Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಗರ ಪ್ರದೇಶದ ಬಡವರಿಗೆ ಸಂಜೀವಿನಿ ‘ನಮ್ಮ...

ನಗರ ಪ್ರದೇಶದ ಬಡವರಿಗೆ ಸಂಜೀವಿನಿ ‘ನಮ್ಮ ಕ್ಲಿನಿಕ್’

ಪ್ರತಿ ಕ್ಲಿನಿಕ್‍ನಲ್ಲಿ 15 ರಿಂದ 20 ಸಾವಿರ ಜನರಿಗೆ ಸಮಗ್ರ-ಗುಣಮಟ್ಟದ ಆರೋಗ್ಯ ಸೇವೆ

7 Feb 2023 10:31 PM IST
share
ನಗರ ಪ್ರದೇಶದ ಬಡವರಿಗೆ ಸಂಜೀವಿನಿ ‘ನಮ್ಮ ಕ್ಲಿನಿಕ್’
ಪ್ರತಿ ಕ್ಲಿನಿಕ್‍ನಲ್ಲಿ 15 ರಿಂದ 20 ಸಾವಿರ ಜನರಿಗೆ ಸಮಗ್ರ-ಗುಣಮಟ್ಟದ ಆರೋಗ್ಯ ಸೇವೆ

ಬೆಂಗಳೂರು, ಫೆ.7: ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ‘ನಮ್ಮ ಕ್ಲಿನಿಕ್’ ಸೇವೆಯನ್ನು ಪ್ರಾರಂಭಿಸಿದೆ. ದಿಲ್ಲಿ ‘ಮೊಹಲ್ಲಾ ಕ್ಲಿನಿಕ್’ ಮಾದರಿಯಲ್ಲಿ ಸ್ಥಾಪಿಸಲಾದ ನಮ್ಮ ಕ್ಲಿನಿಕ್‍ಗಳು 12 ಸೇವೆಗಳನ್ನು ಉಚಿತವಾಗಿ ನೀಡಲಿದ್ದು, ಪ್ರತಿ ಕ್ಲಿನಿಕ್ 15,000 ರಿಂದ 20,000 ಜನಸಂಖ್ಯೆಗೆ ಸೇವೆಯನ್ನು ಒದಗಿಸಲಿದೆ. 

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪ್ರತಿ 50,000 ಜನಸಂಖ್ಯೆಗೆ ಒಂದರಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ 15 ನೇ ಹಣಕಾಸು ಆಯೋಗದ ಅನುದಾನದಡಿ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನು ತೆರೆಯಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಒಟ್ಟು 243 ಬಿಬಿಎಂಪಿ ವಾರ್ಡ್‍ಗಳ ಪೈಕಿ 108 ವಾರ್ಡ್‍ಗಳಲ್ಲಿ ನಮ್ಮ ಕ್ಲಿನಿಕ್‍ಗಳನ್ನು ತೆರೆಯಲಾಗಿದ್ದು, ಮುಂದಿನ ಕೆಲವು ಹಂತಗಳಲ್ಲಿ ಉಳಿದ 135 ಕ್ಲಿನಿಕ್‍ಗಳನ್ನು ಪ್ರಾರಂಭಿಸಲು ಯೋಜನೆ ರೂಪಿಸಲಾಗುತ್ತಿದೆ. ಅಲ್ಲದೆ, ವಿವಿಧ ಜಿಲ್ಲೆಗಳ ನಗರ ಪ್ರದೇಶದಲ್ಲಿ 195 ನಮ್ಮ ಕ್ಲಿನಿಕ್‍ಗಳನ್ನು ಆರಂಭಿಸಲಾಗುತ್ತಿದ್ದು, ರಾಜ್ಯಾದ್ಯಂತ ಒಟ್ಟು 438 ನಮ್ಮ ಕ್ಲಿನಿಕ್‍ಗಳು ಶೀಘ್ರದಲ್ಲೇ ಬಾಗಿಲು ತರೆಯಲಿವೆ. 

