Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೆಡಿಎಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ...

ಜೆಡಿಎಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಸಿಎಂ ಬೊಮ್ಮಾಯಿ

8 Feb 2023 12:24 AM IST
share
ಜೆಡಿಎಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು, ಫೆ. 07: 'ಜೆಡಿಎಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ''ಜೆಡಿಎಸ್ ಪಕ್ಷ ತನ್ನ ಆಟ ಆಡಲು ಅವಕಾಶ ನೀಡಬಾರದು ಎನ್ನುವುದು ನಮ್ಮ ಉದ್ದೇಶ.‌  ಸ್ಪಷ್ಟ ಬಹುಮತ‌ ಬರುವ ವಿಶ್ವಾಸ ನಮಗಿದೆ. 2023 ಚುನಾವಣೆಯಲ್ಲಿ 130 ಸ್ಥಾನ ಗೆಲ್ಲುವ ವಿಶ್ವಾಸ ಇದೆ'' ಎಂದರು. 

ಬಹುಮತಕ್ಕೆ ಹತ್ತಿರ ಬಂದಿದ್ದೇವೆ:  2004 ರಿಂದ ಬಿಜೆಪಿ ನಿರಂತರ ಬೆಳವಣಿಗೆಯಾಗುತ್ತ ಬಂದಿದೆ. ನಾವು ಸ್ಪಷ್ಟ ಬಹುಮತ ಪಡೆದಿಲ್ಲ. ಆದರೆ ಬಹುಮತಕ್ಕೆ ಹತ್ತಿರ ಬಂದಿದ್ದೇವೆ. ಬಿಜೆಪಿ ಸಾಮಾಜಿಕ ಕಳಕಳಿ ಇರುವ ಪಕ್ಷ. ಚುನಾವಣೆ ಆಟದಲ್ಲಿ ಸೋಲದೇ ಇರಲು ಆಡುವುದು, ಗೆಲ್ಲಬೇಕೆಂದು ಆಡುವುದು.  ನಾನು ಗೆಲ್ಲುವುದಕ್ಕಾಗಿ ಆದುವುದರಲ್ಲಿ  ನಂಬಿಕೆ‌ ಇಟ್ಟವನು.‌ ಜನರು ಎಷ್ಟೇ ಬಡವರಿರಬಹುದು ಅವರಿಗೆ ಅಗತ್ಯಕ್ಕೆ ಪೂರಕವಾಗಿ ಸಹಕಾರ ನೀಡಬೇಕು. ಆದರೆ, ಎಲ್ಲವನ್ನು ಉಚಿತವಾಗಿ ನೀಡುತ್ತೇನೆ ಎನ್ನುವುದನ್ನು ಕರ್ನಾಟಕದ ಸ್ವಾಭಿಮಾನಿ ಜನರು ನಂಬುವುದಿಲ್ಲ ಎಂದರು.

'ಕಾಂಗ್ರೆಸ್ ವಿರುದ್ಧ 60 ಪ್ರಕರಣ'

'ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳಿಗೆ ಮಿಸಲಾತಿ ನೀಡುವ ವಿಚಾರ ನ್ಯಾಯಾಲಯದಲ್ಲಿದೆ.‌ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ. ಆದರೆ, ರಾಜ್ಯದಲ್ಲಿ ಒಕ್ಕಲಿಗ ಹಾಗೂ ಸಮುದಾಯಕ್ಕೆ ಪ್ರತ್ಯೇಕ‌ ಪ್ರವರ್ಗದಲ್ಲಿ  ಅವಕಾಶ ನೀಡುವ ಮೂಲಕ ಆ ಸಮುದಾಯಗಳಲ್ಲಿ ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸುವ ಪ್ರಯತ್ನ ನಮ್ಮದು' ಎಂದು ಹೇಳಿದರು.

'ಲಿಂಗಾಯತ ಸಮುದಾಯ ಅತ್ಯಂತ ಪ್ರಬುದ್ಧರಿದ್ದಾರೆ. ಪ್ರತಿ ಹತ್ತು ವರ್ಷಕ್ಕೊಮ್ಮೆ ಮೀಸಲಾತಿ ಪರಿಷ್ಕರಣೆ ಆಗಬೇಕೆಂಬ ನಿಯಮ ಇದೆ. ಅದನ್ನು ಯಾರೂ ಮಾಡಿರಲಿಲ್ಲ.‌ ನಾವು ಮಾಡುತ್ತಿದ್ದೇವೆ' ಎಂದು ತಿಳಿಸಿದರು. 

''40% ಕಮಿಷನ್ ಬಗ್ಗೆ ಮಾತನಾಡುವ ಕಾಂಗ್ರೆಸ್ ನವರು ಒಂದೇ ಒಂದು ದಾಖಲೆ ಸಮೇತ ಮಾಹಿತಿ ನೀಡಲಿಲ್ಲ. ಅವರ ಪರವಾಗಿ ವಾದ ಮಾಡುವ ಗುತ್ತಿಗೆದಾರರ ಸಂಘದವರು  ದಾಖಲೆ ನೀಡಲಿಲ್ಲ. ಅವರ ವಿರುದ್ದ ನಮ್ಮ ಸಚಿವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕಾಂಗ್ರೆಸ್  ಲೋಕಾಯುಕ್ತ ಸಂಸ್ಥೆ ಯನ್ನು ಮುಚ್ಚಿ ಹಾಕಿದವರು. ಅವರ ಸರ್ಕಾರದ ವಿರುದ್ದ  60 ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದರು.  ನಮ್ಮದು ಬೆಳೆಯುತ್ತಿರುವ ಪಕ್ಷ ನಾವು ಅವಕಾಶ ಬಯಸಿದವರಿಗೆ ಅವಕಾಶ ನೀಡುವ ಕೆಲಸ ಮಾಡುತ್ತಿದ್ದೇವೆ' ಎಂದು ತಿಳಿಸಿದರು. 

share
Next Story
X