Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೇಶ್ವೆ ಡಿಎನ್ ಎ ವ್ಯಕ್ತಿಯನ್ನೇ ಸಿಎಂ...

ಪೇಶ್ವೆ ಡಿಎನ್ ಎ ವ್ಯಕ್ತಿಯನ್ನೇ ಸಿಎಂ ಅಭ್ಯರ್ಥಿ ಎಂದು BJP ಘೋಷಣೆ ಮಾಡಲಿ: ಕುಮಾರಸ್ವಾಮಿ ಸವಾಲು

''ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ, ಕ್ಷಮೆಯನ್ನೂ ಕೇಳುವುದಿಲ್ಲ''

7 Feb 2023 10:15 PM IST
share
ಪೇಶ್ವೆ ಡಿಎನ್ ಎ ವ್ಯಕ್ತಿಯನ್ನೇ ಸಿಎಂ ಅಭ್ಯರ್ಥಿ ಎಂದು BJP ಘೋಷಣೆ ಮಾಡಲಿ: ಕುಮಾರಸ್ವಾಮಿ ಸವಾಲು
''ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ, ಕ್ಷಮೆಯನ್ನೂ ಕೇಳುವುದಿಲ್ಲ''

ಬೆಂಗಳೂರು: ಮರಾಠಿ ಪೇಶ್ವೆಗಳ ಡಿಎನ್ ಎ ವ್ಯಕ್ತಿಯ ಬಗ್ಗೆ ನಾನು ಕೊಟ್ಟ ಹೇಳಿಕೆಯನ್ನು ವಾಪಸ್ ಪಡೆಯುವ ಪ್ರಶ್ನೆ ಇಲ್ಲ, ಕ್ಷಮೆಯನ್ನೂ ಕೇಳುವುದಿಲ್ಲ. ತಾಕತ್ತಿದ್ದರೆ, ನಾನು ಹೇಳಿದ ವ್ಯಕ್ತಿಯನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿ ಬಿಜೆಪಿಯವರು ಚುನಾವಣೆಗೆ ಹೋಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ. 

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ಅವರು, ಪ್ರಹ್ಲಾದ್ ಜೋಷಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು ಹಾಗೂ ತಮ್ಮ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಹರಿಹಾಯ್ದರು.

ಬಿಜೆಪಿಯಿಂದ ಯಾರು ಮುಖ್ಯಮಂತ್ರಿ ಆಗಬೇಕು ಎಂದು ನಾನು ಹೇಳಿಲ್ಲ. ಅವರು ಯಾರನ್ನು ಬೇಕಾದರೂ ಸಿಎಂ ಮಾಡಿಕೊಳ್ಳಲಿ. ಬೇಕಾದರೆ ಪ್ರಹ್ಲಾದ್ ಜೋಷಿ ಅವರನ್ನೇ ಸಿಎಂ ಮಾಡುತ್ತೇವೆ ಎಂದು ಘೋಷಣೆ ಮಾಡಲಿ ಎಂದು ಹೇಳಿದರು.

''ಬ್ರಾಹ್ಮಣ, ದಲಿತ ಯಾವುದೇ ಸಮಾಜಕ್ಕೂ ಅಪಮಾನ ಮಾಡುವ ಕುಟುಂಬದಿಂದ ನಾನು ಬಂದಿಲ್ಲ. ಈ ದೇಶದ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ, ಪ್ರಧಾನಿ ಆಗಬಹುದು. ಆದರೆ, ನಿರ್ದಿಷ್ಟವಾದ ಈ ವ್ಯಕ್ತಿಯನ್ನು ಬಿಜೆಪಿಯವರು ಸಿಎಂ ಮಾಡಲು ಹೊರಟಿದ್ದಾರೆ. ನನಗೆ ಅವರ ಬಗ್ಗೆ ತಕರಾರು ಇಲ್ಲ, ತಕರಾರು ಇರುವುದು ಅವರ ಮೂಲದ ಬಗ್ಗೆ ಎಂದು'' ಕುಮಾರಸ್ವಾಮಿ ಅವರು ಹೇಳಿದರು.

