Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುಕೆಜಿ ವಿದ್ಯಾರ್ಥಿನಿಯನ್ನು...

ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಬೆಂಗಳೂರಿನ ಶಾಲೆ: ಪೋಷಕರಿಂದ ಆಕ್ರೋಶ

ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಮಾಜಿ ಶಿಕ್ಷಣ ಸಚಿವರ ಆಗ್ರಹ

9 Feb 2023 6:19 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಬೆಂಗಳೂರಿನ ಶಾಲೆ: ಪೋಷಕರಿಂದ ಆಕ್ರೋಶ
ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಮಾಜಿ ಶಿಕ್ಷಣ ಸಚಿವರ ಆಗ್ರಹ

ಬೆಂಗಳೂರು, ಫೆ.9: ಬೆಂಗಳೂರಿನ ಶಾಲೆಯೊಂದು ಯುಕೆಜಿ ವಿದ್ಯಾರ್ಥಿನಿಯನ್ನು ಎರಡು ರೈಮ್ಸ್ ಹೇಳಲು ವಿಫಲವಾದಳೆಂದು ಸೆಮಿಸ್ಟರ್ ಪರೀಕ್ಷೆಯಲ್ಲಿ  ಅನುತ್ತೀರ್ಣಗೊಳಿಸಿದ್ದು, ಇದರಿಂದ ಆಕ್ರೋಶಗೊಂಡ ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ವೃತ್ತಿಯಲ್ಲಿ ಬ್ಯಾಂಕ್ ವ್ಯವಸ್ಥಾಪಕರಾದ ವಿದ್ಯಾರ್ಥಿನಿಯ ತಂದೆ ಮನೋಜ್ ಬಾದಲ್, "ಶಾಲೆಯ ಆ್ಯಪ್‌ನಲ್ಲಿ ನಮ್ಮ ಪುತ್ರಿಯ ಅಂಕಪಟ್ಟಿ ನೋಡಿ ಆಘಾತಗೊಂಡೆವು. ಆಕೆ 160 ಅಂಕಗಳ ಪೈಕಿ 100 ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಳು. ಆದರೆ, 40 ಅಂಕದ ಪೈಕಿ ಕನಿಷ್ಠ 14 ಅಂಕ ಗಳಿಸಬೇಕಿದ್ದ ರೈಮ್ಸ್‌ನಲ್ಲಿ ಕೇವಲ 4 ಅಂಕ ಗಳಿಸಿದ್ದಳು" ಎಂದು ಹೇಳಿದ್ದಾರೆ.

''ನನ್ನ ಪುತ್ರಿಯು 2022ರಿಂದ ಆನೇಕಲ್‌ನ ದೀಪಾಹಳ್ಳಿಯಲ್ಲಿರುವ ಸೇಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಆಫ್ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ'' ಎಂದು ಅವರು ತಿಳಿಸಿದ್ದಾರೆ.

"ಆಕೆ ನಮಗೊಬ್ಬಳೇ ಮಗಳು. ವ್ಯಾಸಂಗದಲ್ಲಿ ಆಕೆ ಅತ್ಯಂತ ಪ್ರತಿಭಾನ್ವಿತೆ. ಆಕೆಯ ಅಂಕಪಟ್ಟಿಯನ್ನು ನೋಡಿದರೆ, ಆಕೆ ಇಂಗ್ಲಿಷ್‌ನಲ್ಲಿ 40 ಅಂಕಗಳ ಪೈಕಿ 31, ಗಣಿತದಲ್ಲಿ 40 ಅಂಕಗಳ ಪೈಕಿ 35, ಪರಿಸರ ವಿಜ್ಞಾನದಲ್ಲಿ 40 ಅಂಕಗಳ ಪೈಕಿ 28 ಅಂಕ ಗಳಿಸಿರುವುದನ್ನು ನೀವು ನೋಡಬಹುದು. ರೈಮ್ಸ್‌ ಅನ್ನೂ ಕೂಡಾ ಆಕೆ ಮನೆಯಲ್ಲೂ ಹೇಳಬಲ್ಲಳು ಹಾಗೂ ರೈಮ್ಸ್ ಶಿಕ್ಷಕಿ ಎದುರೂ ಹೇಳಬಲ್ಲಳು. ದುರದೃಷ್ಟವಶಾತ್, ಮೌಖಿಕ ಪರೀಕ್ಷೆಯಲ್ಲಿ ರೈಮ್ಸ್ ಕಂಠಪಾಠ ಒಪ್ಪಿಸುವಲ್ಲಿ ವಿಫಲಳಾಗಿದ್ದಾಳೆ" ಎಂದು ಬಾದಲ್ ಮಾಹಿತಿ ನೀಡಿದ್ದಾರೆ.

ಮನೋಜ್ ಬಾದಲ್ ಅವರ ಪತ್ನಿ ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಮೂಲತಃ ಬಿಹಾರದವರಾದ ಈ ದಂಪತಿ ಕಳೆದ ವರ್ಷವಷ್ಟೇ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದರೆನ್ನಲಾಗಿದೆ.

► ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್

ಈ ವಿಚಾರಕ್ಕೆ ಸಂಬಂಧಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನ ಮಾಡಿರುವ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ''UKG ತರಗತಿಯಲ್ಲಿ ಓದುತ್ತಿರುವ ಈ ಎಳೆಯ ಮಗುವನ್ನು "#ಫೇಲ್" ಮಾಡಿರುವ ಶಿಕ್ಷಣ ಸಂಸ್ಥೆಗೆ ತಲೆಯೂ ಇಲ್ಲ, ಹೃದಯ ಮೊದಲೇ ಇಲ್ಲ. ಆ ಮಗುವನ್ನು ಏನು ಮಾಡಲು ಹೊರಟಿದೆ ಈ ಮಹಾ ಶಿಕ್ಷಣ ಸಂಸ್ಥೆ! ನನ್ನ ಗಮನಕ್ಕೆ ಈ "ಮಹಾಕೃತ್ಯ" ಬಂದ ಕೂಡಲೇ ಶಿಕ್ಷಣ ಇಲಾಖೆಯ ಆ ತಾಲೂಕಿನ ಪ್ರಮುಖರಿಗೆ ತಲುಪಿಸಿ ಈ ಶಾಲೆಯ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಮನವಿ ಮಾಡಿದ್ದೇನೆ. ನಾನು ಕೂಡ ಈ ಮಹಾ ಶಾಲೆಗೆ ಸದ್ಯದಲ್ಲಿಯೇ ಒಮ್ಮೆ ಭೇಟಿ ನೀಡಿ "ಪಾವನ" ನಾಗಲು ಬಯಸಿದ್ದೇನೆ'' ಎಂದು ಬರೆದುಕೊಂಡಿದ್ದಾರೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X