ವಿಷಾಹಾರ ಸೇವನೆ ಪ್ರಕರಣ: ಅಸ್ವಸ್ಥ ವಿದ್ಯಾರ್ಥಿನಿಯರು ಚೇತರಿಕೆ, ಆಹಾರ ಪ್ರಯೋಗಾಲಯಕ್ಕೆ ರವಾನೆ

ಮಂಗಳೂರು: ನಗರದ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ಹಾಸ್ಟೆಲ್‌ನಲ್ಲಿ ಸೋಮವಾರ ನಡೆದ ವಿಷಾಹಾರ ಸೇವನೆ ಪ್ರಕರಣದ ಅಸ್ವಸ್ಥ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಾಹಾರದ ಸ್ಯಾಂಪಲನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ವಿಷಾಹಾರ ಸೇವನೆಯಿಂದ 130ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು. ಆ ಪೈಕಿ ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ನಗರದ ಬೇರೆ ಬೇರೆ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಇದೀಗ ಬಹುತೇಕ ಎಲ್ಲರೂ ಚೇತರಿಸಿಕೊಂಡಿದ್ದು, ಕೆಲವರನ್ನು ಇಂದು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ವಿಷಾಹಾರಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯದ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ವಿಷಾಹಾರ ಸೇವಿಸಿ 130ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು
Next Story