Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಗುಂಪಿನ ಶೇರುಗಳ ಬಗ್ಗೆ ತನಿಖೆ:...

ಅದಾನಿ ಗುಂಪಿನ ಶೇರುಗಳ ಬಗ್ಗೆ ತನಿಖೆ: ಎಮ್‌ಎಸ್‌ಸಿಐ ಘೋಷಣೆ

9 Feb 2023 10:09 PM IST
share
ಅದಾನಿ ಗುಂಪಿನ ಶೇರುಗಳ ಬಗ್ಗೆ ತನಿಖೆ: ಎಮ್‌ಎಸ್‌ಸಿಐ ಘೋಷಣೆ

ಮುಂಬೈ, ಫೆ. 9: ಅದಾನಿ(Adani) ಗುಂಪಿನ ಕೆಲವು ಕಂಪೆನಿಗಳಲ್ಲಿ ಅಂತರ್‌ರಾಷ್ಟ್ರೀಯ ಹೂಡಿಕೆದಾರರಿಗೆ ಲಭ್ಯವಿರುವ ಶೇರುಗಳ (ಫ್ರೀ ಫ್ಲೋಟ್ ಡೆಸಿಗ್ನೇಶನ್) ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಹಣಕಾಸು ಸೂಚ್ಯಂಕ ಪೂರೈಕೆದಾರ ಎಮ್‌ಎಸ್‌ಸಿಐ(MSCI) ಗುರುವಾರ ತಿಳಿಸಿದೆ. ಇದು ಅದಾನಿ ಗುಂಪಿನ ಇನ್ನೊಂದು ಸುತ್ತಿನ ಕಳವಳಕ್ಕೆ ಕಾರಣವಾಗಿದೆ.

ಅದಾನಿ ಗುಂಪಿನ ಕಂಪೆನಿಗಳು ಶೇರು ಮಾರುಕಟ್ಟೆಯಲ್ಲಿ ಹಸ್ತಕ್ಷೇಪ ನಡೆಸಿ ಕೃತಕವಾಗಿ ಬೆಲೆ ಹೆಚ್ಚಿಸಿಕೊಂಡಿವೆ ಮತ್ತು ತಪ್ಪು ಲೆಕ್ಕಪತ್ರಗಳನ್ನು ಕೊಡುತ್ತಿವೆ ಎಂಬುದಾಗಿ ಕಳೆದ ತಿಂಗಳು ಹಿಂಡನ್‌ಬರ್ಗ್ ರಿಸರ್ಚ್ ತನ್ನ ವರದಿಯಲ್ಲಿ ಹೇಳಿದ ಬಳಿಕ ಗುಂಪಿನ ಶೇರುಗಳು 110 ಬಿಲಿಯ ಡಾಲರ್ (ಸುಮಾರು 9 ಲಕ್ಷ ಕೋಟಿ ರೂಪಾಯಿ) ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿವೆ.

ಅಂತರ್‌ರಾಷ್ಟ್ರೀಯ ಹೂಡಿಕೆದಾರರ ಖರೀದಿಗೆ ಲಭ್ಯವಿರುವ ಶೇರುಗಳ ಸಂಖ್ಯೆಯಲ್ಲಿ ಬದಲಾವಣೆಯಾದರೆ ಎಮ್‌ಎಸ್‌ಸಿಐ ಸೂಚ್ಯಂಕಗಳ ಸಂಖ್ಯೆಗಳಲ್ಲೂ ಬದಲಾವಣೆಯಾಗುತ್ತದೆ. ಹೆಚ್ಚಿನ ಜಾಗತಿಕ ಹೂಡಿಕೆಗಳು ಇಂಥ ಸೂಚ್ಯಂಕಗಳೊಂದಿಗೆ ಬೆಸೆದುಕೊಂಡಿರುವುದರಿಂದ ಅದರ ಆಧಾರದಲ್ಲಿ ಹೂಡಿಕೆದಾರರು ತಮ್ಮ ನಿರ್ಧಾರಗಳನ್ನು ಬದಲಿಸುತ್ತಾರೆ.

