Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಬಿಜೆಪಿಗೆ ಎಷ್ಟು ಹಣ ನೀಡಿದ್ದಾರೆ:...

ಅದಾನಿ ಬಿಜೆಪಿಗೆ ಎಷ್ಟು ಹಣ ನೀಡಿದ್ದಾರೆ: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಪ್ರಶ್ನೆ

7 Feb 2023 10:18 PM IST
share
ಅದಾನಿ ಬಿಜೆಪಿಗೆ ಎಷ್ಟು ಹಣ ನೀಡಿದ್ದಾರೆ: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಪ್ರಶ್ನೆ

ಹೊಸದಿಲ್ಲಿ, ಫೆ. 7: ಅದಾನಿ (Adani) ಸಮೂಹ ಶೇರು ವಂಚನೆ ನಡೆಸಿರುವ ಕುರಿತ ಅಮೆರಿಕದ ಷೇರು ವಿಕ್ರಯ ಸಂಸ್ಥೆ ಹಿಂಡನ್‌ಬರ್ಗ್ ವರದಿಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರು ಮಂಗಳವಾರ ಲೋಕಸಭೆಯಲ್ಲಿ ಮೋದಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ 20 ವರ್ಷಗಳಲ್ಲಿ ಬಿಜೆಪಿಗೆ ಅದಾನಿ ಎಷ್ಟು ಹಣ ನೀಡಿದ್ದಾರೆ ಎಂದು ಅವರು ಕಟುವಾಗಿ ಪ್ರಶ್ನಿಸಿದ್ದಾರೆ. 

ನರೇಂದ್ರ ಮೋದಿ(Narendra Modi) ನೇತೃತ್ವದ ಕೇಂದ್ರ ಸರಕಾರ 2014ರಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಅದಾನಿ ಸಮೂಹಕ್ಕೆ ಅನುಕೂಲಕರವಾಗಿ ವರ್ತಿಸುತ್ತಿದೆ. 2014ರಲ್ಲಿ ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಅದಾನಿ ಅವರ ಸ್ಥಾನ 609 ಆಗಿತ್ತು. ಈಗ ಕೇವಲ ಮ್ಯಾಜಿಕ್‌ನಿಂದ ಅವರು ಎರಡನೇ ಸ್ಥಾನಕ್ಕೆ ತಲುಪಿದ್ದಾರೆ ಎಂದು ಅವರು ಹೇಳಿದರು. ವಿಮಾನ ನಿಲ್ದಾಣಗಳ ಸ್ವಾಧೀನಪಡಿಸಿಕೊಳ್ಳಲು ಅದಾನಿಗೆ ನೆರವು ನೀಡಲು ಮೋದಿ ಸರಕಾರ ನಿಯಮಗಳನ್ನೇ ಬದಲಾಯಿಸಿತು ಎಂದು ಅವರು ಆರೋಪಿಸಿದರು. ‘‘ವಿಮಾನ ನಿಲ್ದಾಣಗಳ ಬಗ್ಗೆ ಅನುಭವ ಇರುವ ಕಂಪೆನಿ/ವ್ಯಕ್ತಿಗಳಿಗೆ ಮಾತ್ರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಹೊಣೆಗಾರಿಕೆ ನೀಡಬೇಕು ಎಂಬ ನಿಯಮವಿದೆ. ಆದರೆ, ಸರಕಾರ ಅದಾನಿ ಸಮೂಹಕ್ಕಾಗಿ ನಿಯಮವನ್ನು ಬದಲಾಯಿಸಿತು ಹಾಗೂ 6 ವಿಮಾನ ನಿಲ್ದಾಣಗಳನ್ನು ಅವರಿಗೆ ಹಸ್ತಾಂತರಿಸಿತು’’ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅದಾನಿ ಜೊತೆಯಾಗಿ ಪ್ರಯಾಣಿಸುತ್ತಿರುವ ಭಾವಚಿತ್ರವನ್ನು ಪ್ರದರ್ಶಿಸಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹಾಗೂ ಅದಾನಿ ಜೊತೆಯಾಗಿ ಎಷ್ಟು ಬಾರಿ ಪ್ರಯಾಣಿಸಿದ್ದಾರೆ ಎಂದು ತಿಳಿಯ ಬಯಸುವುದಾಗಿ ಹೇಳಿದರು. ಪ್ರಧಾನಿ ಅವರು ಸಂಸತ್ತಿನಲ್ಲಿ ಬುಧವಾರ ಭಾಷಣ ಮಾಡುವ ಸಂದರ್ಭ ನಾನು ಈ ಪ್ರಶ್ನೆಗಳಿಗೆ ಉತ್ತರ ಪಡೆಯಲು ಬಯಸುತ್ತೇನೆ. ವಿದೇಶಿ ಪ್ರವಾಸದಲ್ಲಿ ಅದಾನಿ ಅವರು ಎಷ್ಟು ಬಾರಿ ನಿಮ್ಮೆಂದಿಗೆ ಜೊತೆಯಾಗಿದ್ದರು? ನೀವು ವಿದೇಶದಲ್ಲಿ ಇಳಿದಾಗ ಎಷ್ಟು ಬಾರಿ ಅವರು ನಿಮ್ಮನ್ನು ಭೇಟಿಯಾದರು? ನೀವು ಭೇಟಿ ನೀಡಿದ ಬಳಿಕ ವಿದೇಶದಲ್ಲಿ ಅದಾನಿ ಎಷ್ಟು ಬಾರಿ ಗುತ್ತಿಗೆಯನ್ನು ಪಡೆದುಕೊಂಡರು ? ಎಂದು ಅವರು ಪ್ರಶ್ನಿಸಿದರು. 

