Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿ, ಸಿರಿಯಾದಲ್ಲಿ ಭೂಕಂಪ: 5,000 ಗಡಿ...

ಟರ್ಕಿ, ಸಿರಿಯಾದಲ್ಲಿ ಭೂಕಂಪ: 5,000 ಗಡಿ ದಾಟಿದ ಮೃತಪಟ್ಟವರ ಸಂಖ್ಯೆ

ಅದಾನ ತಲುಪಿದ ಭಾರತದ ಪರಿಹಾರ ತಂಡ

7 Feb 2023 2:56 PM IST
share
ಟರ್ಕಿ, ಸಿರಿಯಾದಲ್ಲಿ ಭೂಕಂಪ: 5,000 ಗಡಿ ದಾಟಿದ ಮೃತಪಟ್ಟವರ ಸಂಖ್ಯೆ
ಅದಾನ ತಲುಪಿದ ಭಾರತದ ಪರಿಹಾರ ತಂಡ

ಅಂಕಾರ, ಫೆ.7: ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5000 ದಾಟಿರುವುದಾಗಿ ಅಂದಾಜಿಸಲಾಗಿದ್ದು ಕುಸಿದು ಬಿದ್ದಿರುವ ಕಟ್ಟಡಗಳ ಅವಶೇಷಗಳಡಿಯಲ್ಲಿ ಇನ್ನೂ ಕೆಲವರು ಸಿಲುಕಿರುವ ಶಂಕೆಯಿದ್ದು ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಾವಿರಾರು ಕಟ್ಟಡಗಳು ನೆಲಸಮವಾಗಿದ್ದು ಕಟ್ಟಡದ ಕಬ್ಬಿಣ, ಅಲ್ಯುಮೀನಿಯಂ, ಕಲ್ಲು ಮಣ್ಣಿನ ರಾಶಿಯಡಿ ಬದುಕುಳಿದವರ ರಕ್ಷಣಾ ಕಾರ್ಯ ಮುಂದುವರಿದಿರುವಂತೆಯೇ ಮಂಗಳವಾರ ಪೂರ್ವ ಟರ್ಕಿಯಲ್ಲಿ ಮತ್ತೊಂದು ಭೂಕಂಪನ ಸಂಭವಿಸಿದೆ. ಕಲ್ಲು ಮಣ್ಣಿನ ರಾಶಿಯಡಿಯಿಂದ ಹಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮಂಗಳವಾರ ಕಲ್ಲುಮಣ್ಣಿನ ರಾಶಿಯಡಿ ಘಾನಾದ ರಾಷ್ಟ್ರೀಯ ಫುಟ್ಬಾಲ್ ತಂಡದ ಆಟಗಾರ ಕ್ರಿಶ್ಚಿಯನ್ ಅಸ್ತು ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದಿರುವುದು ಪತ್ತೆಯಾಗಿದ್ದು ಅವರನ್ನು ರಕ್ಷಿಸಲಾಗಿದೆ. ಈ ಮಧ್ಯೆ ಮಂಜು ಮತ್ತು ಮಳೆ ರಕ್ಷಣಾ ಕಾರ್ಯಾಚರಣೆಯನ್ನು ವಿಳಂಬಗೊಳಿಸಿದೆ ಎಂದು ವರದಿಯಾಗಿದೆ.

ಸಾವಿರಾರು ಮಂದಿ ಸೋಮವಾರ ರಾತ್ರಿಯಿಡೀ ತೀವ್ರ ಚಳಿಯ ಮಧ್ಯೆ ತೆರೆದ ಬಯಲಿನಲ್ಲಿ ಆಶ್ರಯ ಪಡೆದಿದ್ದಾರೆ. ಟರ್ಕಿಯ ಗಝಿಯಾಂಟೆಪ್ ನಗರದಲ್ಲಿ ಸಂತ್ರಸ್ತರಿಗೆ ಶಾಪಿಂಗ್ ಮಾಲ್ ಗಳಲ್ಲಿ, ಕ್ರೀಡಾಂಗಣ, ಮಸೀದಿಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದೆ. 

ಭೂಕಂಪಕ್ಕೆ ಸಂಬಂಧಿಸಿ ಮಂಗಳವಾರದ ಕೆಲವು ಮಹತ್ವದ ಬೆಳವಣಿಗೆಗಳು:

