Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯಾವ ಚಮತ್ಕಾರ ಸಂಭವಿಸಿತು?: ಅದಾನಿ...

ಯಾವ ಚಮತ್ಕಾರ ಸಂಭವಿಸಿತು?: ಅದಾನಿ ಸಂಪತ್ತಿನ ಅಗಾಧ ಏರಿಕೆ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಉದ್ಗಾರ

8 Feb 2023 8:48 PM IST
share
ಯಾವ ಚಮತ್ಕಾರ ಸಂಭವಿಸಿತು?: ಅದಾನಿ ಸಂಪತ್ತಿನ ಅಗಾಧ ಏರಿಕೆ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಉದ್ಗಾರ

ಹೊಸದಿಲ್ಲಿ, ಫೆ. 8: ನರೇಂದ್ರ ಮೋದಿ ಸರಕಾರವು ಕೈಗಾರಿಕೋದ್ಯಮಿ ಗೌತಮ್ ಅದಾನಿಯೊಂದಿಗೆ ಅಪವಿತ್ರ ಮೈತ್ರಿ ಹೊಂದಿದೆ ಎಂಬ ಆರೋಪಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಬುಧವಾರವೂ ಸಂಸತ್ನಲ್ಲಿ ಸರಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಅದಾನಿ ಸಂಪತ್ತಿನಲ್ಲಿ ಆಗಿರುವ ಅಗಾಧ ಏರಿಕೆಯು ಸರಕಾರದಿಂದ ಪಡೆದುಕೊಂಡಿರುವ ಪ್ರಯೋಜನಗಳ ಫಲವೇ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಪ್ರಶ್ನಿಸಿದರು.

‘‘ಪ್ರಧಾನಿ ನರೇಂದ್ರ ಮೋದಿಯ ಅತ್ಯಂತ ಆಪ್ತ ಸ್ನೇಹಿತರಲ್ಲಿ ಒಬ್ಬರ ಸಂಪತ್ತು ಕೇವಲ ಎರಡೂವರೆ ವರ್ಷಗಳಲ್ಲಿ 13 ಪಟ್ಟು ಏರಿದೆ’’ ಎಂದು ಖರ್ಗೆ ಹೇಳಿದರು. ‘‘ಅದಾನಿಯ ಸಂಪತ್ತು 2014ರಲ್ಲಿ 50,000 ಕೋಟಿ ರೂಪಾಯಿ ಆಗಿತ್ತು. 2019ರಲ್ಲಿ ಅದು ಒಂದು ಲಕ್ಷ ಕೋಟಿ ರೂಪಾಯಿಗೆ ಏರಿತು. ಆ ನಂತರದ ಕೇವಲ ಎರಡು ವರ್ಷಗಳಲ್ಲಿ ಅದಾನಿಯ ಸಂಪತ್ತು ಒಮ್ಮೆಲೆ 12 ಲಕ್ಷ ಕೋಟಿ ರೂ.ಗೆ ಏರಿತು. ಏನು ಚಮತ್ಕಾರ ಸಂಭವಿಸಿತು? ಇದು ಸ್ನೇಹದ ಪ್ರತಿಫಲವೇ?’’ ಎಂದು ಖರ್ಗೆ ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅದಾನಿ ಗುಂಪಿನ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಆರೋಪಿಸಿದ ಒಂದು ದಿನದ ಬಳಿಕ ಖರ್ಗೆ ಈ ಮಾತುಗಳನ್ನು ಆಡಿದ್ದಾರೆ.

