Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ ತಾಲೂಕು ಕಚೇರಿ ಎದುರು...

ಮೂಡಿಗೆರೆ ತಾಲೂಕು ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನೆರೆ ಸಂತ್ರಸ್ತರು

ಪುನರ್ವಸತಿ ಕಲ್ಪಿಸಲು ನಿರ್ಲಕ್ಷ್ಯ ಆರೋಪ

10 Feb 2023 6:56 PM IST
share
ಮೂಡಿಗೆರೆ ತಾಲೂಕು ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನೆರೆ ಸಂತ್ರಸ್ತರು
ಪುನರ್ವಸತಿ ಕಲ್ಪಿಸಲು ನಿರ್ಲಕ್ಷ್ಯ ಆರೋಪ

ಮೂಡಿಗೆರೆ, ಫೆ.10: ಅತಿವೃಷ್ಟಿಯಿಂದ ಮನೆ ಹಾಗೂ ಜಮೀನು ಕಳೆದುಕೊಂಡ ತಾಲೂಕಿನ ಮಲೆಮನೆ ಮತ್ತು ಮದುಗುಂಡಿ ನಿರಾಶ್ರಿತರಿಗೆ ಭೂಮಿ ಮಂಜೂರು ಮಾಡಿಕೊಡುವಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಶುಕ್ರವಾರ ಪಟ್ಟಣದ ತಾಲೂಕು ಕಚೇರಿ ಎದುರು ಅತಿವೃಷ್ಟಿ ಸಂತ್ರಸ್ತರು ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಿದ್ದು, ಈ ವೇಳೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಶುಕ್ರವಾರ ಬೆಳಿಗ್ಗೆ ತಾಲೂಕಿನ ಮಲೆಮನೆ ಹಾಗೂ ಮಧುಗುಂಡಿ ಗ್ರಾಮದ ಸುಮಾರು 11 ಕುಟುಂಬಗಳ ಸದಸ್ಯರು ದಿಢೀರ್ ಸಮಾವೇಶಗೊಂಡು 4 ವರ್ಷಗಳ ಹಿಂದೆ ಸಂಭವಿಸಿದ ಅತಿವೃಷ್ಟಿಯಿಂದ ಜಮೀನು, ಮನೆಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ತಾಲೂಕು ಆಡಳಿತ ಹಾಗೂ ಕ್ಷೇತ್ರದ ಶಾಸಕರು ಇದುವರೆಗೂ ಪರಿಹಾರ, ಪುನರ್ವಸತಿ ಕಲ್ಪಿಸಿಲ್ಲ ಎಂದು ಆರೋಪಿಸಿ ಧರಣಿ ನಡೆಸಿದರು. 

► ಆತ್ಮಹತ್ಯೆಗೆ ಯತ್ನ

ಧರಣಿ ವೇಳೆ ಸಂತ್ರಸ್ತರು ತಾಲೂಕು ಕಚೇರಿ ಒಳಗೆ ನುಗ್ಗಲು ಯತ್ನಿಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಸಂತ್ರಸ್ತರನ್ನು ತಡೆದರು. ಆಗ ಪೊಲೀಸರು ಹಾಗೂ ಧರಣಿ ನಿರತರೊಂದಿಗೆ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು. ಧರಣಿನಿರತರನ್ನು ಭೇಟಿಯಾಗಿ ಸಮಸ್ಯೆ ಆಲಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪೊಲೀಸರನ್ನು ತರಾಟೆಗೈದರು. ಇದೇ ವೇಳೆ ಸಂತ್ರಸ್ತರ ಪೈಕಿ ಕೆಲವರು ಸ್ಥಳದಲ್ಲಿ ಪರ್ಯಾಯ ಜಮೀನು ನೀಡಬೇಕು, ತಪ್ಪಿದಲ್ಲಿ ತಾಲೂಕು ಕಚೇರಿಯಲ್ಲೇ ವಿಷ ಕುಡಿದು ಸಾಯುತ್ತೇವೆ ಎಂದು ಎಚ್ಚರಿದರು. ಈ ವೇಳೆ ಕೆಲ ಧರಣಿ ನಿರತರು ಪೆಟ್ರೋಲ್‍ಅನ್ನು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಆಗ ಸ್ಥಳದಲ್ಲಿದ್ದ ಪೊಲೀಸರು ಪೆಟ್ರೋಲ್ ಕಿತ್ತುಕೊಂಡಿದ್ದರಿಂದ ಸಂಭವಿಸಲಿದ್ದ ಅಪಾಯ ತಪ್ಪಿತು.

ಧರಣಿ ಬಳಿಕ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದ್ದರಿಂದ ಧರಣಿ ಹಿಂಪಡೆಯಲಾಯಿತು. ನಿರಾಶ್ರಿತರಾದ ಸುರೇಶ್‍ಗೌಡ, ಚನ್ನಯ್ಯ, ರಾಜು, ಚಂದ್ರೇಗೌಡ ಮತ್ತಿತರರಿದ್ದರು.  

''ಮಲೆಮನೆ, ಮಧುಗುಂಡಿಯಲ್ಲಿ 11 ಕುಟುಂಬಗಳು ಅತಿವೃಷ್ಟಿಯಿಂದ ಮನೆ, ಜಮೀನು ಕಳೆದುಕೊಂಡು ಸಂತ್ರಸ್ಥರಾಗಿದ್ದಾರೆ. ಅನಾಹುತ ಸಂಭವಿಸಿ 4 ವರ್ಷ ಕಳೆದರೂ ಸಂತ್ರಸ್ಥರ ನೋವಿಗೆ ಅಧಿಕಾರಿಗಳು, ಶಾಸಕರು, ಜಿಲ್ಲಾ ಮಂತ್ರಿಗಳು ಸ್ಪಂದಿಸಿಲ್ಲ. ಕೇವಲ ಭರವಸೆಗಳು ಮಾತ್ರ ಸಿಗುತ್ತಿದ್ದು, ಮನೆ ನಿರ್ಮಾಣಕ್ಕೆ ಜಾಗ ನೀಡಿಲ್ಲ, ಜಮೀನಿಗೆ ಪರ್ಯಾಯ ಜಮೀನನ್ನೂ ನೀಡಿಲ್ಲ. ಕ್ಷೇತ್ರದ ಜನರು ಸಂಕಷ್ಟದಲ್ಲಿದ್ದರೂ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಮುಂದಿನ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕು ಉತ್ಸವದಲ್ಲಿ ಮೈಮರೆತಿದ್ದಾರೆ. ನಮಗೆ ಉತ್ಸವ ಬೇಡ, ಪರಿಹಾರ, ಪುನರ್ವಸತಿಬೇಕು. ಪುನರ್ವಸತಿ ಕಲ್ಪಿಸಲು ಕ್ರಮಕೈಗೊಳ್ಳದಿದ್ದಲ್ಲಿ ಮತ್ತೆ ಹೋರಾಟ ರೂಪಿಸಲಾಗುವುದು, ಆಗ ಸಂಭವಿಸುವ ಅನಾಹುತಗಳಿಗೆ ಅಧಿಕಾರಿಗಳು, ಶಾಸಕರು, ಜಿಲ್ಲಾಡಳಿತವೇ ಹೊಣೆ''

- ಅಶ್ವಥ್, ಸಂತ್ರಸ್ತ
 

share
Next Story
X