‘‘ಕೆಲವು ಹೂಡಿಕೆದಾರರು ಎಮ್‌ಎಸ್‌ಸಿಐ ಸೂಚ್ಯಂಕವನ್ನು ನಿರ್ದಿಷ್ಟ ಶೇರಿನ ಅವಲೋಕನಕ್ಕೆ ಬಳಸುತ್ತಾರೆ. ಎಮ್‌ಎಸ್‌ಸಿಐ ತನಿಖೆಯ ಫಲಿತಾಂಶವನ್ನು ಹೊಂದಿಕೊಂಡು ಅದಾನಿ ಗುಂಪಿನ ಆಯ್ದ ಕಂಪೆನಿಯ ಶೇರುಗಳು ಇನ್ನಷ್ಟು ಒತ್ತಡಕ್ಕೆ ಒಳಗಾಗಬಹುದು’’ ಎಂದು ಕ್ವಾಂಟಮ್ ಸೆಕ್ಯುರಿಟೀಸ್‌ನ ನಿರ್ದೇಶಕ ನೀರಜ್ ದೀವಾನ್ ಹೇಳಿದರು.

ಮತ್ತೆ ಕುಸಿದ ಅದಾನಿ ಶೇರುಗಳು

ಅದಾನಿ ಗುಂಪಿನ ಕೆಲವು ಕಂಪೆನಿಗಳ ಶೇರುಗಳು ಈ ವಾರ ಚೇತರಿಸಿಕೊಂಡಿದ್ದವು. ಆದರೆ ಗುರುವಾರ ಎಮ್‌ಎಸ್‌ಸಿಐ ಘೋಷಣೆಯ ಬಳಿಕ ಮತ್ತೆ ಕುಸಿದವು. ಅದಾನಿ ಎಂಟರ್‌ಪ್ರೈಸಸ್ ಶೇರುಗಳು 11 ಶೇಕಡದಷ್ಟು ಕುಸಿಯಿತು. ಆರಂಭಿಕ ವ್ಯವಹಾರದಲ್ಲಿ ಅದು 20 ಶೇಕಡದಷ್ಟು ಇಳಿದಿತ್ತು.

ಅದಾನಿ ಟ್ರಾನ್ಸ್‌ಮಿಶನ್, ಅದಾನಿ ಟೋಟಲ್ ಗ್ಯಾಸ್ ಮತ್ತು ಅದಾನಿ ಪವರ್ ಶೇರುಗಳು ತಲಾ 5 ಶೇ. ಇಳಿಯಿತು. ಅದೇ ವೇಳೆ, ಅದಾನಿ ಪೋರ್ಟ್ಸ್ ಆ್ಯಂಡ್ ಸ್ಪೆಶಲ್ ಎಕನಾಮಿಕ್ ರೆನ್ ಶೇರುಗಳು 3% ಮೌಲ್ಯವನ್ನು ಕಳೆದುಕೊಂಡವು.

ನಮ್ಮ ವರದಿಯ ದೃಢೀಕರಣ: ಹಿಂಡನ್‌ಬರ್ಗ್ ಸ್ಥಾಪಕ

ಎಮ್‌ಎಸ್‌ಸಿಐ ನಿರ್ಧಾರಕ್ಕೆ ಪ್ರತಿಕ್ರಿಯೆ ನೀಡಿರುವ ಹಿಂಡನ್‌ಬರ್ಗ್ ರಿಸರ್ಚ್ ಸ್ಥಾಪಕ ನತಾನ್ ಆ್ಯಂಡರ್‌ಸನ್, ‘‘ಇದು ನಮ್ಮ ವರದಿಯನ್ನು ದೃಢೀಕರಿಸುತ್ತದೆ ಎಂಬುದಾಗಿ ನಾವು ಭಾವಿಸುತ್ತೇವೆ’’ ಎಂದು ಹೇಳಿದ್ದಾರೆ.

share
Next Story
X