Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪುತ್ತೂರು BJP ಶಾಸಕರ 'ಅಣಬೆ' ಹೇಳಿಕೆ...

ಪುತ್ತೂರು BJP ಶಾಸಕರ 'ಅಣಬೆ' ಹೇಳಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಸ್ಪಷ್ಟೀಕರಣಕ್ಕೆ ಕಾರ್ಯಕರ್ತರ ಒತ್ತಾಯ

9 Feb 2023 10:16 PM IST
share
ಪುತ್ತೂರು BJP ಶಾಸಕರ ಅಣಬೆ ಹೇಳಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಸ್ಪಷ್ಟೀಕರಣಕ್ಕೆ ಕಾರ್ಯಕರ್ತರ ಒತ್ತಾಯ

ಪುತ್ತೂರು: ಪುತ್ತೂರು ಶಾಸಕ ಸಂಜೀವ ಮಠಂದೂರು ಅವರನ್ನು ಹಿಂದುತ್ವ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರು ತರಾಟೆಗೈದ ಘಟನೆ ನಗರದ ಬೊಳುವಾರಿನಲ್ಲಿ ಗುರುವಾರ ನಡೆದ ಬಗ್ಗೆ ವರದಿಯಾಗಿದೆ.

ಶಾಸಕ ಸಂಜೀವ ಮಠಂದೂರು ಅವರ ಹೇಳಿಕೆಯೊಂದು ಬಿಜೆಪಿ ಕಾರ್ಯಕರ್ತರು ಮತ್ತು ಪುತ್ತಿಲ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿಗೆ ಕಾರಣವಾಗಿದ್ದು, ಶಾಸಕ ಸಂಜೀವ ಮಠಂದೂರು ಬುಧವಾರ ಸುದ್ದಿಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲರ ಹೆಸರು ಪ್ರಸ್ತಾಪಿಸದೆ ನೀಡಿದ 'ಮಳೆಗಾಲದ ಅಣಬೆ' ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಶನಿವಾರ ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮಿಸಲಿದ್ದು, ಅದರ ಪ್ರಚಾರಾರ್ಥ ಗುರುವಾರ ಸಂಜೆ ಬಿಜೆಪಿಯಿಂದ ಪುತ್ತೂರು ದರ್ಬೆ ವೃತ್ತದಿಂದ ಪ್ರಚಾರ ಜಾಥಾ ಏರ್ಪಡಿಸಲಾಗಿತ್ತು. ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಜಾಥಾಕ್ಕೆ ಚಾಲನೆ ನೀಡಿದ್ದರು. ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಜತೆಗಿದ್ದು, ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತವರ ಬೆಂಬಲಿಗರು ಕೂಡ ಭಾಗವಹಿಸಿದ್ದರು.

ನಗರದ ಮುಖ್ಯ ರಸ್ತೆಯಲ್ಲಿ ಅನ್ಯೋನ್ಯವಾಗಿಯೇ ಇದ್ದ ಕಾರ್ಯಕರ್ತರು ಬೊಳುವಾರು ತಲುಪುತ್ತಲೇ ಕೆರಳಿದರು. ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರು ಶಾಸಕರ ಮುಂದೆ ನಿಂತು, ಬುಧವಾರ ನೀವು ಹೇಳಿದ ಅಣಬೆ ಹೇಳಿಕೆಗೆ ಇನ್ನೂ ಸ್ಪಷ್ಟೀಕರಣ ಕೊಟ್ಟಿಲ್ಲ. ನೀವು ಯಾರನ್ನು ಆ ರೀತಿ ಕರೆದಿದ್ದೀರಿ ಎಂದು ಪ್ರಶ್ನಿಸಿದರು. ಮಠಂದೂರು ಆ ಬಗ್ಗೆ ಸ್ಪಷ್ಟೀಕರಣ ನೀಡಲು ಮುಂದಾಗುತ್ತಿದ್ದಂತೆ ಎರಡೂ ಕಡೆಯ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಶಾಸಕ ಸಂಜೀವ ಮಠಂದೂರು ನಿರ್ಗಮಿಸುತ್ತಿದ್ದಂತೆ, ಪರಿಸರದಲ್ಲಿ ಆತಂಕದ ವಾತಾವರಣ ನೆಲಸಿತ್ತು. ಆಗ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಬಂದು ಯುವಕರನ್ನು ಸಮಾಧಾನ ಮಾಡಿದರು.