''ಕಳೆದ ಮೂರು ವರ್ಷದಿಂದ ನಮ್ಮ ರಾಜ್ಯದಲ್ಲಿ ನಡೆದ ಒಂದೊಂದು ಘಟನೆ ನೋಡಿ. ಕರ್ನಾಟಕಕ್ಕೂ ಸಾವರ್ಕರ್ ಗೂ ಸಂಬಂಧ ಏನು? ಸುವರ್ಣಸೌಧದಲ್ಲೂ ಸಾವರ್ಕರ್ ಫೋಟೋ ಹಾಕಾಯಿತು. ಈಗ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸಿದ, ಶೃಂಗೇರಿ ಮಠದ ಮೇಲೆ ದಳು ನಡೆಸಿದ, ಶಿವಾಜಿ ಮತ್ತು ಗಾಂಧೀಜಿ ಅವರನ್ನು ಹತ್ಯೆ ಮಾಡಿದ ಮರಾಠಿ ಪೇಶ್ವೆಗಳ ಮೂಲದ ವ್ಯಕ್ತಿಯನ್ನು ರಾಜ್ಯದ ಮೇಲೆ ಹೇರಲು ಬಿಜೆಪಿ ಹೊರಟಿದೆ. ಅದಕ್ಕೆ ನನ್ನ ವಿರೋಧವಿದೆ'' ಎಂದು ಅವರು ಸ್ಪಷ್ಟಪಡಿಸಿದರು.

''ಬಿಜೆಪಿ ಸಮಾಜ ಹೊಡೆಯುವ ಕೆಲಸಕ್ಕೆ ಕೈ ಹಾಕಿದೆ. ಮೀಸಲಾತಿ ವಿಚಾರದಲ್ಲೂ ಗೊಂದಲ ಸೃಷ್ಟಿ ಮಾಡಿದ್ದಾರೆ. ಮೂಗಿಗೆ ತುಪ್ಪ ಸವರುವ ಜನರನ್ನು ನಾವು ನೋಡಿದ್ದೇವೆ. ಇವರು ಈಗ ತಲೆಗೆ ತುಪ್ಪ ಸವರಿದ್ದಾರೆ, ಜನರಿಗೆ ವಾಸನೆ ಕೂಡ ಗೊತ್ತಾಗಬಾರದು ಎನ್ನುವ ಉದ್ದೇಶ ಇವರದ್ದು. ಹಿಂಬಾಗಿಲಿನಿಂದ ರಾಜಕೀಯ ಮಾಡ್ತಾ ಇದ್ದಾರೆ'' ಇವರು ಎಂದು ಅವರು ಟೀಕಾಪ್ರಹಾರ ನಡೆಸಿದರು.

''ಕಳೆದ ಮೂರು ದಿನಗಳ ಹಿಂದೆ ನಾನು ಕೊಟ್ಟ ಒಂದು ಹೇಳಿಕೆಯನ್ನು ಅವರದ್ದೇ ಆದ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮಾಜದಲ್ಲಿ ನನ್ನ ಹೇಳಿಕೆ ಯನ್ನು ಒಂದೊಂದು ವಿಶ್ಲೇಷಣೆ ರೀತಿ ಮಾತಾಡ್ತಾ ಇದ್ದಾರೆ. ನಾನು ಜಾತಿ ರಾಜಕಾರಣಕ್ಕೆ ಪ್ರಾಶಸ್ತ್ಯ ಕೊಟ್ಟವನಲ್ಲ. ಜಾತಿಯ ಹೆಸರಿನಿಂದ ರಾಜಕಾರಣ ಮಾಡಿದವನಲ್ಲ. ನಮ್ಮ ಕುಟುಂಬ ಯಾವುದೇ ಸಮಾಜಕ್ಕೆ ಅಪಮಾನ ಮಾಡಿಲ್ಲ. ಅಂಥ ಸಂಸ್ಕಾರ ನಮ್ಮದಲ್ಲ'' ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

''ಕುಮಾರಸ್ವಾಮಿ ಹೇಳಿಕೆಯಲ್ಲಿ ಬದಲಾವಣೆ ಆಗಿದೆ ಎಂದು ಕೆಲವರು ಹೇಳಿದ್ದಾರೆ. ಯೂಟರ್ನ್ ಹೊಡೆದಿದ್ದಾರೆ ಎಂದು ಟೀಕಿಸಿದ್ದಾರೆ. ನಾನು ಯಾವ ಟರ್ನೂ ಹೊಡೆದಿಲ್ಲ, ಹೊಡೆಯೋದು ಇಲ್ಲ. ಅವರವರು ಅವರದ್ದೇ ಆದ ರೀತಿಯಲ್ಲಿ ಅರ್ಥೈಸಿಕೊಂಡಿದ್ದಾರೆ'' ಎಂದರು ಅವರು

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಎಮ್ ಎಲ್ ಸಿ ಭೋಜೇಗೌಡ, ಮಾಜಿ  ಎಮ್ ಎಲ್ ಸಿ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಹಲವರು  ಉಪಸ್ಥಿತರಿದ್ದರು.

share
Next Story
X