ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಇಬ್ಬರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಫೆ.9: ಕರ್ನಾಟಕ ಹೈಕೋರ್ಟ್‍ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ವಿಜಯಕುಮಾರ್ ಎ. ಪಾಟೀಲ್, ರಾಜೇಶ್ ರೈ ಕಲ್ಲಂಗಳ ಅವರು ಪದವಿಯ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತಿತರರು ಇದ್ದರು.
Next Story