* 7 ದಿನಗಳ ರಾಷ್ಟ್ರೀಯ ಶೋಕ ಘೋಷಿಸಿದ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯೀಪ್ ಎರ್ಡೋಗನ್.
* ಎರ್ಡೋಗನ್ಗೆ ಕರೆ ಮಾಡಿ ಸಂತಾಪ ಸೂಚಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್. ಎಲ್ಲಾ ರೀತಿಯ ನೆರವಿನ ಭರವಸೆ
* ಟರ್ಕಿಗೆ ಅಮೆರಿಕದ ರಕ್ಷಣೆ ಮತ್ತು ಶೋಧ ಕಾರ್ಯಾಚರಣೆ ತಂಡ ರವಾನಿಸುವುದಾಗಿ ಅಮೆರಿಕ ಘೋಷಣೆ.
* ಟರ್ಕಿಯಲ್ಲಿ ಕಲ್ಲುಮಣ್ಣಿನ ರಾಶಿಯಡಿ ಘಾನಾದ ರಾಷ್ಟ್ರೀಯ ಫುಟ್ಬಾಲ್ ತಂಡದ ಆಟಗಾರ ಕ್ರಿಶ್ಚಿಯನ್ ಅಸ್ತು ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದಿದ್ದು ಅವರನ್ನು ರಕ್ಷಿಸಲಾಗಿದೆ.
* ಸಿರಿಯಾದಲ್ಲಿ ಸರಕಾರದ ನಿಯಂತ್ರಣದಲ್ಲಿರುವ ಪ್ರದೇಶ ಹಾಗೂ ವಿರೋಧಿಗಳ(ಬಂಡುಗೋರರ) ನಿಯಂತ್ರಣದಲ್ಲಿರುವ ಪ್ರದೇಶ ಎರಡಕ್ಕೂ ಭೂಕಂಪದಿಂದ ವ್ಯಾಪಕ ನಾಶ-ನಷ್ಟ ಉಂಟಾಗಿದೆ.
* ಬಂಡುಗೋರರ ನಿಯಂತ್ರಣದಲ್ಲಿರುವ ಪ್ರಾಂತದಲ್ಲಿ ನೂರಾರು ಕುಟುಂಬಗಳು ಕಟ್ಟಡದ ಅವಶೇಷಗಳಡಿ ಸಿಲುಕಿರುವುದಾಗಿ ವರದಿಯಾಗಿದೆ. ಯುದ್ಧದಿಂದಾಗಿ ಇತರ ಪ್ರದೇಶದಿಂದ ಸ್ಥಳಾಂತರಗೊಂಡಿರುವ ಸುಮಾರು 4 ಮಿಲಿಯನ್ ಜನತೆ ಇಲ್ಲಿ ಆಶ್ರಯ ಪಡೆದಿದ್ದಾರೆ. ಇಲ್ಲಿರುವ ಬಹುತೇಕ ಕಟ್ಟಡಗಳು ಕುಸಿದು ಬಿದ್ದಿವೆ.
* ಯುದ್ಧದ ಸಂದರ್ಭ ಬಾಂಬ್ ದಾಳಿಯಿಂದ ಜರ್ಝರಿತಗೊಂಡಿರುವ ಕೆಲವು ಕಟ್ಟಡಗಳು ಉಳಿದುಕೊಂಡಿದ್ದು ಇದರಲ್ಲಿ ಸಂತ್ರಸ್ತರಿಗೆ ತಾತ್ಕಾಲಿಕ ನೆಲೆ ಕಲ್ಪಿಸಲಾಗಿದೆ.
* ಅಗತ್ಯ ಮೂಲಸೌಕರ್ಯದ ಕೊರತೆಯಿಂದ ಬಳಲುತ್ತಿರುವ ವೈದ್ಯಕೀಯ ಕೇಂದ್ರಗಳಲ್ಲಿ ಗಾಯಗೊಂಡವರನ್ನು ದಾಖಲಿಸಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಹೆರಿಗೆ ವಾರ್ಡ್ಗಳನ್ನು ತೆರವುಗೊಳಿಸಿ ಗಾಯಾಳುಗಳಿಗೆ ಆಶ್ರಯ ಕಲ್ಪಿಸಲಾಗಿದೆ ಎಂದು ರಕ್ಷಣಾ ಕಾರ್ಯಕರ್ತರು ಹೇಳಿದ್ದಾರೆ.

ಟರ್ಕಿಯಲ್ಲಿ ಮತ್ತೆ ಭೂಕಂಪ

ಸೋಮವಾರದ ಭೀಕರ ಭೂಕಂಪದಿಂದ ಚೇತರಿಸಿಕೊಳ್ಳುವ ಮುನ್ನವೇ ಟರ್ಕಿಗೆ ಮತ್ತೊಂದು ಭೂಕಂಪದ ಆಘಾತ ಎದುರಾಗಿದೆ. ಮಂಗಳವಾರ ಬೆಳಿಗ್ಗೆ ಪೂರ್ವ ಟರ್ಕಿಯಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ಹೇಳಿದೆ.
ಪೂರ್ವ ಟರ್ಕಿಯಲ್ಲಿ ಭೂಮಿಯ ಮೇಲ್ಮೈಯಿಂದ 46 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.

share
Next Story
X