ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ಉಪಯೋಗ ಇಲ್ಲ: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ಯಾವುದೇ ರೀತಿಯಲ್ಲಿ ಉಪಯೋಗ ಆಗುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ದ.ಕ. ಬಿಜೆಪಿಯ ಆರ್ಥಿಕ ಪ್ರಕೋಷ್ಠದಿಂದ ರವಿವಾರ ಇಲ್ಲಿನ ಕೆನರಾ ಶಿಕ್ಷಣಸಂಸ್ಥೆಗಳ ಸುಧೀಂದ್ರ ಸಭಾಂಗಣದಲ್ಲಿ ‘ಕೇಂದ್ರ ಬಜೆಟ್ ಕುರಿತ ವಿಶ್ಲೇಷಣೆ ಹಾಗೂ ಸಂವಾದ’ದಲ್ಲಿ ಅವರು ಮಾತನಾಡಿದರು.
ಯುಪಿಎ ಸರ್ಕಾರದ ಬಗ್ಗೆ ಉಲ್ಲೇಖಿಸಿದ ಸೂರ್ಯ, '2009 ರಲ್ಲಿ ಚುನಾವಣೆ ಗೆಲ್ಲಲು ಅಂದಿನ ಯುಪಿಎ ಸರ್ಕಾರ 2008ರ ಬಜೆಟಿನಲ್ಲಿ ರೈತರ ಸಾಲ ಮನ್ನಾ ಮಾಡಲು ಒಂದು ಲಕ್ಷ ಕೋಟಿ ಘೋಷಿಸಿತು. ಅದರಿಂದ ರೈತರಿಗೆ ತಾತ್ಕಾಲಿಕವಾಗಿ ಉಪಯೋಗ ಆದರೂ ದೇಶಕ್ಕೆ ಯಾವುದೇ ರೀತಿಯ ಉಪಯೋಗ ಆಗಲಿಲ್ಲ ಎಂದು ಅವರು ಹೇಳಿದ್ದಾರೆ.
ಆದರೆ, ನಮ್ಮ ನರೇಂದ್ರ ಮೋದಿ ಸರ್ಕಾರ ಮುಂದಿನ ವರ್ಷ ಚುನಾವಣೆ ಇದ್ದರೂ ಸಾಲಮನ್ನಾದಂತಹ ದೇಶಕ್ಕೆ ಲುಕ್ಸಾನು (ನಷ್ಟ) ಆಗುವಂತಹ ಜನಪ್ರಿಯ ಯೋಜನೆಗಳನ್ನು ಘೋಷಿಸಲಿಲ್ಲ. ಬದಲಾಗಿ ಮೂಲಭೂತ ಸೌಕರ್ಯಗಳಿಗೆ 30 ಲಕ್ಷ ಕೋಟಿ ಹೂಡಿಕೆ ಮಾಡಿದೆ ಎಂದು ಹೇಳಿದ್ದಾರೆ.
Next Story