ಉಡುಪಿ: ಯಕ್ಷಗಾನ ಸಮ್ಮೇಳನದ ಉಗ್ರಾಣ ಮುಹೂರ್ತ

ಉಡುಪಿ: ಎಂಜಿಎಂ ಕಾಲೇಜಿನ ಎಎಲ್‌ಎನ್ ರಾವ್ ಕ್ರೀಡಾಂಗಣದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯ ಕನ್ನಡ ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಹಾಗೂ ಜಿಲ್ಲಾಡಳಿತದ ವತಿಯಿಂದ ನಡೆಯುವ ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಉಗ್ರಾಣ ಮುಹೂರ್ತ ಇಂದು ಸಂಜೆ ನೆರವೇರಿತು.
ಪ್ರಥಮ ಬಾರಿಗೆ ನಡೆಯುವ ಯಕ್ಷಗಾನ ಸಮ್ಮೇಳನದ ಸಮ್ಮೇಳನಾಧ್ಯಕ್ಷ ರಾಗಿ ಆಯ್ಕೆಯಾಗಿರುವ ಮಂಗಳೂರಿನ ಡಾ.ಎಂ.ಪ್ರಭಾಕರ ಜೋಶಿ ಅವರು ದೀಪ ಬೆಳಗಿಸುವ ಮೂಲಕ ಉಗ್ರಾಣ ಮುಹೂರ್ತ ನೆರವೇರಿಸಿದರು. ಸ್ವಾಗತ ಸಮಿತಿಯ ಅಧ್ಯಕ್ಷರಾದ ಶಾಸಕ ಕೆ.ರಘುಪತಿ ಭಟ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ಕಾರ್ಯಾಧ್ಯಕ್ಷ ಡಾ.ಜಿ.ಎಲ್ ಹೆಗಡೆ, ಪ್ರಧಾನ ಸಂಚಾಲಕ ಪಿ.ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಎಲ್ ಸಾಮಗ, ಯಕ್ಷಗಾನ ಸಮ್ಮೇಳನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
Next Story