ಬಂದರು, ವಿಮಾನ ನಿಲ್ದಾಣ ಹಾಗೂ ರಕ್ಷಣೆ ಸೇರಿದಂತೆ ಅದಾನಿ ಅವರು ಈಗ ಹಲವು ಕ್ಷೇತ್ರಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. ನಾನು ಭಾರತ್ ಜೋಡೊ ಯಾತ್ರೆ ನಡೆಸುತ್ತಿದ್ದ ಸಂದರ್ಭ, ಅದಾನಿ ಅವರ ಆಸ್ತಿ ಮೌಲ್ಯ 2014ರಲ್ಲಿ 8 ಶತಕೋಟಿ ಡಾಲರ್ ಇದ್ದುದು 2022ರಲ್ಲಿ 140 ಶತಕೋಟಿ ಡಾಲರ್‌ಗೆ ಹೇಗೆ ತಲುಪಿತು ಎಂದು ಯುವಜನರು ನನ್ನನ್ನು ಪ್ರಶ್ನಿಸಿದರು. ಈ ರೀತಿ ಉನ್ನತ ಮಟ್ಟಕ್ಕೆ ಏರಲು ಅದಾನಿ ಅವರ ಹಿಂದಿರುವ ಯಶಸ್ವಿ ಸೂತ್ರ ಯಾವುದು ಎಂದು ನಾವು ತಿಳಿಯಲು ಯುವಜನರು ಆಶಿಸಿದ್ದಾರೆ ಎಂದರು. 

