Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಜ್ಞಾವಂತ ಮತದಾರರಿಂದ ಬಿಜೆಪಿಗೆ...

ಪ್ರಜ್ಞಾವಂತ ಮತದಾರರಿಂದ ಬಿಜೆಪಿಗೆ ಮತ್ತೊಮ್ಮೆ ಆಶೀರ್ವಾದ: ಬಿ.ವೈ.ವಿಜಯೇಂದ್ರ

8 Feb 2023 6:59 PM IST
share
ಪ್ರಜ್ಞಾವಂತ ಮತದಾರರಿಂದ ಬಿಜೆಪಿಗೆ ಮತ್ತೊಮ್ಮೆ ಆಶೀರ್ವಾದ: ಬಿ.ವೈ.ವಿಜಯೇಂದ್ರ

ಬೆಂಗಳೂರು, ಫೆ. 8: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಮರಳಬೇಕೆಂಬ ಉದ್ದೇಶದಿಂದ ವಿವಿಧ ಮೋರ್ಚಾಗಳ ಸಮಾವೇಶವನ್ನು ಯಶಸ್ವಿಯಾಗಿ ಮಾಡಲಾಗುವುದು ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಬುಧವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲೂ ಎಲ್ಲ ಮೋರ್ಚಾಗಳ ಸಮಾವೇಶ ನಡೆಸಲು ಪಕ್ಷದ ವತಿಯಿಂದ ನನ್ನನ್ನು ಸಂಚಾಲಕರನ್ನಾಗಿ, ಜಗದೀಶ್ ಹಿರೇಮನಿ ಮತ್ತು ಯಶಪಾಲ್ ಅವರನ್ನು ಸಹ ಸಂಚಾಲಕರನ್ನಾಗಿ ನೇಮಿಸಿದ್ದಾರೆ. ಇನ್ನೊಂದು ವಾರದಲ್ಲಿ ಪ್ರವಾಸದ ವಿವರವನ್ನು ತಿಳಿಸುತ್ತೇವೆ ಎಂದರು.

ಕೆಲವು ರಾಜಕೀಯ ಪಕ್ಷಗಳು ದಿವಾಳಿ ಆಗಿವೆ. ತಮ್ಮ ಸಾಧನೆ ಏನು? ಜನರಿಗೆ ಏನು ಹೇಳಬೇಕು ಎಂಬ ಗೊಂದಲದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸುಳ್ಳು ಹೇಳಿಕೆ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ. ಇದು ಆ ಪಕ್ಷದ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ವಿಜಯೇಂದ್ರ ಹೇಳಿದರು.

ಯಾವ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತಂದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂಬುದನ್ನು ರಾಜ್ಯದ ಪ್ರಜ್ಞಾವಂತ ಮತದಾರರು ಅರಿತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಏನೇ ಹೇಳಿಕೆ ಕೊಟ್ಟರೂ ಮತದಾರರು ಮತ್ತೊಮ್ಮೆ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪನವರು ಹಾಗೂ ನನ್ನ ಬಗ್ಗೆ ಅನುಕಂಪದ ಮಾತನ್ನಾಡುವ ಮೂಲಕ ನಮ್ಮ ಪಕ್ಷದಲ್ಲಿ ಬೆಂಕಿ ಹಚ್ಚಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಅವುಗಳಿಗೆ ಆಸ್ಪದ ಕೊಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಎಲ್ಲ ನಾಯಕರು ಒಗ್ಗಟ್ಟಾಗಿದ್ದಾರೆ. ಯಾವುದೇ ರೀತಿಯ ಗೊಂದಲಗಳಿಲ್ಲ. ಕನಿಷ್ಠ 140ರಿಂದ 150 ಶಾಸಕ ಸ್ಥಾನ ಗೆಲ್ಲುವುದೇ ಎಲ್ಲರ ಗುರಿಯಾಗಿದೆ ಎಂದು ವಿಜಯೇಂದ್ರ ಹೇಳಿದರು.

share
Next Story
X