ಬುಧವಾರ ಶಾಸಕ ಸಂಜೀವ ಮಠಂದೂರು ಸುದ್ದಿಗೋಷ್ಠಿ ಕರೆದಿದ್ದು, ಸಿದ್ಧತೆಗಳ ಬಗ್ಗೆ ವಿವರಿಸಿದ್ದರು. ಈ ನಡುವೆ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಾಸಕರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವಕಾಶ ಇದೆ. ಹೊಸ ಹೊಸ ವ್ಯಕ್ತಿಗಳು ಮುನ್ನೆಲೆಗೆ ಬರುತ್ತಾರೆ. ಮಳೆಗಾಲ ಬಂದಾಗ ಅಣಬೆಗಳು ಹುಟ್ಟಿಕೊಳ್ಳುತ್ತವೆ. ಮಳೆ ಹೋದಾಗ ಅಣಬೆ ಕೂಡ ಇರುವುದಿಲ್ಲ. ಯಾರೇ ಬ್ಯಾನರ್ ಹಾಕಲಿ, ಯಾರೇ ಟ್ವಿಟರ್ ಅಭಿಯಾನ ಮಾಡಲಿ ಬಿಜೆಪಿ ಅದನ್ನು ಸ್ವಾಗತಿಸುತ್ತದೆ. ಬಿಜೆಪಿಗೆ ಇದನ್ನೆಲ್ಲ ಜೀರ್ಣಿಸುವ ಶಕ್ತಿ ಇದೆ ಎಂದಿದ್ದರು.

ಈ ಹೇಳಿಕೆಯ ವೀಡಿಯೊ ವೈರಲ್ ಆಗುತ್ತಲೇ ಅರುಣ್ ಕುಮಾರ್ ಬೆಂಬಲಿಗರು ಕೆರಳಿದ್ದರು. ಶಾಸಕರು ಪುತ್ತಿಲರನ್ನು ಉದ್ದೇಶಿಸಿ ಪರೋಕ್ಷ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅನೇಕ ಬೆಂಬಲಿಗರು ಬಿಜೆಪಿ ಮುಖಂಡರಿಗೆ ಫೋನ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದರು.

ಪುತ್ತೂರಿನಿಂದ ಈ ಬಾರಿ ಅರುಣ್ ಕುಮಾರ್ ಪುತ್ತಿಲರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಸುತ್ತಿದ್ದು, ಅಮಿತ್ ಶಾ ಸೇರಿದಂತೆ ಪಕ್ಷದ ಉನ್ನತ ನಾಯಕರಿಗೆ ಟ್ವಿಟರ್ ಅಭಿಯಾನ ನಡೆಸಿದ್ದರು. ಪುತ್ತೂರಿಗೆ ಪುತ್ತಿಲ ಎಂಬ ಹೆಸರಿನಲ್ಲಿ ಈ ಅಭಿಯಾನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಅಮಿತ್ ಶಾ ಪುತ್ತೂರು ಭೇಟಿ ನಿಗದಿಯಾಗಿದ್ದು, ಪುತ್ತಿಲ ಬೆಂಬಲಿಗರು ದೊಡ್ಡ ದೊಡ್ಡ ಬ್ಯಾನರ್‌ಗಳನ್ನು ನಗರದ ನಾನಾ ಕಡೆ ಅಳವಡಿಸಿದ್ದು, ಅದರಲ್ಲಿ ಶಾಸಕ ಸಂಜೀವ ಮಠಂದೂರು ಅವರ ಭಾವಚಿತ್ರ ಕೈಬಿಟ್ಟಿದ್ದರು.

share
Next Story
X