ತಮಿಳುನಾಡು, ಕೇರಳದಿಂದ ಹಿಮಾಚಲಪ್ರದೇಶದ ವರೆಗೆ ಎಲ್ಲೆಲ್ಲಿಯೂ ನಾವು ಅದಾನಿ ಎಂಬ ಒಂದೇ ಹೆಸರು ಕೇಳಿದ್ದೇವೆ. ದೇಶಾದ್ಯಂತ ಕೇವಲ ಅದಾನಿ, ಅದಾನಿ, ಅದಾನಿ..’’. ಅದಾನಿ ಅವರು ಯಾವುದೇ ಉದ್ಯಮಕ್ಕೆ ಪ್ರವೇಶಿಸಿದರೆ ವಿಫಲರಾಗದೇ ಇರುವುದರ ಬಗ್ಗೆ ಜನರು ಆಗಾಗ ನನ್ನನ್ನು ಪ್ರಶ್ನಿಸುತ್ತಾರೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅದಾನಿ ನಡುವಿನ ಸಂಬಂಧದ ಕುರಿತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾಕ್ಕೆ ತೆರಳಿದ ಮರು ದಿನ ಎಸ್‌ಬಿಐ ಅದಾನಿಗೆ 1 ದಶಲಕ್ಷ ಡಾಲರ್ ಸಾಲ ನೀಡಿದೆ. ಅನಂತರ ಪ್ರಧಾನಿ ಅವರು ಬಾಂಗ್ಲಾದೇಶಕ್ಕೆ ಪ್ರವಾಸ ಮಾಡಿದರು. ಬಾಂಗ್ಲಾದೇಶದ ವಿದ್ಯುಚ್ಛಕ್ತಿ ಅಭಿವೃದ್ಧಿ ಮಂಡಳಿ ಅದಾನಿ ಅವರೊಂದಿಗೆ 25 ವರ್ಷಗಳ ಗುತ್ತಿಗೆಗೆ ಸಹಿ ಹಾಕಿತು ಎಂದು ರಾಹುಲ್ ಗಾಂಧಿ ಹೇಳಿದರು.

‘‘ಅಗ್ನಿವೀರ್ ಕಲ್ಪನೆ ಆರ್‌ಎಸ್‌ಎಸ್‌ನಿಂದ ಬಂದಿದೆ ಹಾಗೂ ಸೇನೆಯ ಮೇಲೆ ಹೇರಿದಂತೆ ಕಾಣುತ್ತದೆ’’ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ‘‘ಅಗ್ನಿವೀರ್ ಯೋಜನೆ ಸೇನೆಯಿಂದ ಹುಟ್ಟಿಕೊಂಡಿಲ್ಲ. ಅದನ್ನು ಎನ್‌ಎಸ್‌ಎ ದೋವಲ್ ಸೇನೆಯ ಮೇಲೆ ಹೇರಿದ್ದಾರೆ ಎಂದು ನಿವೃತ್ತ ಸೈನಿಕರು ಹೇಳಿದ್ದಾರೆ. ಅಗ್ನಿವೀರ್ ಯೋಜನೆ ರಾಷ್ಟ್ರಪತಿ ಭಾಷಣದಲ್ಲಿ ಒಮ್ಮೆ ಮಾತ್ರ ಪ್ರಸ್ತಾವವಾಗಿದ್ದು ಹೇಗೆ ? ನಿರುದ್ಯೋಗ ಹಾಗೂ ಹಣದುಬ್ಬರ ಮುಂತಾದ ಪದಗಳು ಅಲ್ಲಿ ಯಾಕೆ ಪ್ರಸ್ತಾವವಾಗಿಲ್ಲ ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ರಕ್ಷಣಾ ಕ್ಷೇತ್ರದಲ್ಲಿ ಅದಾನಿ ಅವರಿಗೆ ಯಾವುದೇ ಅನುಭವ ಇಲ್ಲ. ಅದಾನಿ ಯಾವತ್ತೂ ಡ್ರೋನ್‌ಗಳನ್ನು ನಿರ್ಮಿಸಿಲ್ಲ. ಆದರೆ, ಎಚ್‌ಎಎಲ್ ಹಾಗೂ ಇತರ ಕಂಪೆನಿಗಳು ಡ್ರೋನ್‌ಗಳನ್ನು ನಿರ್ಮಿಸಿವೆ. ಇದರ ಹೊರತಾಗಿಯೂ ಅದಾನಿ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಗುತ್ತಿಗೆ ಪಡೆದುಕೊಂಡಿದ್ದಾರೆ.

share
Next Story
X