Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ​ಜಿಲ್ಲಾ ಕಾನೂನು ಪ್ರಾಧಿಕಾರದಿಂದ...

ಉಡುಪಿ ​ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ: ನ್ಯಾ.ಶರ್ಮಿಳಾ

10 Feb 2023 9:30 PM IST
share
ಉಡುಪಿ ​ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ: ನ್ಯಾ.ಶರ್ಮಿಳಾ

ಉಡುಪಿ, ಫೆ.10: ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಯ ಕಟ್ಟುನಿಟ್ಟಿನ ಅನುಷ್ಠಾನದ ಕುರಿತಂತೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸುವ ಬಗ್ಗೆ ಶೀಘ್ರದಲ್ಲಿ ಆದೇಶ ಬರುವ ಸಾಧ್ಯತೆಗಳಿದ್ದು, ಕಾಯ್ದೆಯ ಅಂಶಗಳನ್ನು ಉಲ್ಲಂಘಿಸಿ ಕಾರ್ಯ ನಿರ್ವಹಿಸುವವರಿಗೆ ಕಾರಾಗೃಹ ವಾಸ ಮತ್ತು ದಂಡದ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ  ಎಸ್. ಹೇಳಿದ್ದಾರೆ.

ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಶ್ರೀಕೃಷ್ಣ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿ.ಸಿ.ಪಿ.ಎನ್.ಡಿ.ಟಿ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ವೈದ್ಯಕೀಯ ಅಧಿಕಾರಿಗಳಿಗೆ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ ಕುರಿತು ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಅಪರಾಧವಾಗಿದ್ದು, ಗರ್ಭದಲ್ಲಿನ ಮಗುವಿನ ಆರೋಗ್ಯಕರ ಬೆಳವಣಿಗೆ ಮತ್ತು ಯಾವುದೇ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ತಿಳಿದು ಅದಕ್ಕೆ ಸೂಕ್ತ ಚಿಕಿತ್ಸೆ ನೀಡಲು ಮಾತ್ರ ಭ್ರೂಣ ಪತ್ತೆಗೆ ಕಾನೂನಿನಲ್ಲಿ ಅವಕಾಶವಿದೆ. ಇದಕ್ಕೆ ನಿಗದಿತ ನಮೂನೆಯಲ್ಲಿ ಪೋಷಕರ ಲಿಖಿತ ಒಪ್ಪಿಗೆ ಪತ್ರದ  ಅಗತ್ಯವಿದ್ದು,  ಇದನ್ನು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಉಲ್ಲಂಘಿಸಿ, ಕಾನೂನನ್ನು ದುರ್ಬಳಕೆ ಮಾಡಿಕೊಂಡಲ್ಲಿ ಮೊದಲ ಬಾರಿಗೆ 3 ವರ್ಷ ಜೈಲು ಮತ್ತು 10000 ರೂ. ದಂಡ ಹಾಗೂ ಇದು ಪುನರಾವರ್ತನೆಯಾದಲ್ಲಿ 5 ವರ್ಷ ಜೈಲು ಹಾಗೂ 50000 ರೂ.ವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದರು.

ಇತ್ತೀಚೆಗೆ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದು, ತಮಗೆ ಹೆಣ್ಣು ಮಕ್ಕಳು ಜನಿಸಲಿ ಎಂದು ಆಸೆ ಪಡುವ ಪೋಷಕರ ಸಂಖ್ಯೆಯೂ ಅಧಿಕವಾಗಿರುವುದು ಉತ್ತಮ ಬೆಳವಣಿಗೆ ಯಾಗಿದೆ. ಸಮಾಜದಲ್ಲಿ ಮಹಿಳೆ ಮತ್ತು ಪುರುಷರ ಲಿಂಗಾನುಪಾತ ಸಮಾನವಾಗಿರಲು ಇದರಿಂದ ಸಾಧ್ಯವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ ಬಗ್ಗೆ ಮಾಹಿತಿ ನೀಡುವ ಕರಪತ್ರ ಬಿಡುಗಡೆ ಮಾಡಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲೆಯಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಪ್ರಕರಣಗಳು ಅತ್ಯಂತ ಕಡಿಮೆ ಇದ್ದು, ಜಿಲ್ಲೆಯಲ್ಲಿನ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುತ್ತಿದೆ. ಪ್ರತೀ ತಿಂಗಳು ಜಿಲ್ಲಾ ಮಟ್ಟದ ಸಮಿತಿ ವತಿಯಿಂದ ಪರಿಶೀಲನಾ ಸಭೆಯಲ್ಲಿ ಸಹ  ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಪ್ರಸಾದಿನಿ, ಪ್ರಸೂತಿ ತಜ್ಞೆ ಡಾ.ಶಶಿಕಲಾ ಭಟ್, ರೇಡಿಯಾಲಾಜಿಸ್ಟ್ ಡಾ.ಅನಿತಾ ಎಸ್ ಪ್ರಭು ಮಾಹಿತಿ ನೀಡಿದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಲತಾ ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂ.ಜಿ. ರಾಮ ವಂದಿಸಿದರು.

share
Next Story
X