Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು...

ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಕೊಲ್ಲುತ್ತಿದ್ದೆ: ಹಿಂದುತ್ವ ನಾಯಕನ ವಿವಾದಾತ್ಮಕ ಹೇಳಿಕೆ

10 Feb 2023 8:42 PM IST
share
ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಕೊಲ್ಲುತ್ತಿದ್ದೆ: ಹಿಂದುತ್ವ ನಾಯಕನ ವಿವಾದಾತ್ಮಕ ಹೇಳಿಕೆ

ಹೈದರಾಬಾದ್:‌ ನಾಥೂರಾಂ ಗೋಡ್ಸೆ ಮಹಾತ್ಮಾ ಗಾಂಧಿಯನ್ನು ಗುಂಡಿಕ್ಕಿ ಕೊಂದಂತೆ ನಾನು ಡಾ. ಬಿ ಆರ್‌ ಅಂಬೇಡ್ಕರ್‌ ರನ್ನು ಕೊಲ್ಲುತ್ತಿದ್ದೆ ಎಂದು ಹಿಂದುತ್ವ ಸಂಘಟನೆಯಾದ ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ಹಮಾರಾ ಪ್ರಸಾದ್ ಎಂಬಾತ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾನೆ.  ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು (PD Act) ಪಿಡಿ ಆಕ್ಟ್ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್ ಎಸ್ ಪ್ರವೀಣ್ ಕುಮಾರ್ ಒತ್ತಾಯಿಸಿದ್ದಾರೆ ಎಂದು thenewsminute.com ವರದಿ ಮಾಡಿದೆ.

ಅಂಬೇಡ್ಕರ್ ಅವರು ಬರೆದಿರುವ ‘ಹಿಂದೂಯಿಸಂನ ಒಗಟುಗಳು: ಜನಸಾಮಾನ್ಯರನ್ನು ಪ್ರಬುದ್ಧಗೊಳಿಸಲು ಒಂದು ನಿರೂಪಣೆ’ ಎಂಬ ಪುಸ್ತಕದ ಬಗ್ಗೆ ಆಕ್ಷೇಪ ಎತ್ತಿರುವ ವೀಡಿಯೊದಲ್ಲಿ ಹಮಾರಾ ಪ್ರಸಾದ್, “ಈ ಮನುಷ್ಯ (ಅಂಬೇಡ್ಕರ್) ಸ್ಪಷ್ಟವಾಗಿ 12 ಡಿಗ್ರಿ (ಮಾಸ್ಟರ್ಸ್) ಹೊಂದಿರುವ ಬುದ್ಧಿಜೀವಿ. ರಾಷ್ಟ್ರನಾಯಕನಾದವನು ದೇಶದ ಎಲ್ಲ ಜನರನ್ನು ಸಮಾನವಾಗಿ ಕಾಣಬೇಕು. ಅವನು ಕಷ್ಟ ಅನುಭವಿಸಿದರೂ ಇತರರ ಮೇಲೆ ತನ್ನ ದ್ವೇಷವನ್ನು ತೋರಿಸಬಾರದು. ಆದರೆ, ಅಂಬೇಡ್ಕರ್ ಅವರು ಇಂತಹ “ಕಸ” ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅಂಬೇಡ್ಕರ್ ಬದುಕಿದ್ದಾಗ ನಾನು ಹುಟ್ಟಿದ್ದು, ಈ ಪುಸ್ತಕ ನನ್ನ ಕಣ್ಣಿಗೆ ಬಿದ್ದಿದ್ದರೆ, ಗೋಡ್ಸೆ ಗಾಂಧಿಗೆ ಹೇಗೆ ಗುಂಡು ಹಾರಿಸಿದನೋ ಹಾಗೆ ನಾನು ಅಂಬೇಡ್ಕರ್‌ಗೆ ಗುಂಡು ಹಾರಿಸುತ್ತಿದ್ದೆ.” ಎಂದು ಹೇಳಿದ್ದಾನೆ.  

ಈ ಹೇಳಿಕೆಯ ವಿಡಿಯೊದ ಕ್ಲಿಪ್ಪಿಂಗ್ ಅನ್ನು ಹಂಚಿಕೊಂಡಿರುವ ಆರ್ ಎಸ್ ಪ್ರವೀಣ್ ಕುಮಾರ್, ಬಿಆರ್ ಎಸ್ ಪಕ್ಷವನ್ನು ಉಲ್ಲೇಖಿಸಿ ಈ ‘ಮೂರ್ಖನʼನ ವಿರುದ್ಧ 153 ಎ ಮತ್ತು ಪಿಡಿ ಕಾಯ್ದೆ ಅಡಿಯಲ್ಲಿ ಸರ್ಕಾರ ಏಕೆ ಪ್ರಕರಣ ದಾಖಲಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.  

ಈತನ ವಿರುದ್ಧ ದಲಿತ ಕಾರ್ಯಕರ್ತ ಕಾರ್ತಿಕ್ ನವಯನ್ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ಆನ್‌ಲೈನ್ ದೂರು ದಾಖಲಿಸಿದ್ದಾರೆ. "ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ಮತ್ತು ಪರಿಶಿಷ್ಟ ಜಾತಿಯ ನಾಗರಿಕರ ಭಾವನೆಗಳನ್ನು ನೋಯಿಸುವ ವೀಡಿಯೊಗಳನ್ನು ರಚಿಸಿ ಹಂಚಿಕೆ ಮಾಡಿದ್ದಾರೆ" ಎಂದು ಅವರು ಆರೋಪಿಸಿದ್ದಾರೆ. 

ಅದಾಗ್ಯೂ, ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು, ಹಮಾರಾ ಪ್ರಸಾದ್ ವಿರುದ್ಧ ಇನ್ನೂ ಯಾವುದೇ ದೂರು ಬಂದಿಲ್ಲ ಎಂದು thenewsminute.com ಗೆ ತಿಳಿಸಿದ್ದಾರೆ. 

ತೆಲಂಗಾಣ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕೂಡಲೇ ಹಮಾರಾ ಪ್ರಸಾದ್ ಅವರನ್ನು ಬಂಧಿಸಬೇಕು ಎಂದು ಕೆಲವು ದಲಿತ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

share
Next Story
X