ಉಜಿರೆ: ಲಾಡ್ಜ್ ಗಳ ಮೇಲೆ ಪೊಲೀಸರ ದಾಳಿ, ಪರಿಶೀಲನೆ

ಬೆಳ್ತಂಗಡಿ: ಉಜಿರೆಯ ವಸತಿ ಗೃಹಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಎಸ್.ಪಿ ಅವರ ಸೂಚನೆಯಂತೆ ಉಜಿರೆಯ ಎಲ್ಲಾ ಲಾಡ್ಜ್ ಗಳ ಮೇಲೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸೋಮವಾರ ರಾತ್ರಿಯ ವೇಳೆ ಐದು ವಿಶೇಷ ಪೊಲೀಸ್ ತಂಡಗಳು ಏಕಕಾಲದಲ್ಲಿ ಲಾಡ್ಜ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಪರಿಶೀಲನೆಯ ವೇಳೆ ಯಾವುದೇ ಅನೈತಿಕ ಚಟುವಟಿಕೆಗಳು ನಡೆದಿರುವುದು ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ.
ಉಜಿರೆಯ ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಎಲ್ಲ ಲಾಡ್ಜ ಗಳಿಗೂ ದಾಖಲೆಗಳನ್ನು ಸಮರ್ಪಕವಾಗಿ ಇರಿಸುವಂತೆ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
Next Story