ನಮ್ಮ ಕ್ಲಿನಿಕ್‍ಗಳು ನಗರ ಪ್ರದೇಶದ ಬಡ, ದುರ್ಬಲ ವರ್ಗದ ಜನರಿಗೆ ಗುಣಮಟ್ಟದ ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುತ್ತಿವೆ. ಉಚಿತ ರೆಫರಲ್ ಸೇವೆಗಳನ್ನು ಒದಗಿಸುವ ಮುಖಾಂತರ ದ್ವಿತೀಯ ಮತ್ತು ತೃತೀಯ ಹಂತದ ಆಸ್ಪತ್ರೆಗಳಿಗೂ ಇವು ಸಂಪರ್ಕ ಕಲ್ಪಿಸುತ್ತಿವೆ. ಆರೋಗ್ಯ ಸೇವೆಗಳನ್ನು ಪಡೆಯಲು ತಗುಲುವ ವೆಚ್ಚ ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ವೈಧ್ಯಾಧಿಕಾರಿ ಡಾ.ಪ್ರಭು ತಿಳಿಸಿದ್ದಾರೆ.

ನಮ್ಮ ಕ್ಲಿನಿಕ್‍ಗಳಲ್ಲಿ ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ ರಕ್ಷಣೆ, ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು, ಸಾರ್ವತ್ರಿಕ ಲಸಿಕಾಕರಣ ಸೇವೆಗಳು, ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಖಾಯಿಲೆಗಳಿಗೆ ಹೊರ ರೋಗಿ ಸೇವೆ, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ, ಬಾಯಿ ಆರೋಗ್ಯ ಸೇವೆಗಳು, ನೇತ್ರ ಹಾಗೂ ಕಿವಿ, ಮೂಗು, ಗಂಟಲು ಆರೋಗ್ಯ ಆರೈಕೆ ಸೇವೆಗಳ ಜೊತೆಗೆ ಮಾನಸಿಕ ಆರೋಗ್ಯ, ವೃದ್ಧಾಪ್ಯ ಆರೈಕೆ, ಉಪಶಮನಕಾರಿ ಆರೈಕೆ ಸೇವೆ, ಸುಟ್ಟ ಗಾಯಗಳು, ಅಪಘಾತ, ಮತ್ತಿತರ ಗಾಯಗಳು ಸೇರಿದಂತೆ ತುರ್ತು ವ್ಯೆದ್ಯಕೀಯ ಸೇವೆಗಳು, ಉಚಿತ ಆರೋಗ್ಯ ತಪಾಸಣೆ , ಪ್ರಯೋಗ ಶಾಲಾ ಸೇವೆಗಳು ಮತ್ತು ಚಿಕಿತ್ಸೆ ದೊರೆಯಲಿದೆ. ಟೆಲಿ ಕನ್ಸಲ್ಟೇಷನ್ ಸೇವೆಗಳು, ಕ್ಷೇಮ ಚಟುವಟಿಕೆಗಳು ದೊರೆಯಲಿವೆ ಎನ್ನುತ್ತಾರೆ ವೈದ್ಯಾಧಿಕಾರಿಗಳು.

ನಮ್ಮ ಕ್ಲಿನಿಕ್‍ಗಳು ಬೆಳಗ್ಗೆ 9 ರಿಂದ ಸಂಜೆ 4.30 ರವರೆಗೆ ಪ್ರತಿ ಸೋಮವಾರದಿಂದ ಶನಿವಾರದವರೆಗೆ ಕಾರ್ಯನಿರ್ವಹಿಸಲಿವೆ. 1,000 ಚದರ ಅಡಿ ವಿಸ್ತೀರ್ಣದಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ, ಆಡಳಿತ ಕಚೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿವೆ. ಆಸ್ಪತ್ರೆ ಸಿಬ್ಬಂದಿ, ಮಹಿಳೆ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ ಎನ್ನುತ್ತಾರೆ ಡಾ.ರಜಿನಿ.

ನಮ್ಮ ಕ್ಲಿನಿಕ್‍ಗಳಲ್ಲಿ ತಲಾ ಒಬ್ಬರು ವ್ಯೆದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ. ಒಟ್ಟು 12 ಆರೋಗ್ಯ ಸೇವೆಗಳ ಪ್ಯಾಕೇಜ್ ಲಭ್ಯವಿದ್ದು, ನಗರ ಪ್ರದೇಶದ ಬಡವರು, ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ ಇದು ಸಂಜೀವಿನಿಯಾಗಲಿದೆ.

- ಡಾ.ಪ್ರಭು, ವೈದ್ಯಾಧಿಕಾರಿ

share
Next Story
X