ಬ್ರಹ್ಮಾವರ: ಕರ್ನಾಟಕ ಪಬ್ಲಿಕ್ ಸ್ಕೂಲ್ ಕಟ್ಟಡಕ್ಕೆ ಶಿಲಾನ್ಯಾಸ

ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಬೆಂಗಳೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ (ಬ್ರಹ್ಮಾವರ ಬೋರ್ಡ್ ಸ್ಕೂಲ) ಇದರ ದಾನಿಗಳಾದ ಎಚ್.ಎಸ್. ಶೆಟ್ಟಿ ಅವರು ಕೊಡಮಾಡಿದ ಎರಡೂವರೆ ಕೋಟಿ ರೂ.ಗೂ ಅಧಿಕ ವೆಚ್ಚದ ಶಾಲಾ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ಬ್ರಹ್ಮಾವರದಲ್ಲಿ ನಡೆಯಿತು.
ಕಟ್ಟಡದ ಶಿಲಾನ್ಯಾಸವನ್ನು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಅಧ್ಯಕ್ಷರಾದ ಎಚ್.ಎಸ್. ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಉಪಾಧ್ಯಕ್ಷ ನಾಗರಾಜ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮೋಹನ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಪ್ರೌಢ ಶಾಲಾ ವಿಭಾಗದ ಅಧ್ಯಕ್ಷ ರಾಮಕೃಷ್ಣ, ಶಾಲಾಭಿವೃದ್ಧಿ ಸಮಿತಿ ಪ್ರಾಥಮಿಕ ವಿಭಾಗದ ಅಧ್ಯಕ್ಷ ಪಾಂಡುರಂಗ ಕುಲಾಲ್, ವಾರಂಬಳ್ಳಿ ಗ್ರಾಪಂ ಅಧ್ಯಕ್ಷೆ ನಾಗವೇಣಿ, ಚಾಂತಾರು ಗ್ರಾಪಂ ಅಧ್ಯಕ್ಷೆ ಬೇಬಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಡಯಟ್ ಉಪ ಪ್ರಾಂಶುಪಾಲ ಅಶೋಕ್ ಕಾಮತ್, ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ಪಿಯು ಕಾಲೇಜಿನ ಪ್ರಾಂಶುಪಾಲ ರವೀಂದ್ರ ಉಪಾಧ್ಯ, ಉಪ ಪ್ರಾಂಶುಪಾಲ ಬಿ.ಟಿ ನಾಯ್ಕ್, ಮುಖ್ಯೋಪಾಧ್ಯಾಯಿನಿ ದೇವ ಕುಮಾರಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
