ಕೆ.ಎಂ.ಕೆ.ಮಂಜನಾಡಿಗೆ 'ಸಾವಿತ್ರಿಬಾಯಿ ಫುಲೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ'

ಉಳ್ಳಾಲ, ಫೆ.10: ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯ ವಿಜಯಪುರಜಿಲ್ಲಾ ಘಟಕದ ವತಿಯಿಂದ ಸಾವಿತ್ರಿಬಾಯಿ ಪುಲೆ ಜನ್ಮದಿನದ ಪ್ರಯುಕ್ತ ನೀಡುವ 2022-23ನೇ ಸಾಲಿನ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉಳ್ಳಾಲದ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಎಂ.ಕೆ.ಮಂಜನಾಡಿ ಆಯ್ಕೆಯಾಗಿದ್ದಾರೆ.
ಫೆ.12ರಂದು ವಿಜಯಪುರದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಎಂ.ವಿಶ್ವೇಶ್ವರಯ್ಯ ಸಭಾಭವನದಲ್ಲಿ ನಡೆಯುವ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.
ಕ್ರಿಯಾಶೀಲ ಶಿಕ್ಷಕರಾದ ಕೆ.ಎಂ.ಕೆ.ಮಂಜನಾಡಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವುದರೊಂದಿಗೆ ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವರು.
Next Story