ಅದಾನಿ ಗುಂಪು ಕಾರ್ಪೊರೇಟ್ ಇತಿಹಾಸದಲ್ಲಿಯೇ ಅತಿ ದೊಡ್ಡ ವಂಚನೆಯೊಂದನ್ನು ನಡೆಸುತ್ತಿದೆ ಎಂಬುದಾಗಿ ಅಮೆರಿಕದ ಹೂಡಿಕೆ ಮತ್ತು ಸಂಶೋಧನಾ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ಜನವರಿ 24ರಂದು ಆರೋಪಿಸಿದ ಬಳಿಕ, ಗುಂಪಿನ ಶೇರುಗಳ ವೌಲ್ಯ ಸುಮಾರು ಅರ್ಧದಷ್ಟು ಕುಸಿದಿದೆ. ಅದಾನಿ ಗುಂಪು ದಶಕಗಳಿಂದಲೂ ಶೇರು ಮಾರುಕಟ್ಟೆಯಲ್ಲಿ ಹಸ್ತಕ್ಷೇಪ ನಡೆಸುತ್ತಾ ಬಂದಿದೆ, ತಪ್ಪು ಲೆಕ್ಕಗಳನ್ನು ಕೊಟ್ಟಿದೆ, ಕಪ್ಪುಹಣ ಬಿಳುಪು ಮಾಡಲು ತೆರಿಗೆರಹಿತ ವಿದೇಶಗಳಲ್ಲಿ ಶೆಲ್ ಕಂಪೆನಿಗಳನ್ನು ಸ್ಥಾಪಿಸಿದೆ ಹಾಗೂ ಶೇರು ವಿನಿಮಯ ಕೇಂದ್ರದಲ್ಲಿ ನೋಂದಣಿಯಾಗಿರುವ ಕಂಪೆನಿಗಳಿಂದ ಹಣವನ್ನು ಬೇರೆಡೆಗೆ ಸಾಗಿಸಿದೆ ಎಂದು ತನ್ನ ವರದಿಯಲ್ಲಿ ಹಿಂಡನ್ಬರ್ಗ್ ಆರೋಪಿಸಿದೆ.

ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅದಾನಿ ಗುಂಪಿನ ಕಂಪೆನಿಗಳ ವಂಚನೆಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಆದೇಶಿಸುವಂತೆ ಖರ್ಗೆ ಬುಧವಾರ ರಾಜ್ಯಸಭೆಯಲ್ಲಿ ಸಭಾಪತಿ ಜಗದೀಪ್ ಧನ್ಕರ್ರನ್ನು ಒತ್ತಾಯಿಸಿದರು. ‘‘ದ್ವೇಷ ಕಾರದಂತೆ ಪಕ್ಷಿಗರಿಗೆ ಮೋದಿ ಹೇಳುವುದಿಲ್ಲ’’

ದ್ವೇಷ ಕಾರುವ ಮಾತುಗಳ ಮೂಲಕ ವಿಭಜನೆಯನ್ನು ಹರಡುತ್ತಿರುವ ತನ್ನ ಪಕ್ಷದ ಸದಸ್ಯರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಏನೂ ಮಾತನಾಡುವುದಿಲ್ಲ ಎಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿರುವ ಖರ್ಗೆ ಹೇಳಿದರು.‘‘ಎಲ್ಲಾ ಕಡೆಗಳಲ್ಲಿ ದ್ವೇಷ ಹರಡಲಾಗುತ್ತಿದೆ. ನಾಗರಿಕರ ಪ್ರತಿನಿಧಿಗಳು ಈ ಕೆಲಸದಲ್ಲಿ ತೊಡಗಿದ್ದಾರೆ’’ ಎಂದು ಖರ್ಗೆ ಹೇಳಿದರು. ‘‘ಅಲ್ಲದಿದ್ದರೆ, ಪ್ರಧಾನಿ ಮೋದಿ ಯಾಕೆ ಸುಮ್ಮನಿದ್ದಾರೆ? ನೀವು ಎಲ್ಲರನ್ನೂ ಬೆದರಿಸುತ್ತೀರಿ. ಹಾಗಾದರೆ ಅವರನ್ನು ಯಾಕೆ ಹೆದರಿಸುವುದಿಲ್ಲ? ನೀವು ಅವರತ್ತ ಒಮ್ಮೆ ಗಮನ ಹರಿಸಿದರೆ, ಟಿಕೆಟ್ ಕೈತಪ್ಪುವ ಭೀತಿಯಿಂದ ಅವರು ಬಾಯಿ ಮುಚ್ಚುತ್ತಾರೆ’’ ಎಂದರು.

share
Next Story
X