Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಜಾಮೀಯ ಮಸೀದಿಯಲ್ಲಿ ರಕ್ತದಾನ...

ಉಡುಪಿ: ಜಾಮೀಯ ಮಸೀದಿಯಲ್ಲಿ ರಕ್ತದಾನ ಶಿಬಿರ

7 Feb 2023 3:46 PM IST
share
ಉಡುಪಿ: ಜಾಮೀಯ ಮಸೀದಿಯಲ್ಲಿ ರಕ್ತದಾನ ಶಿಬಿರ

ಉಡುಪಿ, ಫೆ.7: ರಕ್ತದಾನ ಮಾಡುವುದರಿಂದ ಮನಸ್ಸಿಗೆ ಖುಷಿ ಸಿಗುತ್ತದೆ ಮತ್ತು ರಕ್ತದೊತ್ತಡ, ಮಧುಮೇಹದಂತಹ ಹಲವು ರೋಗಗಳು ನಿಯಂತ್ರಣಕ್ಕೆ ಬರುತ್ತದೆ. ಹಾಗಾಗಿ ರಕ್ತದಾನವು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುತ್ತದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಉಡುಪಿ ಕರಾವಳಿ ಶಾಖೆಯ ಅಧ್ಯಕ್ಷ ಹಾಗೂ ಮನೋ ವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ.

ಉಡುಪಿ ಮುಸ್ಲಿಮ್ ವೆಲ್‌ಫೇರ್ ಅಸೋಸಿಯೇಶನ್ ಮತ್ತು ಮಣಿಪಾಲ ಕೆಎಂಸಿಯ ಬ್ಲಡ್‌ಬ್ಯಾಂಕ್ ಸಹಯೋಗದಲ್ಲಿ ಉಡುಪಿ ಜಾಮೀಯ ಮಸೀದಿಯ ನೆಲಮಾಳಿಗೆಯಲ್ಲಿ ಏರ್ಪಡಿಸಲಾದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಭಾರತವು ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆಯನ್ನು ಎದುರಿಸುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದ ಕಾರಣದಿಂದ ಪ್ರತಿವರ್ಷ ವಿವಿಧ ಕಾಯಿಲೆ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಸಾವನ್ನಪ್ಪುತ್ತಿದ್ದಾರೆ. ಈ ಜೀವಗಳನ್ನು ಉಳಿಸಲು ರಕ್ತದಾನಕ್ಕೆ ಹೆಚ್ಚಿನ ಪ್ರೋತ್ಸಾಹ ಅತೀಅಗತ್ಯ. ಅಲ್ಲದೆ ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದರು.

ಮಣಿಪಾಲ ಕೆಎಂಸಿ ಬ್ಲಡ್ ಬ್ಯಾಂಕಿನ ಡಾ.ಮುಹಮ್ಮದ್ ಅಝೀಝ್ ಮಾತನಾಡಿ, ರಕ್ತದಾನ ಮಾಡುವುದರಿಂದ ಮೂರು ಜನರ ಪ್ರಾಣ ಉಳಿಸ ಬಹುದಾಗಿದೆ. ರಕ್ತದಾನದ ಬಗ್ಗೆ ಜನರಲ್ಲಿ ಸಾಕಷ್ಟು ತಪ್ಪು ಕಲ್ಪನೆಗಳಿವೆ. ಇದನ್ನು ದೂರ ಮಾಡಬೇಕಾಗಿದೆ. ರಕ್ತಕ್ಕೆ ಸಂಬಂಧಿಸಿ ವ್ಯಾಪಾರ ಮಾಡಲು ಆಗುವುದಿಲ್ಲ. ಯಾಕೆಂದರೆ ಅದನ್ನು ಉತ್ಪಾದನೆ ಮಾಡಲು ಆಗುವುದಿಲ್ಲ. ಮನುಷ್ಯರೇ ರಕ್ತದಾನ ಮಾಡಿ ಇತರರ ಜೀವ ಉಳಿಸಬೇಕಾಗುತ್ತದೆ ಎಂದರು.

ಉಡುಪಿ ಮಸೀದಿ ಅಧ್ಯಕ್ಷ ಮುಹಮ್ಮದ್ ಅರ್ಶಾದ್, ಖತೀಬ್ ವೌಲಾನ ರಶೀದ್ ಅಹ್ಮದ್ ನದ್ವಿ, ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಯು. ಇಬ್ರಾಹಿಮ್ ಉಪಸ್ಥಿತರಿದ್ದರು.

ಅಸೋಸಿಯೇಶನ್ ಅಧ್ಯಕ್ಷ ಕಲ್ಯಾಣಪುರ ಅಬ್ದುಲ್ ಗಫೂರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ವಿ.ಎಸ್.ಉಮರ್ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜನಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಸಾಕಷ್ಟು ತಪ್ಪು ಕಲ್ಪನೆ ಇರುವುದರಿಂದ ಅವರಿಗೆ ಅರಿವು ಮೂಡಿಸುವುದು ಅತೀ ಅಗತ್ಯವಾಗಿದೆ. ಹೆಚ್ಚು ಜನರು ಸೇರುವ ಧಾರ್ಮಿಕ ಕೇಂದ್ರಗಳಲ್ಲಿ ನಿಯಮಿತವಾಗಿ ರಕ್ತದಾನದಂತಹ ಶಿಬಿರಗಳನ್ನು ನಡೆಸಿದರೆ ದೇಶದಲ್ಲಿನ ರಕ್ತದ ಕೊರತೆಯನ್ನು ನೀಗಿಸಬಹುದು. ಧಾರ್ಮಿಕ ಕೇಂದ್ರಗಳು ಕೇವಲ ಪೂಜೆ ಪ್ರಾರ್ಥನೆಗಳಿಗೆ ಸೀಮಿತವಾಗಿರದೆ ಸಮಾಜಮುಖಿಯಾಗಿ ಸ್ಪಂದಿಸುವ ಕಾರ್ಯ ಮಾಡಬೇಕು.

-ಡಾ.ಪಿ.ವಿ.ಭಂಡಾರಿ, ಮನೋವೈದ್ಯರು

share
Next Story
X