Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂತಿಮ ಅನುಮೋದನೆಗೂ ಮುನ್ನ ಅರಣ್ಯೇತರ...

ಅಂತಿಮ ಅನುಮೋದನೆಗೂ ಮುನ್ನ ಅರಣ್ಯೇತರ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ ಪರಿಸರ ಸಚಿವಾಲಯ

9 Feb 2023 11:54 PM IST
share
ಅಂತಿಮ ಅನುಮೋದನೆಗೂ ಮುನ್ನ ಅರಣ್ಯೇತರ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ ಪರಿಸರ ಸಚಿವಾಲಯ

ಹೊಸ ದಿಲ್ಲಿ: ಅಂತಿಮ ಅನುಮೋದನೆ ದೊರೆಯುವ ಮುನ್ನವೇ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಅರಣ್ಯೇತರ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಅವಕಾಶ ನೀಡಿದೆ ಎಂದು ವರದಿಯಾಗಿದೆ.

ಈ ನಿರ್ಣಯಕ್ಕೆ ಅನೇಕ ಕಾನೂನು ತಜ್ಞರು ಹಾಗೂ ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು Hindustan Times ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಕುರಿತು ಫೆಬ್ರವರಿ 3ರಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಪರಿಸರ ಸಚಿವಾಲಯವು, "ಅರಣ್ಯ ಪ್ರದೇಶ ಮತ್ತು ಅರಣ್ಯೇತರ ಪ್ರದೇಶಗಳಲ್ಲಿನ ಉದ್ದೇಶಪೂರ್ವಕ ಉಲ್ಲಂಘನೆಗಳನ್ನು ವಿಸ್ತೃತವಾಗಿ ಅಧ್ಯಯನ ಮಾಡಿರುವ ಅರಣ್ಯ ಸಲಹಾ ಸಮಿತಿಯು, ಅರಣ್ಯೇತರ ಪ್ರದೇಶದಲ್ಲಿ ಪ್ರತ್ಯೇಕ ಗಣಿಗಾರಿಕೆ ಯೋಜನೆಯನ್ನು ಖಾತ್ರಿಗೊಳಿಸದಿದ್ದರೆ, ಅಂತಹ ಅರಣ್ಯೇತರ ಪ್ರದೇಶ(ಭಾಗ)ವು ಈಗಾಗಲೇ ಅನುಮೋದನೆ ಪಡೆದಿರುವ ಪರಿಸ್ಥಿತಿಯನ್ನು ಸೃಷ್ಟಿಸಲಿದ್ದು, ಸುಪ್ರೀಂಕೋರ್ಟ್ ಆದೇಶವು ಒಳಗೊಂಡಿರುವ ನಿರ್ದೇಶನಗಳಿಗೆ ಅನುಗುಣವಾಗುವುದಿಲ್ಲ" ಎಂದು ಹೇಳಿದೆ.

"ಮೊದಲ ಹಂತದ ಅನುಮೋದನೆ ಪಡೆದ ನಂತರ ಪರಿಹಾರ ದಂಡ ಭರಿಸಿ ಮತ್ತು ಪರಿಸರ ಇಲಾಖೆಯ ಅನುಮೋದನೆ ಪಡೆದ ನಂತರ ರಾಜ್ಯ/ಕೇಂದ್ರಾಡಳಿತ ಪ್ರದೇಶ ಅಥವಾ ಸಂಬಂಧಿಸಿದ ಪ್ರಾಧಿಕಾರವು ಪ್ರತ್ಯೇಕ ಗಣಿಗಾರಿಕೆ ಯೋಜನೆಯನ್ನು ಸಿದ್ಧಪಡಿಸಬೇಕು ಅಥವಾ ಅರಣ್ಯೇತರ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವ ಮೊದಲು ಅಂತಹ ಅರಣ್ಯೇತರ ಪ್ರದೇಶದ ಗಣಿಗಾರಿಕೆ ಗುತ್ತಿಗೆಯನ್ನು ಅರಣ್ಯೇತರ ಪ್ರದೇಶದ ಪೂರ್ಣ ಅಥವಾ ಭಾಗಶಃ ಭಾಗಕ್ಕೆ ನೀಡಬೇಕು" ಎಂದು ಪತ್ರದಲ್ಲಿ ತಿಳಿಸಲಾಗಿದೆ ಎಂದು Hindustan Times ವರದಿ ಮಾಡಿದೆ.

ಇದಕ್ಕೂ ಮುನ್ನ 2021ರಲ್ಲಿ ಅರಣ್ಯ ಸಲಹಾ ಸಮಿತಿಯು ಕೆಲವು ನಿರ್ದಿಷ್ಟ ಷರತ್ತುಗಳನ್ನು ವಿಧಿಸಿ ಅರಣ್ಯೇತರ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿತ್ತು.

ಈ ನಡೆಯನ್ನು ಟೀಕಿಸಿರುವ ಪರಿಸರವಾದಿ ಹಾಗೂ ನೀತಿ ನಿರೂಪಣೆ ಸಂಶೋಧನಾ ಕೇಂದ್ರದಲ್ಲಿ ಕಾನೂನು ಸಂಶೋಧಕರಾಗಿರುವ ಕಾಂಚಿ ಕೊಹ್ಲಿ, "ಮೌಲ್ಯಮಾಪನ ಆಧಾರಿತ ಅನುಮೋದನೆ ನೀಡಬೇಕು ಎಂಬ ಶಾಸನಬದ್ಧ ನಿಯಂತ್ರಣವನ್ನು ಈ ನಿರ್ಣಯ ಕಡೆಗಣಿಸಿರುವ ಈ ನಿರ್ಣಯದ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬಹುದು. ಯಾವುದೇ ಗಣಿಗಾರಿಕೆ ಅಥವಾ ಮೂಲಸೌಕರ್ಯ ಯೋಜನೆಗಳ ಬಾಳಿಕೆ ಅರಣ್ಯ ಮತ್ತು ಅರಣ್ಯೇತರ ಪ್ರದೇಶಗಳನ್ನು ಅವಲಂಬಿಸಿರುತ್ತದೆ. ಒಂದು ವೇಳೆ, ಮೌಲ್ಯಮಾಪನ ಫಲಿತಾಂಶಗಳು ವಿಳಂಬವಾದರೆ ಅಥವಾ ಅನುಮೋದನೆ ದೊರೆಯದಿದ್ದರೆ, ಅರಣ್ಯ ಪ್ರದೇಶದ ಅತಿಕ್ರಮಣ ಮತ್ತು ಅಪಾಯದ ಕುರಿತ ಮೌಲ್ಯಮಾಪನಕ್ಕೂ ಮುನ್ನವೇ ಅರಣ್ಯೇತರ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದರೆ ಯೋಜನೆಗಳ ಅನುಷ್ಠಾನದ ಮೇಲೆ ದುಷ್ಪರಿಣಾಮ ಉಂಟಾಗಲಿದೆ. ಹೀಗಾಗಿ ಪ್ರಬಲ ಪರಿಸರ ತರ್ಕವನ್ನಾಧರಿಸದ ಪ್ರಕ್ರಿಯೆಯು ವ್ಯವಹಾರಕ್ಕೂ ಪೂರಕವಾಗಿರುವುದಿಲ್ಲ" ಎಂದು ಹೇಳಿದ್ದಾರೆ.

share
Next Story
X