Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೈಲ ಫ್ಯಾಕ್ಟರಿಯ ಟ್ಯಾಂಕರ್‌...

ತೈಲ ಫ್ಯಾಕ್ಟರಿಯ ಟ್ಯಾಂಕರ್‌ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಕಾರ್ಮಿಕರು ಸಾವು

9 Feb 2023 5:29 PM IST
share
ತೈಲ ಫ್ಯಾಕ್ಟರಿಯ ಟ್ಯಾಂಕರ್‌ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಕಾರ್ಮಿಕರು ಸಾವು

ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪೆದ್ದಪುರಂ ಎಂಬಲ್ಲಿನ ತೈಲ ಫ್ಯಾಕ್ಟರಿಯೊಂದರ  ಟ್ಯಾಂಕರ್‌ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಏಳು ಮಂದಿ ಕಾರ್ಮಿಕರು ಮೃತಪಟ್ಟ ಘಟನೆ ಇಂದು ವರದಿಯಾಗಿದೆ.

ಅಂಬಟಿ ಸುಬ್ಬಣ್ಣ ತೈಲ ಫ್ಯಾಕ್ಟರಿಯಲ್ಲಿ ನಡೆದ ಈ ದುರಂತದಲ್ಲಿ ಮಡಿದವರನ್ನು ವೆಚಂಗಿ ಕೃಷ್ಣ, ವೆಚಂಗಿ ನರಸಿಂಹನ್‌, ವೆಚಂಗಿ ಸಾಗರ್‌, ಕೊರತ್ತಡು ಬಂಜಿ ಬಾಬು, ಕರ್ರಿ ರಾಮ ರಾವ್‌, ಕಟ್ಟಮುರಿ ಜಗದೀಶ್‌ ಮತ್ತು ಪ್ರಸಾದ್‌ ಎಂದು ಗುರುತಿಸಲಾಗಿದೆ.

ಸುಮಾರು 24 ಅಡಿ ಆಳದ ಟ್ಯಾಂಕರ್‌ ಸ್ವಚ್ಛಗೊಳಿಸುವ ವೇಳೆ ಈ ದುರಂತ ಸಂಭವಿಸಿದೆ. ಫ್ಯಾಕ್ಟರಿಯನ್ನು ಸೀಲ್‌ ಮಾಡಲಾಗಿದೆ ಹಾಗೂ ಅದರ ಮಾಲೀಕರ ವಿರುದ್ಧ ಐಪಿಸಿ ಸೆಕ್ಷನ್‌ 304ಎ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಕಾಕಿನಾಡ ಜಿಲ್ಲಾ ಕಲೆಕ್ಟರ್‌ ಕೃತ್ತಿಕಾ ಶುಕ್ಲಾ ತಿಳಿಸಿದ್ದಾರೆ.

ಫ್ಯಾಕ್ಟರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆಯೇ ಎಂಬುದನ್ನು ತಿಳಿಯಲು ಜಂಟಿ ಕಲೆಕ್ಟರ್‌ ನೇತೃತ್ವದಲ್ಲಿ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು ಮೂರು ದಿನಗಳೊಳಗೆ ಸಮಿತಿ ವರದಿ ಸಲ್ಲಿಸಲಿದೆ. ಈ ಫ್ಯಾಕ್ಟರಿ ಕಾರ್ಯಾಚರಿಸಲು ಅಗತ್ಯ ಅನುಮತಿ ಪಡೆದಯಕೊಳ್ಳಲಾಗಿದೆಯೇ ಎಂದು ಸಮಿತಿ ಪರಿಶೀಲನೆ ನಡೆಸುತ್ತಿದೆ.

ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ರೂ. 25 ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಫ್ಯಾಕ್ಟರಿ ಆಡಳಿತ ಅಗತ್ಯ ಸುರಕ್ಷತಾ ಎಚ್ಚರಿಕೆಗಳನ್ನು ಕೈಗೊಳ್ಲದೇ ಇರುವುದರಿಂದ ದುರಂತ ಸಂಭವಿಸಿದೆ ಎಂದು ಮೃತರ ಕುಟುಂಬಗಳು ಆರೋಪಿಸಿವೆ. ಫ್ಯಾಕ್ಟರಿ ಆಡಳಿತದ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ ರವೀಂದ್ರನಾಥ್‌ ಬಾಬು ತಿಳಿಸಿದ್ದಾರೆ.

ಸ್ಥಳೀಯ ಶಾಸಕ ಚಿನ್ನರಾಜಪ್ಪ ಫ್ಯಾಕ್ಟರಿಗೆ ಭೇಟಿ ನೀಡಿದ ನಂತರ ಸುದ್ದಿಗಾರರ ಜೊತೆ ಮಾತನಾಡುತ್ತಾ ಅನನುಭವಿ ಕಾರ್ಮಿಕರನ್ನು ಟ್ಯಾಂಕರ್‌ ಸ್ವಚ್ಛಗೊಳಿಸಲು ನೇಮಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

share
Next Story
X