ ಕುಟುಂಬಿಕರಿಗೆ ಬೆದರಿಕೆಯೊಡ್ಡಿರುವುದಾಗಿ ಇಮ್ರಾನ್ ಖಾನ್ ಅವರ ನಿಕಟವರ್ತಿ ಫವಾದ್ ಚೌಧುರಿ ವಿರುದ್ಧ ಚುನಾವಣಾ ಆಯೋಗದ ಕಾರ್ಯದರ್ಶಿ ಇಸ್ಲಾಮಾಬಾದ್ ನ ಕೋಹ್ಸರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಈ ಹಿನ್ನೆಲೆಯಲ್ಲಿ ಲಾಹೋರ್ನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿದ್ದರು. ಖೈಬರ್ ಪಖ್ತೂಂ ಖ್ವಾ ಪ್ರಾಂತದ ಮಹಿಳಾ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಶಂದಾನಾ ಗುಲ್ಝಾರ್ ಅವರನ್ನು ದೇಶದ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಹಿಂಸಾಚಾರ ವೆಸಗಲು ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿಸಲಾಗಿತ್ತು.

share
Next Story
X