Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭೂಕಂಪದಿಂದ ಟರ್ಕಿ 6 ಮೀಟರ್‌ನಷ್ಟು...

ಭೂಕಂಪದಿಂದ ಟರ್ಕಿ 6 ಮೀಟರ್‌ನಷ್ಟು ಸ್ಥಳಾಂತರ : ವರದಿ

9 Feb 2023 11:12 PM IST
share
ಭೂಕಂಪದಿಂದ ಟರ್ಕಿ 6 ಮೀಟರ್‌ನಷ್ಟು ಸ್ಥಳಾಂತರ : ವರದಿ

ಅಂಕಾರ, ಫೆ.9: ಸೋಮವಾರ ಮುಂಜಾನೆ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದ ಟರ್ಕಿ ಸುಮಾರು 6 ಮೀಟರ್‌ನಷ್ಟು ಸ್ಥಳಾಂತರಗೊಂಡಿರಬಹುದು ಎಂದು ಇಟಲಿಯ ಭೂಕಂಪಶಾಸ್ತ್ರಜ್ಞರು ಪ್ರತಿಪಾದಿಸಿದ್ದಾರೆ. ಭಾರೀ ಭೂಕಂಪವು ಟರ್ಕಿಯ ಭೂಪ್ರದೇಶದ ಅಡಿ ಇರುವ ಟೆಕ್ನೋಟಿಕ್‌ಪ್ಲೇಟ್‌ಗಳು (ಭೂಮಿಯ ಹೊರಪದರ ಮತ್ತು ಮೇಲ್ಭಾಗದ ಕವಚದ ದೈತ್ಯಾಕಾರದ ತುಣುಕು) ಸುಮಾರು 10 ಅಡಿಗಳಷ್ಟು ಚಲಿಸಿವೆ ಎಂದು ಆರಂಭದಲ್ಲಿ ಅಂದಾಜಿಸಲಾಗಿತ್ತು. ಆದರೆ ಸಿರಿಯಾಕ್ಕೆ ಹೋಲಿಸಿದರೆ, ಟರ್ಕಿ ಸುಮಾರು 5ರಿಂದ 6 ಮೀಟರ್‌ನಷ್ಟು ಸ್ಥಳಾಂತರಗೊಂಡಿರಬಹುದು. ಉಪಗ್ರಹ ರವಾನಿಸಿರುವ ಚಿತ್ರಗಳ ಪರಿಶೀಲನೆಯ ಬಳಿಕ ಸ್ಪಷ್ಟ ಮಾಹಿತಿ ಲಭಿಸಬಹುದು ಎಂದು ಇಟಲಿಯ ಪ್ರೊಫೆಸರ್ ಕಾರ್ಲೊ ಡೊಗ್ಲಿಯನಿ ಹೇಳಿದ್ದಾರೆ.

ಸೋಮವಾರ ಟರ್ಕಿ ಮತ್ತು ಸಿರಿಯಾದಲ್ಲಿ 5 ಭೂಕಂಪ ಹಾಗೂ 100ಕ್ಕೂ ಅಧಿಕ ಪಶ್ಚಾತ್‌ಕಂಪನಗಳು ಸಂಭವಿಸಿದ್ದರಿಂದ 16 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದು 11000ಕ್ಕೂ ಅಧಿಕ ಕಟ್ಟಡಗಳು ನೆಲಸಮಗೊಂಡಿವೆ. ನಿರಂತರವಾಗಿ ಘರ್ಷಣೆಗೊಳ್ಳುವ 4 ಪ್ಲೇಟ್‌ಗಳ (ಅನಾಟೊಲಿಯನ್, ಅರೇಬಿಕಾ, ಯುರೇಶ್ಯನ್ ಮತ್ತು ಆಫ್ರಿಕನ್ ಪ್ಲೇಟ್) ಛೇದಕದಲ್ಲಿ ಏಕಭೂಕಂಪದ ಅನುಕ್ರಮದ ಭಾಗವಾಗಿ ಸರಣಿ ಭೂಕಂಪ ಸಂಭವಿಸಿದೆ. ಬೃಹತ್ ಸೀಳುವಿಕೆ(ಛೇದಕ) 190 ಕಿ.ಮೀ ಉದ್ದ ಮತ್ತು 25 ಕಿ.ಮೀ ಅಗಲದ ಪ್ರದೇಶವನ್ನು ಒಳಗೊಂಡಿತ್ತು. ಇದು ಸಶಕ್ತವಾಗಿ ನೆಲವನ್ನು ನಡುಗಿಸಿದೆ ಮತ್ತು 9 ಗಂಟೆಯ ಅಂತರದಲ್ಲಿ ಎರಡು ಕಡೆ(ಟರ್ಕಿ ಮತ್ತು ಸಿರಿಯಾ) ರಭಸದಿಂದ ಮೇಲಕ್ಕೆ ಚಿಮ್ಮಿದೆ ಎಂದವರು ಹೇಳಿದ್ದಾರೆ. ಭೂಕಂಪದ ತೀವ್ರತೆಯ ಕುರಿತು ಉಲ್ಲೇಖಿಸಿದ ಅವರು, ಸುದೀರ್ಘವಾದ ಭೂಕಂಪವು, ಹಿಂದೆ ಕೆಲವು ಬಾರಿ ಸಂಭವಿಸಿದಂತೆ, ಹಲವು ದಿನ, ತಿಂಗಳವರೆಗೂ ಮುಂದುವರಿಯಬಹುದು ಎಂದರು.

share
Next Story
X